ಮುಂಬೈ: ಬಹುನಿರೀಕ್ಷಿತ ನ್ಯೂಜಿಲೆಂಡ್ ಎದುರಿನ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ 16 ಆಟಗಾರರನ್ನೊಳಗೊಂಡ ಭಾರತ ತಂಡ (Indian Cricket Team) ಪ್ರಕಟವಾಗಿದ್ದು, ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಮೊದಲ ಟೆಸ್ಟ್ ಪಂದ್ಯಕ್ಕೆ ಅಜಿಂಕ್ಯ ರಹಾನೆಗೆ (Ajinkya Rahane) ನಾಯಕತ್ವ ಪಟ್ಟ ಕಟ್ಟಲಾಗಿದೆ. ಮೊದಲ ಟೆಸ್ಟ್ ನವೆಂಬರ್ 25ರಿಂದ 29ರವರೆಗೆ ಕಾನ್ಪುರದ ಗ್ರೀನ್ ಪಾರ್ಕ್‌ನಲ್ಲಿ ನಡೆದರೆ, ಡಿಸೆಂಬರ್ 03ರಿಂದ 07ರವರೆಗೆ ಮುಂಬೈನ ವಾಂಖೆಡೆ ಮೈದಾನದಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ. #TeamIndia squad for NZ Tests: A Rahane (C), C Pujara (VC), KL Rahul, M Agarwal, S Gill, S Iyer, W Saha (WK), KS Bharat (WK), R Jadeja, R Ashwin, A Patel, J Yadav, I Sharma, U Yadav, Md Siraj, P Krishna *Virat Kohli will join the squad for the 2nd Test and will lead the team. pic.twitter.com/FqU7xdHpjQ
— BCCI (@BCCI) November 12, 2021
ನವೆಂಬರ್ 25ರಿಂದ 29ರವರೆಗೆ ಕಾನ್ಪುರದ ಗ್ರೀನ್ ಪಾರ್ಕ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಅಜಿಂಕ್ಯ ರಹಾನೆಗೆ ನಾಯಕತ್ವ ಪಟ್ಟ ಕಟ್ಟಲಾಗಿದ್ದು, ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಉಪನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.
28
ಆರಂಭಿಕ ಬ್ಯಾಟರ್‌ಗಳಾಗಿ ಕನ್ನಡದ ಜೋಡಿಯಾದ ಕೆ.ಎಲ್. ರಾಹುಲ್, ಮಯಾಂಕ್ ಅಗರ್‌ವಾಲ್ ಜತೆಗೆ ಶುಭ್‌ಮನ್ ಗಿಲ್ ಹೀಗೆ ಒಟ್ಟು ಮೂವರು ಆಟಗಾರರು ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.
38
ಇನ್ನು ಮಧ್ಯಮ ಕ್ರಮಾಂಕದಲ್ಲಿ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದಾರೆ. ಕೊಹ್ಲಿ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್‌ಗೆ ಆಡುವ ಹನ್ನೊಂದರ ಬಳಗದ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ.
48
ಇನ್ನುಳಿದಂತೆ ರಿಷಭ್ ಪಂತ್‌ಗೆ ವಿಶ್ರಾಂತಿ ನೀಡಲಾಗಿದ್ದು, ಅನುಭವಿ ವಿಕೆಟ್ ಕೀಪರ್ ವೃದ್ದಿಮಾನ್ ಸಾಹ ಹಾಗೂ ಇತ್ತೀಚೆಗಷ್ಟೇ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಅಮೋಘ ಪ್ರದರ್ಶನ ತೋರಿದ್ದ ಕೆ.ಎಸ್. ಭರತ್ ಟೀಂ ಇಂಡಿಯಾದಲ್ಲಿ ಮಣೆ ಹಾಕಲಾಗಿದೆ.
58
ಇನ್ನು 8 ಜನ ಬೌಲರ್‌ಗಳಿಗೆ ತಂಡದಲ್ಲಿ ಮಣೆ ಹಾಕಲಾಗಿದ್ದು, ಸ್ಪಿನ್ ವಿಭಾಗದಲ್ಲಿ ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್ ಹಾಗೂ ಜಯಂತ್ ಯಾದವ್ ತಂಡದಲ್ಲಿ ಸ್ಥಾನ ಗಿಟ್ಟಿಕೊಂಡಿದ್ದಾರೆ.
68
ಇನ್ನು ವೇಗದ ಬೌಲಿಂಗ್ ವಿಭಾಗದಲ್ಲಿ ಅನುಭವಿ ಬೌಲರ್‌ಗಳಾದ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದ್ದು, ಕನ್ನಡದ ವೇಗಿ ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ, ಉಮೇಶ್ ಯಾದವ್ ಹಾಗೂ ಮೊಹಮ್ಮದ್ ಸಿರಾಜ್ ತಂಡ ಕೂಡಿಕೊಂಡಿದ್ದಾರೆ.
78
ಕಿವೀಸ್ ಎದುರಿನ ಮೊದಲ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕೊಹ್ಲಿ ವಿಶ್ರಾಂತಿ ಬಯಸಿದ್ದು, ಡಿಸೆಂಬರ್ 03ರಿಂದ 07ರವರೆಗೆ ಮುಂಬೈನ ವಾಂಖೆಡೆ ಮೈದಾನದಲ್ಲಿ ಎರಡನೇ ಟೆಸ್ಟ್ ಪಂದ್ಯದ ವೇಳೆಗೆ ತಂಡವನ್ನು ಮುನ್ನಡೆಸಲಿದ್ದಾರೆ.
88
ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ತವರಿನಲ್ಲಿ ನ್ಯೂಜಿಲೆಂಡ್ ಎದುರು 3 ಪಂದ್ಯಗಳ ಟಿ20 ಸರಣಿಯನ್ನಾಡಲಿದ್ದು, ನವೆಂಬರ್ 17ರಿಂದ ಚುಟುಕು ಕ್ರಿಕೆಟ್ ಸರಣಿ ಆರಂಭವಾಗಲಿದ್ದು, ರೋಹಿತ್ ಶರ್ಮಾ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ.