ಬೆಂಗಳೂರು: ಏಷ್ಯಾಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಆದರೆ ಹಾಲಿ ಚಾಂಪಿಯನ್ ಭಾರತ ತಂಡದ ಘೋಷಣೆ ಇನ್ನೂ ಆಗಿಲ್ಲ. ಕೆಲವೇ ದಿನಗಳಲ್ಲಿ ತಂಡದ ಅಂತಿಮ ಪಟ್ಟಿ ಹೊರಬೀಳಲಿದೆ. ಏಷ್ಯಾಕಪ್ ಟೂರ್ನಿಗೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ.
2025ರ ಏಷ್ಯಾಕಪ್ ಟೂರ್ನಿಗೆ ಕೌಂಟ್ ಡೌನ್ ಶುರುವಾಗಿದೆ. ಸೆಪ್ಟೆಂಬರ್ 09ರಿಂದ ಅಧಿಕೃತವಾಗಿ ಏಷ್ಯಾಕಪ್ ಟೂರ್ನಿಗೆ ಚಾಲನೆ ಸಿಗಲಿದ್ದು, ಏಷ್ಯಾದ 8 ಬಲಿಷ್ಠ ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ.
210
ಹಾಲಿ ಚಾಂಪಿಯನ್ ಭಾರತ ಈ ಬಾರಿ ಕೂಡಾ ಏಷ್ಯಾಕಪ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ. ಆದರೆ ಇದುವರೆಗೂ ಏಷ್ಯಾಕಪ್ ಟೂರ್ನಿಗೆ ಬಿಸಿಸಿಐ ಅಧಿಕೃತವಾಗಿ ಭಾರತ ತಂಡವನ್ನು ಪ್ರಕಟಿಸಿಲ್ಲ.
310
ಮುಂದಿನ ವರ್ಷ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು, ಏಷ್ಯಾಕಪ್ ಟೂರ್ನಿಯನ್ನು ಈ ಬಾರಿ ಟಿ20 ಮಾದರಿಯಲ್ಲಿ ನಡೆಸಲು ಆಯೋಜಕರು ತೀರ್ಮಾನಿಸಿದೆ.
ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅನುಫಸ್ಥಿತಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುವ ದೊಡ್ಡ ಜವಾಬ್ದಾರಿ ಸೂರ್ಯಕುಮಾರ್ ಯಾದವ್ ಹೆಗಲೇರಿದೆ.
510
ಮಾಧ್ಯಮಗಳ ವರದಿಯ ಪ್ರಕಾರ, ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಏಷ್ಯಾಕಪ್ ಟೂರ್ನಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲಿದ್ದಾರೆ ಎನ್ನಲಾಗುತ್ತಿದೆ. ಇದರ ಜತೆಗೆ ಶುಭ್‌ಮನ್ ಗಿಲ್‌ಗೂ ಭಾರತ ತಂಡದಲ್ಲಿ ಮಣೆ ಹಾಕುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿಯಾಗಿದೆ.
610
ಇಂಗ್ಲೆಂಡ್ ಸರಣಿಯಲ್ಲಿ ಭಾರತ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಗಿಲ್ ಅವರಿಗೆ ಏಷ್ಯಾಕಪ್ ಟೂರ್ನಿಯಲ್ಲಿ ಉಪನಾಯಕ ಪಟ್ಟ ಕಟ್ಟಲಾಗುತ್ತದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
710
ಅಗ್ರಕ್ರಮಾಂಕದ ಬ್ಯಾಟರ್‌ಗಳಾಗಿ ಸೂರ್ಯಕುಮಾರ್ ಯಾದವ್, ಶುಭ್‌ಮನ್ ಗಿಲ್, ಅಭಿಷೇಕ್ ಶರ್ಮಾ ಹಾಗೂ ತಿಲಕ್ ವರ್ಮಾ ಅವರ ಹೆಸರು ಅಂತಿಮಗೊಂಡಿದೆ ಎಂದು ಪಿಟಿಐ ವರದಿ ಮಾಡಿದೆ.
810
ಇನ್ನುಳಿದಂತೆ ಸಂಜು ಸ್ಯಾಮ್ಸನ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಬ್ಯಾಟರ್ ಆಗಿ ಸ್ಥಾನ ಪಡೆಯಲಿದ್ದು, ಎರಡನೇ ವಿಕೆಟ್ ಕೀಪರ್ ಬ್ಯಾಟರ್ ಸ್ಥಾನಕ್ಕೆ ಜಿತೇಶ್ ಶರ್ಮಾ ಹಾಗೂ ಧ್ರುವ್ ಜುರೇಲ್ ನಡುವೆ ಪೈಪೋಟಿ ಏರ್ಪಟ್ಟಿದೆ.
910
ಆಲ್ರೌಂಡರ್ ರೂಪದಲ್ಲಿ ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್ ಹಾಗೂ ವಾಷಿಂಗ್ಟನ್ ಸುಂದರ್ ಸ್ಥಾನ ಪಡೆಯುವುದು ಬಹುತೇಕ ಖಚಿತ ಎನಿಸಿದೆ.
1010
ಇನ್ನು ಬೌಲಿಂಗ್ ವಿಭಾಗದಲ್ಲಿ ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಶದೀಪ್ ಸಿಂಗ್, ಹರ್ಷಿತ್ ರಾಣಾ ಹಾಗೂ ಪ್ರಸಿದ್ದ್ ಕೃಷ್ಣ ಹೆಸರುಗಳು ಬಹುತೇಕ ಅಂತಿಮಗೊಂಡಿವೆ ಎಂದು ವರದಿಯಾಗಿದೆ.