14ನೇ ಆವೃತ್ತಿಯ ಐಪಿಎಲ್‌ಗೂ ಮುನ್ನ ಆಸ್ಟ್ರೇಲಿಯಾ ಆಟಗಾರರಲ್ಲಿ ಆತಂಕ...! ಏನಾಯ್ತು..?
First Published | Feb 3, 2021, 4:12 PM ISTಬೆಂಗಳೂರು: ಮಿಲಿಯನ್ ಡಾಲರ್ ಟೂರ್ನಿ ಎನಿಸಿಕೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಪಾಲ್ಗೊಳ್ಳಲು ಜಗತ್ತಿನ ನಾನಾ ಮೂಲೆಯ ಆಟಗಾರರು ತುದಿಗಾಲಿನಲ್ಲಿ ನಿಂತಿರುತ್ತಾರೆ. ಇದಕ್ಕೆ ಆಸ್ಟ್ರೇಲಿಯಾದ ಆಟಗಾರರು ಹೊರತಾಗಿಲ್ಲ.
ಐಪಿಎಲ್‌ನಲ್ಲಿ ಆಸ್ಟ್ರೇಲಿಯಾದ ಆಟಗಾರರು ತಮ್ಮದೇ ಆದ ಬೇಡಿಕೆಗಳನ್ನು ಸೃಷ್ಠಿಸಿಕೊಂಡಿದ್ದಾರೆ. ಮಾರ್ಕಸ್ ಸ್ಟೋನಿಸ್, ಪ್ಯಾಟ್ ಕಮಿನ್ಸ್, ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್ ಅವರಂತಹ ಆಟಗಾರರಿಗೆ ಐಪಿಎಲ್‌ನಲ್ಲಿ ಸಾಕಷ್ಟು ಬೇಡಿಕೆಯಿದೆ. ಹೀಗಿರುವಾಗಲೇ ಆಸ್ಟ್ರೇಲಿಯಾ ಪಾಳಯದಿಂದ ಆತಂಕಕಾರಿ ಸುದ್ದಿಯೊಂದು ಹೊರಬಿದ್ದಿದೆ.