Asia Cup 2025: ಸೂಪರ್ 4 ಪಾಕಿಸ್ತಾನ ಎದುರಿನ ಪಂದ್ಯಕ್ಕೂ ಮುನ್ನ ಭಾರತಕ್ಕೆ ಬಿಗ್ ಶಾಕ್! ಸ್ಟಾರ್ ಕ್ರಿಕೆಟರ್ ಆಡೋದೇ ಡೌಟ್

Published : Sep 20, 2025, 01:45 PM IST

ದುಬೈ: 2025ರ ಏಷ್ಯಾಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯಗಳು ಮುಕ್ತಾಯವಾಗಿದ್ದು, ಇಂದಿನಿಂದ ಸೂಪರ್ 4 ಹಂತದ ಪಂದ್ಯಾಟಗಳು ಆರಂಭವಾಗಿವೆ. ಹೀಗಿರುವಾಗಲೇ ಟೀಂ ಇಂಡಿಯಾ ಪಾಳಯದಲ್ಲಿ ಹೊಸದೊಂದು ಆತಂಕ ಶುರುವಾಗಿದೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ. 

PREV
17
ಒಮಾನ್ ಎದುರು ಗೆದ್ದ ಭಾರತ

ಏಷ್ಯಾಕಪ್ ಟೂರ್ನಿಯ ಗ್ರೂಪ್ ಹಂತದ ಕೊನೆಯ ಪಂದ್ಯದಲ್ಲಿ ಒಮಾನ್ ಎದುರು ಟೀಂ ಇಂಡಿಯಾ 21 ರನ್‌ಗಳ ಸುಲಭ ಗೆಲುವು ಸಾಧಿಸಿದೆ. ಈ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿ 'ಎ' ಗುಂಪಿನ ಅಗ್ರಸ್ಥಾನಿಯಾಗಿ ಸೂಪರ್ 4 ಹಂತಕ್ಕೆ ಲಗ್ಗೆಯಿಟ್ಟಿದೆ.

27
ಸೂಪರ್ 4 ಹಂತಕ್ಕೆ ಲಗ್ಗೆಯಿಟ್ಟ ಭಾರತ

ಇನ್ನು ಇದೀಗ ಭಾರತ ತಂಡವು ಸೆಪ್ಟೆಂಬರ್ 21ರಂದು ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿ ಬದ್ದ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಮೈದಾನ ಆತಿಥ್ಯ ವಹಿಸಿದೆ.

37
ಭಾರತದ ಪಾಳಯದಲ್ಲಿ ಆತಂಕ

ಗ್ರೂಪ್ ಹಂತದಲ್ಲಿ ಪಾಕಿಸ್ತಾನ ಎದುರು 7 ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸಿದ್ದ ಸೂರ್ಯಕುಮಾರ್ ಯಾದವ್ ಪಡೆ, ಇದೀಗ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ. ಹೀಗಿರುವಾಗಲೇ ಭಾರತದ ಪಾಳಯದಲ್ಲಿ ಆತಂಕವೊಂದು ಮನೆ ಮಾಡಿದೆ.

47
ಅಕ್ಷರ್ ಪಟೇಲ್‌ಗೆ ಗಾಯ

ಹೌದು, ಒಮಾನ್ ಎದುರಿನ ಪಂದ್ಯದ ವೇಳೆ ಕ್ಷೇತ್ರರಕ್ಷಣೆ ಮಾಡುವ ಸಂದರ್ಭದಲ್ಲಿ ಹಮ್ಮದ್ ಮಿರ್ಝಾ ಬಾರಿಸಿದ ಚೆಂಡು ಅಕ್ಷರ್ ಪಟೇಲ್ ತಲೆಗೆ ಅಪ್ಪಳಿಸಿದ್ದು, ನೋವು ತಾಳಲಾರದೇ ಮೈದಾನ ತೊರೆದರು.

57
ಗಾಯದ ಅಪ್‌ಡೇಟ್ ಕೊಟ್ಟ ಕೋಚ್

ಭಾರತ ತಂಡವು 15ನೇ ಓವರ್ ಬೌಲಿಂಗ್ ಮಾಡುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಈ ಘಟನೆಯ ಕುರಿತಂತೆ ಟೀಂ ಇಂಡಿಯಾ ಬೌಲಿಂಗ್ ಕೋಚ್ ಟಿ ದಿಲೀಪ್ ಮಾಹಿತಿ ಹಂಚಿಕೊಂಡಿದ್ದು, ಮೇಲ್ನೋಟಕ್ಕೆ ಅವರು ಚೆನ್ನಾಗಿದ್ದಾರೆ. ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

67
ಅಕ್ಷರ್ ಫಿಟ್ನೆಸ್ ಬಗ್ಗೆ ಅನುಮಾನ

ಆದರೆ ಭಾರತ ತಂಡವು ಈ ಘಟನೆ ನಡೆದು ಕೇವಲ 48 ಗಂಟೆಯೊಳಗೆ ಪಾಕಿಸ್ತಾನ ಎದುರಿನ ಪಂದ್ಯಕ್ಕೆ ಸಜ್ಜಾಗಬೇಕಿದೆ. ಹೀಗಾಗಿ ಅಕ್ಷರ್ ಪಟೇಲ್ ಫಿಟ್ನೆಸ್‌ ಕುರಿತಂತೆ ಪ್ರಶ್ನೆಗಳು ಏಳಲಾರಂಭಿಸಿವೆ.

77
ಪಾಕ್‌ ಎದುರಿನ ಪಂದ್ಯದಿಂದ ಔಟ್

ಒಂದು ವೇಳೆ ಪಾಕಿಸ್ತಾನ ಎದುರಿನ ಪಂದ್ಯಕ್ಕೆ ಅಕ್ಷರ್ ಪಟೇಲ್ ಅಲಭ್ಯವಾದರೇ, ವರುಣ್ ಚಕ್ರವರ್ತಿ ಹಾಗೂ ಕುಲ್ದೀಪ್ ಯಾದವ್ ತಜ್ಞ ಸ್ಪಿನ್ನರ್‌ಗಳಾಗಿ ಕಣಕ್ಕಿಳಿಯಲಿದ್ದು, ಅಕ್ಷರ್ ಪಟೇಲ್ ಸ್ಥಾನಕ್ಕೆ ಮತ್ತೋರ್ವ ವೇಗಿ ಭಾರತದ ಅಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

Read more Photos on
click me!

Recommended Stories