T20 World Cup: Aus vs NZ ಆಸೀಸ್‌ vs ಕಿವೀಸ್ ನಡುವಿನ ಕಾದಾಟದಲ್ಲಿ ಗೆಲ್ಲೋರು ಯಾರು..? ಭವಿಷ್ಯ ನುಡಿದ ವಾರ್ನ್‌..!

Suvarna News   | Asianet News
Published : Nov 13, 2021, 02:11 PM ISTUpdated : Nov 13, 2021, 02:15 PM IST

ದುಬೈ: ಯುಎಇನಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯು ಇದೀಗ ನಿರ್ಣಾಯಕ ಘಟ್ಟ ತಲುಪಿದ್ದು, ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರಶಸ್ತಿಗಾಗಿ ಆಸ್ಟ್ರೇಲಿಯಾ (Australia Cricket) ಹಾಗೂ ನ್ಯೂಜಿಲೆಂಡ್ ತಂಡಗಳು (New Zealand Cricket) ಕಾದಾಡಲಿವೆ. ಹೀಗಿರುವಾಗಲೇ ಯಾವ ತಂಡ ಚಾಂಪಿಯನ್ ಆಗಲಿದೆ ಎನ್ನುವ ಕುರಿತಂತೆ ಈಗಿನಿಂದಲೇ ಚರ್ಚೆ ಜೋರಾಗಿದೆ. ಹೀಗಿರುವಾಗಲೇ ಸ್ಪಿನ್ ದಿಗ್ಗಜ ಶೇನ್‌ ವಾರ್ನ್‌ (Shane Warne) ಯಾವ ತಂಡ ಟಿ20 ವಿಶ್ವಕಪ್ ಚಾಂಪಿಯನ್ ಆಗಲಿದೆ ಎನ್ನುವ ಕುರಿತಂತೆ ಭವಿಷ್ಯ ನುಡಿದಿದ್ದಾರೆ. 

PREV
17
T20 World Cup: Aus vs NZ ಆಸೀಸ್‌ vs ಕಿವೀಸ್ ನಡುವಿನ ಕಾದಾಟದಲ್ಲಿ ಗೆಲ್ಲೋರು ಯಾರು..? ಭವಿಷ್ಯ ನುಡಿದ ವಾರ್ನ್‌..!

ಐಸಿಸಿ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ. ನವೆಂಬರ್ 14ರಂದು ಸಂಜೆ 7.30ಕ್ಕೆ ಆರಂಭವಾಗಲಿರುವ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ಸಾಕ್ಷಿಯಾಗಲಿದೆ.

27

ಇದುವರೆಗೂ ಟಿ20 ಕ್ರಿಕೆಟ್‌ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಚಾಂಪಿಯನ್ ಪಟ್ಟ ಅಲಂಕರಿಸಿಲ್ಲ. ಹೀಗಾಗಿ ಯಾವುದೇ ತಂಡ ಗೆದ್ದರೂ ಇತಿಹಾಸ ನಿರ್ಮಾಣವಾಗಲಿದೆ. ಹೀಗಾಗಿ ಈ ಬಾರಿ ಯಾವ ತಂಡ ಚಾಂಪಿಯನ್ ಆಗಲಿದೆ ಎನ್ನುವ ಚರ್ಚೆ ಕ್ರಿಕೆಟ್ ವಲಯದಲ್ಲಿ ಜೋರಾಗಿದೆ.

37

ಮೊದಲ ಸೆಮಿಫೈನಲ್ ಕಾದಾಟದಲ್ಲಿ ಬಲಿಷ್ಠ ಇಂಗ್ಲೆಂಡ್ ಎದುರು ನ್ಯೂಜಿಲೆಂಡ್ ಒಂದು ಓವರ್‌ ಬಾಕಿ ಇರುವಂತೆಯೇ 5 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿ ಫೈನಲ್‌ಗೆ ಲಗ್ಗೆಯಿಟ್ಟಿದೆ. ಇನ್ನೊಂದೆಡೆ ಕಾಕತಾಳೀಯವೆಂಬಂತೆ ಆಸ್ಟ್ರೇಲಿಯಾ ಕೂಡಾ ಎರಡನೇ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ದ ಒಂದು ಓವರ್‌ ಬಾಕಿ ಇರುವಂತೆಯೇ 5 ವಿಕೆಟ್‌ಗಳ ಜಯ ಸಾಧಿಸಿ ಫೈನಲ್‌ಗೆ ಲಗ್ಗೆಯಿಟ್ಟಿದೆ.

47

ಭಾನುವಾರ(ನ.14) ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ದ ಆಸ್ಟ್ರೇಲಿಯಾ ತಂಡವು ಗೆಲುವು ಸಾಧಿಸುವ ಮೂಲಕ ಚೊಚ್ಚಲ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲಲಿದೆ ಎಂದು ಸ್ಪಿನ್ ದಿಗ್ಗಜ ಶೇನ್ ವಾರ್ನ್‌ ಭವಿಷ್ಯ ನುಡಿದಿದ್ದಾರೆ.
 

57


ಈ ಕುರಿತಂತೆ ಸಾಮಾಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ಅನಿಸಿಕೆ ಹಂಚಿಕೊಂಡಿರುವ ವಾರ್ನ್‌, ಸೆಮಿಫೈನಲ್‌ನಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಆತ್ಮವಿಶ್ವಾಸದಿಂದ ತುಂಬಿ ತುಳುಕುತ್ತಿರುವ ಆಸೀಸ್‌ ತಂಡವು ಈ ಬಾರಿ ಟಿ20 ಟ್ರೋಫಿ ಗೆಲ್ಲಲಿದೆ ಎಂದು ಹೇಳಿದ್ದಾರೆ.

67

ಇಲ್ಲಿಯವರೆಗೂ ಅದ್ಭುತವಾಗಿ ಟಿ20 ವಿಶ್ವಕಪ್ ಟೂರ್ನಿಯು ಜರುಗಿದೆ. ಇಂಗ್ಲೆಂಡ್ ಹಾಗೂ ಪಾಕಿಸ್ತಾನ ತಂಡವನ್ನು ನೆನಪಿಸಿಕೊಂಡರೆ ಪಾಪ ಎನಿಸುತ್ತದೆ. ಫೈನಲ್‌ಗೆ ಲಗ್ಗೆಯಿಟ್ಟಿರುವ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಕ್ಕೆ ಅಭಿನಂದನೆಗಳು ಎಂದು ವಾರ್ನ್‌ ಹೇಳಿದ್ದಾರೆ.

77

ಪಾಕಿಸ್ತಾನ ವಿರುದ್ದ ಗೆದ್ದ ರೀತಿಯನ್ನು ಗಮನಿಸಿದರೆ, ಈ ಬಾರಿ ನ್ಯೂಜಿಲೆಂಡ್ ಮಣಿಸಿ ಆಸ್ಟ್ರೇಲಿಯಾ ಟಿ20 ವಿಶ್ವಕಪ್ ಗೆಲ್ಲಲಿದೆ ಎಂದು ನನಗನಿಸುತ್ತಿದೆ. ಯಾಕೆಂದರೆ ಆಸೀಸ್‌ ತಂಡವು ಉತ್ತಮ ಲಯದಲ್ಲಿದೆ ಎಂದು ವಾರ್ನ್‌ ಅಭಿಪ್ರಾಯಪಟ್ಟಿದ್ದಾರೆ.
 

Read more Photos on
click me!

Recommended Stories