Published : Apr 07, 2020, 08:00 PM ISTUpdated : Apr 07, 2020, 08:17 PM IST
ವಿಶ್ವ ಕ್ರಿಕೆಟ್ ಕಂಡ ಪ್ರಚಂಡ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ತಮ್ಮ ಕನಸಿನ ಭಾರತ ತಂಡವನ್ನು ಪ್ರಕಟಿಸಿದ್ದು, ಸೌರವ್ ಗಂಗೂಲಿಗೆ ನಾಯಕತ್ವ ಪಟ್ಟ ನೀಡಿದ್ದಾರೆ, ಅಚ್ಚರಿಯೆಂದರೆ ತಮ್ಮ ಕನಸಿನ ತಂಡದಲ್ಲಿ ವಿವಿಎಸ್ ಲಕ್ಷ್ಮಣ್ ಅವರಿಗೆ ಸ್ಥಾನ ನೀಡಿಲ್ಲ, ಆಸೀಸ್ ಬೌಲರ್‌ಗಳ ಪಾಲಿಗೆ ಸಿಂಹಸ್ವಪ್ನವಾಗಿದ್ದ ವಿವಿಎಸ್ ಲಕ್ಷ್ಮಣ್ ಅವರಿಗೆ ಸ್ಥಾನ ನೀಡದೇ ಇರುವುದು ಅಚ್ಚರಿಗೆ ಕಾರಣವಾಗಿದೆ. ಶೇನ್ ವಾರ್ನ್ ಕನಸಿನ ಟೀಂ ಇಂಡಿಯಾದಲ್ಲಿ ಮೂವರು ಕನ್ನಡಿಗರು ಸ್ಥಾನ ಪಡೆದಿದ್ದಾರೆ.
ಇನ್ನು ಅಚ್ಚರಿಯೆಂದರೆ ಮಹೇಂದ್ರ ಸಿಂಗ್ ಧೋನಿ ಹಾಗೂ ವಿರಾಟ್ ಕೊಹ್ಲಿಗೂ ತಮ್ಮ ಕನಸಿನ ತಂಡದಲ್ಲಿ ಸ್ಥಾನ ನೀಡಿಲ್ಲ. ಏಕೆಂದರೆ ವಾರ್ನ್ ಎದುರು ಈ ಇಬ್ಬರು ಆಟಗಾರರು ಒಂದೇ ಒಂದು ಟೆಸ್ಟ್ ಪಂದ್ಯವನ್ನಾಡಿಲ್ಲ. ವಾರ್ನ್ ಭಾರತದ ಕನಸಿನ ತಂಡದಲ್ಲಿ ವಿರೇಂದ್ರ ಸೆಹ್ವಾಗ್ ಜತೆ ನವಜೋತ್ ಸಿಂಗ್ ಸಿಧು ಆರಂಭಿಕರಾಗಿ ಕಾಣಿಸಿಕೊಂಡಿದ್ದಾರೆ. ವಿಕೆಟ್ ಕೀಪರ್ ಸ್ಥಾನವನ್ನು ನಯನ್ ಮೋಂಗಿಯಾ ಪಡೆದುಕೊಂಡಿದ್ದಾರೆ. ಶೇನ್ ವಾರ್ನ್ ಭಾರತದ ಕನಸಿನ ತಂಡ ಹೀಗಿದೆ ನೋಡಿ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.