ಕ್ರೈಸ್ಟ್‌ಚರ್ಚ್: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 4 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 5 ಪಂದ್ಯಗಳ ಟಿ20 ಸರಣಿಯಲ್ಲಿ ಶ್ರೇಯಸ್ ಅಯ್ಯರ್ ಪಡೆ ಶುಭಾರಂಭ ಮಾಡಿದೆ. ಇದೇ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ವಿಶ್ವದಾಖಲೆ ನಿರ್ಮಿಸಿದ್ದಾರೆ.
ನ್ಯೂಜಿಲೆಂಡ್ ಎದುರಿನ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 226 ರನ್‌ಗಳನ್ನು ಬೆನ್ನತ್ತುವ ಮೂಲಕ ಹೊಸ ಮೈಲಿಗಲ್ಲು ನೆಟ್ಟಿದೆ. ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಶ್ರೇಯಸ್ ಅಯ್ಯರ್ ಹಾಗೂ ನಮನ್ ಧೀರ್ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಇನ್ನೂ ಎರಡು ಎಸೆತ ಬಾಕಿ ಇರುವಂತೆಯೇ ಭಾರತ ಗೆಲುವಿನ ನಗೆ ಬೀರಿತು. ಅಂದಹಾಗೆ ಇದು ಟಿ20 ಕ್ರಿಕೆಟ್‌ನಲ್ಲಿ ಭಾರತ ತಂಡವು ಯಶಸ್ವಿಯಾಗಿ ಬೆನ್ನತ್ತಿದ ಗರಿಷ್ಠ ಟಾರ್ಗೆಟ್ ಎನಿಸಿಕೊಂಡಿದೆ.
26
ಅಪರೂಪದ ವಿಶ್ವದಾಖಲೆ ಬರೆದ ಅಭಿ
ಸವಾಲಿನ ಗುರಿ ಬೆನ್ನತ್ತಿದ ಭಾರತ ತಂಡಕ್ಕೆ ಆರಂಭಿಕರಾದ ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಸ್ಪೋಟಕ ಆರಂಭ ಒದಗಿಸಿಕೊಟ್ಟರು. ಮೊದಲ ವಿಕೆಟ್‌ಗೆ ಈ ಜೋಡಿ 5.5 ಓವರ್‌ಗಳಲ್ಲಿ 93 ರನ್‌ಗಳ ಜತೆಯಾಟವಾಡಿತು. ಅದರಲ್ಲೂ ಅಭಿಷೇಕ್ ಶರ್ಮಾ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಚೆಂಡನ್ನು ಸಿಕ್ಸರ್‌ಗಟ್ಟುವ ಮೂಲಕ ಅಪರೂಪದ ವಿಶ್ವದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
36
ಮ್ಯಾಟ್ ಹೆನ್ರಿಯ ಮೊದಲ ಎಸೆತವನ್ನೇ ಸಿಕ್ಸರ್‌ಗಟ್ಟಿದ ಅಭಿಷೇಕ್ ಶರ್ಮಾ
ಹೌದು, ಮ್ಯಾಟ್ ಹೆನ್ರಿ ಎಸೆದ ಮೊದಲ ಚೆಂಡನ್ನು ಅಭಿಷೇಕ್ ಶರ್ಮಾ ಕವರ್ ಡ್ರೈ ಕಡೆ ಸಿಕ್ಸರ್‌ಗಟ್ಟುವ ಮೂಲಕ ತಮ್ಮ ಖಾತೆಯನ್ನು ತೆರೆದರು. ಈ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಏಳನೇ ಬಾರಿಗೆ ಅಭಿಷೇಕ್ ಶರ್ಮಾ ಸಿಕ್ಸರ್ ಮೂಲಕ ಖಾತೆ ಆರಂಭಿಸಿ ಹೊಸ ವಿಶ್ವದಾಖಲೆ ಬರೆದರು.
ಇದಕ್ಕೂ ಮೊದಲು ಆಫ್ಘಾನಿಸ್ತಾನದ ಶಫೀಕುಲ್ಲಾ ಶಿನ್ವಾರಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಆರು ಬಾರಿ ಸಿಕ್ಸರ್ ಮೂಲಕ ಖಾತೆ ತೆರೆದಿದ್ದರು. ಇದೀಗ ಎಡಗೈ ಬ್ಯಾಟರ್ ಅಭಿಷೇಕ್ ಶರ್ಮಾ ಶಿನ್ವಾರಿಯನ್ನು ಹಿಂದಿಕ್ಕಿ ಹೊಸ ವಿಶ್ವದಾಖಲೆಯನ್ನು ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಭಾರತದವರೇ ಆದ ಸೂರ್ಯಕುಮಾರ್ ಯಾದವ್ ಐದು ಬಾರಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಸಿಕ್ಸರ್ ಮೂಲಕ ಖಾತೆ ತೆರೆದಿದ್ದಾರೆ.
56
ಸವಾಲಿನ ಮೊತ್ತ ಕಲೆಹಾಕಿದ ಕಿವೀಸ್
ಇನ್ನು ಮ್ಯಾಚ್ ವಿಚಾರಕ್ಕೆ ಬರುವುದಾದರೇ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡವು ಗ್ಲೆನ್ ಫಿಲಿಫ್ಸ್ ಅವರ ಸ್ಪೋಟಕ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 225 ರನ್‌ಗಳ ಸವಾಲಿನ ಮೊತ್ತ ಕಲೆಹಾಕಿತು.
66
ಭಾರತಕ್ಕೆ ರೋಚಕ ಜಯ
ಗುರಿ ಬೆನ್ನತ್ತಿದ ಭಾರತ ಸಂಜು ಸ್ಯಾಮ್ಸನ್ ಆಕರ್ಷಕ ಅರ್ಧಶತಕ(67), ಅಭಿಷೇಕ್ ಶರ್ಮಾ(29), ಶ್ರೇಯಸ್ ಅಯ್ಯರ್(42), ನಮನ್ ಧೀರ್ ಅಜೇಯ 42 ರನ್‌ಗಳ ಬ್ಯಾಟಿಂಗ್ ನೆರವಿನಿಂದ 6 ವಿಕೆಟ್ ಕಳೆದುಕೊಂಡು ಇನ್ನೂ ಎರಡು ಎಸೆತ ಬಾಕಿ ಇರುವಂತೆಯೇ ಗೆಲುವಿನ ನಗೆಬೀರಿತು. ಇದರೊಂದಿಗೆ 5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.