ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವು ಹೈದರಾಬಾದ್‌ನ ಶ್ರೀ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ಆರಂಭವಾಗಿದೆ.
ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್‌ಗೆ ಶಾಕ್ ನೀಡುವಲ್ಲಿ ಭಾರತದ ಕಿಲಾಡಿ ಸ್ಪಿನ್ ಜೋಡಿಯಾಗಿರುವ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಯಶಸ್ವಿಯಾಗಿದ್ದಾರೆ.
ಹೌದು, ಇದೀಗ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಜೋಡಿಯ ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಪರ ಗರಿಷ್ಠ ವಿಕೆಟ್ ಕಬಳಿಸಿದ ಬೌಲಿಂಗ್ ಜೋಡಿ ಎನ್ನುವ ದಾಖಲೆ ಬರೆಯುವಲ್ಲಿ ಯಶಸ್ವಿಯಾಗಿದೆ.
ಅಶ್ವಿನ್-ಜಡೇಜಾ ಜೋಡಿಯು ಇದೀಗ ಭಾರತದ ಸ್ಪಿನ್ ದಂತಕಥೆಗಳೆನಿಸಿರುವ ಅನಿಲ್ ಕುಂಬ್ಳೆ ಹಾಗೂ ಹರ್ಭಜನ್ ಸಿಂಗ್ ಜೋಡಿಯ ದಾಖಲೆ ಮುರಿದಿದ್ದಾರೆ. ಕುಂಬ್ಳೆ ಹಾಗೂ ಭಜ್ಜಿ ಜೋಡಿಯು ಒಟ್ಟಾಗಿ ಭಾರತ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ 501 ಬಲಿ ಪಡೆದಿದ್ದರು.
501 ಟೆಸ್ಟ್ ವಿಕೆಟ್‌ಗಳ ಪೈಕಿ ಕನ್ನಡಿಗ ಅನಿಲ್ ಕುಂಬ್ಳೆ 281 ವಿಕೆಟ್ ಕಬಳಿಸಿದರೆ, ಅನುಭವಿ ಆಫ್‌ಸ್ಪಿನ್ನರ್ ಎನಿಸಿಕೊಂಡಿದ್ದ ಹರ್ಭಜನ್ ಸಿಂಗ್ 220 ಟೆಸ್ಟ್ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದರು.
ಇದೀಗ ರವಿಚಂದ್ರನ್ ಅಶ್ವಿನ್ ಹಾಗೂ ಹರ್ಭಜನ್ ಸಿಂಗ್ ಜೋಡಿಯು ಕೇವಲ 50 ಟೆಸ್ಟ್ ಪಂದ್ಯಗಳನ್ನಾಡಿ ಭಜ್ಜಿ-ಕುಂಬ್ಳೆ ರೆಕಾರ್ಡ್ ಮುರಿದಿದ್ದಾರೆ. ಇನ್ನು ಅಶ್ವಿನ್ ಇದೀಗ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 150 ವಿಕೆಟ್ ಕಬಳಿಸಿದ ಭಾರತದ ಮೊದಲ ಬೌಲರ್ ಎನಿಸಿದ್ದಾರೆ.