Ashes Series 2021: ಅಡಿಲೇಡ್ ಟೆಸ್ಟ್ ಪಂದ್ಯಕ್ಕೆ 12 ಆಟಗಾರರನ್ನೊಳಗೊಂಡ ಇಂಗ್ಲೆಂಡ್ ತಂಡ ಪ್ರಕಟ

Suvarna News   | Asianet News
Published : Dec 15, 2021, 06:20 PM IST

ಲಂಡನ್‌: ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ (Australia vs England) ನಡುವಿನ ಆ್ಯಷನ್‌ ಟೆಸ್ಟ್ ಸರಣಿಯ (Ashes Test Series) ಎರಡನೇ ಪಂದ್ಯಕ್ಕೆ ಇದೀಗ ಕ್ಷಣಗಣನೆ ಆರಂಭವಾಗಿದ್ದು, ಅಡಿಲೇಡ್ ಟೆಸ್ಟ್ (Adelaide Test) ಪಂದ್ಯ ಆರಂಭಕ್ಕೂ ಮುನ್ನ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು 12 ಆಟಗಾರರನ್ನೊಳಗೊಂಡ ತಂಡ ಪ್ರಕಟಿಸಿದ್ದು, ಅನುಭವಿ ವೇಗಿ ಜೇಮ್ಸ್‌ ಆ್ಯಂಡರ್‌ಸನ್ (James Anderson) ತಂಡ ಕೂಡಿಕೊಂಡಿದ್ದಾರೆ. ಇನ್ನು ಮತ್ತೋರ್ವ ವೇಗಿ ಸ್ಟುವರ್ಟ್ ಬ್ರಾಡ್ (Stuart Broad) ಕೂಡಾ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

PREV
17
Ashes Series 2021: ಅಡಿಲೇಡ್ ಟೆಸ್ಟ್ ಪಂದ್ಯಕ್ಕೆ 12 ಆಟಗಾರರನ್ನೊಳಗೊಂಡ ಇಂಗ್ಲೆಂಡ್ ತಂಡ ಪ್ರಕಟ

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ ನಡುವಿನ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಅಡಿಲೇಡ್‌ ಓವಲ್ ಮೈದಾನ ಆತಿಥ್ಯವನ್ನು ವಹಿಸಿದೆ. ಡಿಸೆಂಬರ್ 16ರಿಂದ ಉಭಯ ತಂಡಗಳ ನಡುವಿನ ಎರಡನೇ ಆ್ಯಷಸ್ ಸರಣಿ ಆರಂಭವಾಗಲಿದೆ.
 

27

ಈಗಾಗಲೇ ಬ್ರಿಸ್ಬೇನ್‌ನ ಗಾಬಾ ಟೆಸ್ಟ್ ಪಂದ್ಯದಲ್ಲಿ ಆಘಾತಕಾರಿ ಸೋಲು ಕಂಡಿರುವ ಪ್ರವಾಸಿ ಇಂಗ್ಲೆಂಡ್ ತಂಡವು ಐದು ಪಂದ್ಯಗಳ ಆ್ಯಷಸ್ ಸರಣಿಯಲ್ಲಿ 0-1ರ ಹಿನ್ನೆಡೆಯಲ್ಲಿದೆ. ಹೀಗಾಗಿ ಎರಡನೇ ಟೆಸ್ಟ್ ನಲ್ಲಿ ಆತಿಥೇಯ ಕಾಂಗರೂ ಪಡೆಗೆ ತಿರುಗೇಟು ನೀಡುವ ಲೆಕ್ಕಾಚಾರದಲ್ಲಿದೆ ಜೋ ರೂಟ್ ಪಡೆ.
 

