ಈ ಬಾರಿಯ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪ್ರಶಸ್ತಿ ಹತ್ತಿರವೂ ಬರಲು ಸಾಧ್ಯವಿಲ್ಲ..!

Published : Apr 04, 2023, 05:25 PM ISTUpdated : Apr 04, 2023, 05:30 PM IST

ಬೆಂಗಳೂರು(ಏ.04): 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಭರ್ಜರಿಯಾಗಿ ಸಾಗುತ್ತಿದ್ದು, ಈಗಾಗಲೇ ಕೆಲವು ತಂಡಗಳು ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದರೇ, ಮತ್ತೆ ಕೆಲವು ತಂಡಗಳು ಮೊದಲ ಪಂದ್ಯದಲ್ಲಿ ನಿರಾಸೆ ಅನುಭವಿಸಿವೆ. ಇನ್ನು ಇದೆಲ್ಲದರ ನಡುವೆ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ತಂಡದ ಬಗ್ಗೆ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಹಾಗೂ ಖ್ಯಾತ ಕೋಚ್ ಟಾಮ್ ಮೂಡಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ  

PREV
18
ಈ ಬಾರಿಯ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪ್ರಶಸ್ತಿ ಹತ್ತಿರವೂ ಬರಲು ಸಾಧ್ಯವಿಲ್ಲ..!

ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್‌ ತಂಡವು, 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸೋಲಿನೊಂದಿಗೆ ತನ್ನ ಅಭಿಯಾನವನ್ನು ಆರಂಭಿಸಿದೆ. ತಂಡಕ್ಕಿದು ಹೊಸತೇನಲ್ಲ ಬಿಡಿ.

28

ಹೌದು, 2013ರಿಂದೀಚೆಗೆ ಕಾಕತಾಳೀಯ ಎನ್ನುವಂತೆ ಮುಂಬೈ ಇಂಡಿಯನ್ಸ್‌ ತಂಡವು, ಐಪಿಎಲ್‌ನಲ್ಲಿ ತಾನಾಡುವ ಮೊದಲ ಪಂದ್ಯವನ್ನು ಸೋಲುತ್ತಲೇ ಬಂದಿದೆ. ಇದೀಗ ಅದೇ ಸಂಪ್ರದಾಯವನ್ನು ಮುಂಬೈ ಇಂಡಿಯನ್ಸ್‌ ಈ ಆವೃತ್ತಿಯ ಐಪಿಎಲ್‌ನಲ್ಲೂ ಮುಂದುವರೆಸಿದೆ.

38

ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಎದುರು ಆರ್‌ಸಿಬಿ ತಂಡವು 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮುಂಬೈ ತಂಡವು ಕೊನೆಯ ಸ್ಥಾನದಲ್ಲೇ ಉಳಿದು ಮುಖಭಂಗ ಅನುಭವಿಸಿತ್ತು.
 

48

ಇದೀಗ, ಈ ವರ್ಷ ಕೂಡಾ ಮುಂಬೈ ಇಂಡಿಯನ್ಸ್‌ ತಂಡವು ಪರಿಸ್ಥಿತಿ ಬದಲಾಗುವ ಸಾಧ್ಯತೆ ಕಂಡುಬರುತ್ತಿಲ್ಲ. 2023ರ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್‌ ತಂಡವು ಫೈನಲ್ ಸಮೀಪವೂ ಬರಲು ಸಾಧ್ಯವಿಲ್ಲ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಟಾಮ್ ಮೂಡಿ ಅಭಿಪ್ರಾಯಪಟ್ಟಿದ್ದಾರೆ.

58

ಆರ್‌ಸಿಬಿ ಎದುರು ಮುಂಬೈ ಇಂಡಿಯನ್ಸ್‌ 8 ವಿಕೆಟ್ ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ ESPNcricinfo ವೆಬ್‌ಸೈಟ್‌ನ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಟಾಮ್ ಮೂಡಿ, ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವು ಆಡಿದ ರೀತಿಯನ್ನು ಗಮನಿಸಿದರೆ, ಅವರು ಫೈನಲ್‌ ಸಮೀಪವೂ ಬರಲು ಸಾಧ್ಯವಿಲ್ಲ ಎಂದು ಅಂದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

68

ನನ್ನ ಪ್ರಕಾರ ಮುಂಬೈ ಇಂಡಿಯನ್ಸ್‌ ತಂಡದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅವರು ಸಮತೋಲಿತ ತಂಡವನ್ನು ಹೊಂದಿದ್ದಾರೆ ಎಂದು ನನಗನಿಸುತ್ತಿಲ್ಲ. ಮುಂಬೈ ತಂಡದಲ್ಲಿ ದೇಶಿ ಹಾಗೂ ಅಂತಾರಾಷ್ಟ್ರೀಯ ಒಳ್ಳೆಯ ಬೌಲರ್‌ಗಳ ಕೊರತೆ ಎದ್ದು ಕಾಣುತ್ತಿದೆ ಎಂದು ಮೂಡಿ ಅಭಿಪ್ರಾಯಪಟ್ಟಿದ್ದಾರೆ.

78


ಈ ಬಾರಿಯ ಐಪಿಎಲ್ ಟೂರ್ನಿಯಲ್ಲೂ ಮುಂಬೈ ಇಂಡಿಯನ್ಸ್ ತಂಡವು ಅನುಭವಿ ಆಟಗಾರರ ಕೊರತೆಯನ್ನು ಎದುರಿಸುತ್ತಿದೆ. ಅನುಭವ ಎಷ್ಟು ಮುಖ್ಯವಾಗುತ್ತದೆ ಎನ್ನುವುದನ್ನು ಆರ್‌ಸಿಬಿ ತೋರಿಸಿದೆ. ಮುಂಬೈ ಇಂಡಿಯನ್ಸ್‌ ತಂಡದಲ್ಲಿ ಅನುಭವಿ ಆಟಗಾರರು ಎಷ್ಟು ಮಂದಿ ಇದ್ದಾರೆ ನೀವೇ ಹೇಳಿ ಎಂದು ಪ್ರಶ್ನಿಸಿದ್ದಾರೆ.

88

ಆರ್‌ಸಿಬಿ ಎದುರು ಮುಂಬೈ ಇಂಡಿಯನ್ಸ್ ತಂಡವು 171 ರನ್‌ಗಳನ್ನು ರಕ್ಷಿಸಿಕೊಳ್ಳಲು ವಿಫಲವಾಗಿದ್ದರು. ಮುಂಬೈ ಇಂಡಿಯನ್ಸ್‌ ಬೌಲರ್‌ಗಳು ಆರ್‌ಸಿಬಿಯ ಕೇವಲ 2 ವಿಕೆಟ್ ಕಬಳಿಸಲಷ್ಟೇ ಶಕ್ತರಾದರು. ಆರ್‌ಸಿಬಿ ತಂಡವು ಇನ್ನೂ 22 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ಕೇಕೆ ಹಾಕಿತ್ತು.

Read more Photos on
click me!

Recommended Stories