ಬೆಂಗಳೂರು: ಆಸ್ಟ್ರೇಲಿಯಾದ ಮಾಜಿ ಸ್ಪಿನ್ನರ್ ಬ್ರಾಡ್ ಹಾಗ್ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಬಲಿಷ್ಠ ತಂಡವನ್ನು ಆಯ್ಕೆಮಾಡಿದ್ದಾರೆ. ಮೊದಲ 29 ಪಂದ್ಯಗಳಲ್ಲಿ ಪ್ರದರ್ಶನವನ್ನು ಗಮನಿಸಿ ಹಾಗ್ ತಂಡವನ್ನು ಆಯ್ಕೆ ಮಾಡಿದ್ದು, ಪರ್ಪಲ್ ಕ್ಯಾಪ್ ವಿಜೇತ ಆರ್‌ಸಿಬಿ ಡೆತ್ ಓವರ್ ಸ್ಪೆಷಲಿಸ್ಟ್ ಹರ್ಷಲ್ ಪಟೇಲ್‌ಗೆ ಸ್ಥಾನ ನೀಡಿಲ್ಲ. ಇದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.
ಬ್ರಾಡ್ ಹಾಗ್ ತಮ್ಮ ತಂಡದ ನಾಯಕನನ್ನಾಗಿ ರಿಷಭ್ ಪಂತ್ ಆಯ್ಕೆ ಮಾಡಿಕೊಂಡಿದ್ಧಾರೆ. ಇನ್ನುಳಿದಂತೆ ನಾಲ್ವರ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರರಿಗೆ ತಮ್ಮ ತಂಡದಲ್ಲಿ ಮಣೆ ಹಾಕಿದ್ದಾರೆ. ಕೋಲ್ಕತ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡದ ಯಾವೊಬ್ಬ ಆಟಗಾರನಿಗೂ ಹಾಗ್ ಸ್ಥಾನ ನೀಡಿಲ್ಲ. ಇನ್ನೂ ಕುತೂಹಲಕಾರಿ ಸಂಗತಿಯೆಂದರೆ ಕೇವಲ ಮೂವರು ವಿದೇಶಿ ಆಟಗಾರರಿಗೆ ಮಾತ್ರ ಹಾಗ್ ತಮ್ಮ ತಂಡದಲ್ಲಿ ಸ್ಥಾನ ಕಲ್ಪಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.