ಅನುಷ್ಕಾ ಶರ್ಮಾ ಪ್ರಗ್ನೆಂಟ್, ಎರಡನೇ ಮಗುವಿನ ನಿರೀಕ್ಷೆಯಲ್ಲಿ ಕಿಂಗ್ ಕೊಹ್ಲಿ..?

First Published | Sep 30, 2023, 12:48 PM IST

ಬೆಂಗಳೂರು: ಸೆಲಿಬ್ರಿಟಿ ಜೋಡಿ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ತಮ್ಮ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಲು ಮುಂದಾಗಿದ್ದಾರೆ. ವರದಿಗಳ ಪ್ರಕಾರ ಅನುಷ್ಕಾ ಶರ್ಮಾ ಗರ್ಭಿಣಿಯಾಗಿದ್ದು, ವಿರುಷ್ಕಾ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಹಾಗೂ ಅವರ ಪತಿ ಆಧುನಿಕ ಕ್ರಿಕೆಟ್‌ನ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಜಗತ್ತಿನ ತಾರಾ ಜೋಡಿಗಳಲ್ಲಿ ಒಂದು ಎನಿಸಿಕೊಂಡಿದ್ದಾರೆ. ಇವರಿಗೆ ಜಗತ್ತಿನಾದ್ಯಂತ ಕೋಟ್ಯಾಂತರ ಅಭಿಮಾನಿಗಳಿದ್ದಾರೆ.

ಸದ್ಯ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಮುಂಬರುವ ವಿಶ್ವಕಪ್ ಟೂರ್ನಿಗಾಗಿ ಸಜ್ಜಾಗುತ್ತಿದ್ದಾರೆ. ಹೀಗಿರುವಾಗಲೇ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಜೋಡಿ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ಶೀಘ್ರದಲ್ಲೇ ನೀಡುವ ಸಾಧ್ಯತೆಯಿದೆ.

Tap to resize

ಹೌದು, ಇತ್ತೀಚೆಗಿನ ಕೆಲವು ವರದಿಗಳ ಪ್ರಕಾರ ವಿರುಷ್ಕಾ ದಂಪತಿ ತಮ್ಮ ಎರಡನೇ ಮಗುವಿನ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಈ ಸುದ್ದಿ ವಿರುಷ್ಕಾ ಅಭಿಮಾನಿಗಳ ಪಾಲಿಗೆ ಹೊಸ ಥ್ರಿಲ್ ಅನ್ನುಂಟು ಮಾಡಿದೆ.

ಹಿಂದುಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಅನುಷ್ಕಾ ಶರ್ಮಾ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಕಳೆದ ಬಾರಿಯಂತೆ ಈ ಬಾರಿ ಕೂಡಾ ಅವರು ಕೊನೆಯ ಹಂತದಲ್ಲಿ ಔಪಚಾರಿಕವಾಗಿ ಈ ವಿಚಾರವನ್ನು ಬಹಿರಂಗ ಪಡಿಸಲಿದ್ದಾರೆ ಎಂದು ವರದಿ ಮಾಡಿದೆ.

ಈ ವರದಿಯಲ್ಲಿ ಮುಂದುವರೆದು, "ಇದೇನು ಕಾಕತಾಳೀವೇನಲ್ಲ. ಅವರು ಗಾಳಿಸುದ್ದಿಗಳಿಂದ ದೂರವಿರುವ ಉದ್ದೇಶದಿಂದ ಅನುಷ್ಕಾ ಶರ್ಮಾ ಸಾರ್ವಜನಿಕವಾಗಿ ಕಾಣಿಸುತ್ತಿಲ್ಲ" ಎಂದು ವರದಿಯಾಗಿದೆ.
 

ಇನ್ನು ಕೆಲವು ದಿನಗಳ ಹಿಂದಷ್ಟೇ ವಿರುಷ್ಕಾ ದಂಪತಿ ಮುಂಬೈನಲ್ಲಿರುವ ಪ್ರಖ್ಯಾತ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವಿಚಾರವನ್ನು ಈಗಲೇ ಬಹಿರಂಗ ಪಡಿಸುವುದು ಬೇಡ. ಕೆಲ ಸಮಯದ ಬಳಿಕ ತಾವೇ ಈ ವಿಷಯವನ್ನು ಹೊರ ಜಗತ್ತಿಗೆ ತಿಳಿಸಲಿದ್ದೇವೆ ಎಂದು ಮನವಿ ಮಾಡಿಕೊಂಡಿದ್ದರು.

2021ರ ಜನವರಿಯಲ್ಲಿ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ವಾಮಿಕಾ ಎನ್ನುವ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ಇದುವರೆಗೂ ವಾಮಿಕಾ ಮುಖವನ್ನು ವಿರುಷ್ಕಾ ಜೋಡಿ ಜಗತ್ತಿಗೆ ತೋರಿಸಿಲ್ಲ ಎನ್ನುವುದು ವಿಶೇಷ.

ಎರಡನೇ ಮಗುವಿನ ಸ್ವಾಗತಕ್ಕೂ ಮುನ್ನ ವಿರಾಟ್ ಕೊಹ್ಲಿ, ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಕಪ್ ಗೆದ್ದು ಕೊಡಲು ತುದಿಗಾಲಿನಲ್ಲಿ ನಿಂತಿದ್ದಾರೆ

Latest Videos

click me!