37

ಹೀಗಾಗಿ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಮಾರ್ಕ್‌ ವುಡ್‌ ಅವರನ್ನು ಹೊರಗಿಟ್ಟು ಅನುಭವಿ ವೇಗಿ ಜೇಮ್ಸ್‌ ಆ್ಯಂಡರ್‌ಸನ್‌ಗೆ ಹನ್ನೆರಡರ ಬಳಗದಲ್ಲಿ ಮಣೆ ಹಾಕಲಾಗಿದೆ. ಇದರ ಜತೆಗೆ ಸ್ಟುವರ್ಟ್ ಬ್ರಾಡ್ ಕೂಡಾ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. 

47

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ ಇತಿಹಾಸದಲ್ಲಿ ಜೇಮ್ಸ್ ಆ್ಯಂಡರ್‌ಸನ್ ಹಾಗೂ ಸ್ಟುವರ್ಟ್‌ ಬ್ರಾಡ್ ಜೋಡಿ ಒಟ್ಟಾಗಿ 1,156 ಬಲಿ ಪಡೆದಿವೆ. ಇದೀಗ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಈ ಜೋಡಿ ಆಸೀಸ್ ಬ್ಯಾಟರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ.
 

57

ಮಾರ್ಕ್‌ ವುಡ್‌ ಗಾಬಾ ಟೆಸ್ಟ್ ಪಂದ್ಯದಲ್ಲಿ ಉತ್ತಮ ಪ್ರದರ್ಶನವನ್ನೇ ತೋರಿದ್ದರು. ಇದರ ಹೊರತಾಗಿಯೂ ಇಂಗ್ಲೆಂಡ್ ಮ್ಯಾನೇಜ್‌ಮೆಂಟ್, ಮಾರಕ ವೇಗಿ ಮಾರ್ಕ್‌ ವುಡ್‌ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹಗಲು-ರಾತ್ರಿ ಟೆಸ್ಟ್‌ ಪಂದ್ಯಕ್ಕೆ ಸಂಪೂರ್ಣ ಫಿಟ್ ಆಗುವ ಉದ್ದೇಶದಿಂದ ಜೇಮ್ಸ್‌ ಆ್ಯಂಡರ್‌ಸನ್ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದರು.

67

ಇನ್ನುಳಿದಂತೆ ಬ್ರಿಸ್ಬೇನ್ ಟೆಸ್ಟ್‌ ಪಂದ್ಯದಲ್ಲಿ ನೀರಸ ಪ್ರದರ್ಶನ ತೋರಿದ ಹೊರತಾಗಿಯೂ ಜಾಕ್ ಲೀಚ್ 12ರ ಬಳಗದಲ್ಲಿ ಸ್ಥಾನ ಉಳಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಅಡಿಲೇಡ್ ಪಿಚ್‌ ಕೊಂಚ ಸ್ಪಿನ್ನರ್‌ಗಳಿಗೆ ನೆರವಾಗುವ ಸಾಧ್ಯತೆಯಿದ್ದು, ಈ ಕಾರಣಕ್ಕಾಗಿ ಲೀಚ್‌ಗೆ ಮಣೆಹಾಕಲಾಗಿದೆ ಎನ್ನಲಾಗಿದೆ.
 

77

ಅಡಿಲೇಡ್ ಟೆಸ್ಟ್‌ಗೆ ಇಂಗ್ಲೆಂಡ್ 12 ಆಟಗಾರರ ತಂಡ ಹೀಗಿದೆ ನೋಡಿ: ಜೋ ರೂಟ್‌, ಬೆನ್ ಸ್ಟೋಕ್ಸ್‌, ರೋರಿ ಬರ್ನ್ಸ್‌, ಜೋಸ್ ಬಟ್ಲರ್, ಹಸೀಬ್ ಹಮೀದ್, ಡೇವಿಡ್ ಮಲಾನ್, ಓಲಿ ಪೋಪ್‌, ಕ್ರಿಸ್ ವೋಕ್ಸ್, ಓಲಿ ರಾಬಿನ್‌ಸನ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆ್ಯಂಡರ್‌ಸನ್, ಜಾಕ್ ಲೀಚ್.
 

Read more Photos on
click me!

Recommended Stories