ದೇಶದ ಘನತೆ ಬದಿಗಿಟ್ಟು ಟಿ20 ವಿಶ್ವಕಪ್ ಆಡೊಲ್ಲ: ಬಾಂಗ್ಲಾದೇಶ ಹೊಸ ಕಿರಿಕ್!

Published : Jan 08, 2026, 09:42 AM IST

ಢಾಕಾ: ಭಾರತ ಆತಿಥ್ಯ ವಹಿಸಲಿರುವ ಐಸಿಸಿ ಟಿ20 ವಿಶ್ವಕಪ್‌ಗೆ ತಂಡವನ್ನು ಕಳುಹಿಸುವುದಿಲ್ಲ ಎಂದು ಬಾಂಗ್ಲಾದೇಶ ಹೇಳಿದೆ. ಭಾರತ ಮತ್ತು ಬಾಂಗ್ಲಾದೇಶ ನಡುವಿನ ಕ್ರಿಕೆಟ್ ಸಂಬಂಧವು ಇತಿಹಾಸದಲ್ಲೇ ಅತಿದೊಡ್ಡ ಬಿಕ್ಕಟ್ಟನ್ನು ಎದುರಿಸುತ್ತಿದೆ.

PREV
17
ಮುಸ್ತಾಫಿಜುರ್ ಕೈಬಿಟ್ಟಿದ್ದೇ ಸಮಸ್ಯೆಯ ಮೂಲ ಕಾರಣ

ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಈ ವಿವಾದ, ಮುಂಬರುವ ಟಿ20 ವಿಶ್ವಕಪ್ ಆಯೋಜನೆಯ ಮೇಲೂ ಪರಿಣಾಮ ಬೀರಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ದಾಖಲೆಯ ಮೊತ್ತಕ್ಕೆ (9.2 ಕೋಟಿ ರೂ.) ಖರೀದಿಸಿದ್ದ ಬಾಂಗ್ಲಾದೇಶದ ವೇಗಿ ಮುಸ್ತಫಿಜುರ್ ರೆಹಮಾನ್‌ರನ್ನು ತಂಡದಿಂದ ಹೊರಗಿಡಲು ಬಿಸಿಸಿಐ ಸೂಚನೆ ನೀಡಿದ್ದೇ ಈ ವಿವಾದಕ್ಕೆ ಮೂಲ ಕಾರಣ.

27
ಬಾಂಗ್ಲಾದೇಶ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾದ ನಡೆ

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವನ್ನು ವಿರೋಧಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಗಳು ಹೇಳುತ್ತಿವೆ. ಇದು ಬಾಂಗ್ಲಾದೇಶದ ಕ್ರಿಕೆಟ್ ಅಭಿಮಾನಿಗಳನ್ನು ಮತ್ತು ಸರ್ಕಾರವನ್ನು ಕೆರಳಿಸಿದೆ.

37
ಬಾಂಗ್ಲಾದೇಶ ರಿಕ್ವೆಸ್ಟ್‌ ರಿಜೆಕ್ಟ್‌

ಇದರಿಂದಾಗಿ, ಫೆಬ್ರವರಿಯಲ್ಲಿ ಭಾರತ ಆತಿಥ್ಯ ವಹಿಸುವ ಟಿ20 ವಿಶ್ವಕಪ್‌ನಲ್ಲಿ ಭಾರತದಲ್ಲಿ ನಡೆಯಬೇಕಾದ ತಮ್ಮ ಪಂದ್ಯಗಳನ್ನು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಐಸಿಸಿಗೆ ಮನವಿ ಮಾಡಿತು. ಆದರೆ ಈ ಮನವಿಯನ್ನು ಐಸಿಸಿ ತಿರಸ್ಕರಿಸಿದೆ.

47
ಐಸಿಸಿ ಖಡಕ್ ಶಾಕ್‌

ಅಸ್ತಿತ್ವದಲ್ಲಿರುವ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಮತ್ತು ಭಾರತದಲ್ಲಿ ಆಡದಿದ್ದರೆ ಅಂಕಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಐಸಿಸಿ ತಿಳಿಸಿದೆ.

57
ಐಸಿಸಿಗೆ ಪತ್ರ ಬರೆಯಲು ರೆಡಿಯಾದ ಬಾಂಗ್ಲಾದೇಶ

ಆದರೆ, ಭದ್ರತಾ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಒತ್ತಾಯಿಸಿ ಬಾಂಗ್ಲಾದೇಶ ಮತ್ತೊಮ್ಮೆ ಪತ್ರ ಬರೆಯಲು ಸಿದ್ಧತೆ ನಡೆಸುತ್ತಿದೆ.

67
ಬಾಂಗ್ಲಾದೇಶದ ಕ್ರೀಡಾ ಸಲಹೆಗಾರ ಆಸಿಫ್ ನಜ್ರುಲ್ ಹೊಸ ಖ್ಯಾತೆ

ದೇಶದ ಘನತೆಯನ್ನು ಪಣಕ್ಕಿಟ್ಟು ವಿಶ್ವಕಪ್‌ನಲ್ಲಿ ಭಾಗವಹಿಸುವುದಿಲ್ಲ. ಆಟಗಾರರು, ಪ್ರೇಕ್ಷಕರು ಮತ್ತು ಪತ್ರಕರ್ತರಿಗೆ ಭಾರತದಲ್ಲಿ ಭದ್ರತೆ ಇರುತ್ತದೆ ಎಂದು ನಾವು ಭಾವಿಸುವುದಿಲ್ಲ ಎಂದು ಬಾಂಗ್ಲಾದೇಶದ ಕ್ರೀಡಾ ಸಲಹೆಗಾರ ಆಸಿಫ್ ನಜ್ರುಲ್ ಪ್ರತಿಕ್ರಿಯಿಸಿದ್ದಾರೆ.

77
ಐಪಿಎಲ್ ಪ್ರಸಾರಕ್ಕೆ ನಿಷೇಧ

ಮುಸ್ತಫಿಜುರ್ ಅವರನ್ನು ಕೈಬಿಟ್ಟಿದ್ದನ್ನು ವಿರೋಧಿಸಿ, ಬಾಂಗ್ಲಾದೇಶದಲ್ಲಿ ಐಪಿಎಲ್ ಪಂದ್ಯಗಳ ಪ್ರಸಾರವನ್ನು ಸರ್ಕಾರ ಅನಿರ್ದಿಷ್ಟಾವಧಿಗೆ ನಿಷೇಧಿಸಿದೆ. ಜನವರಿ 5 ರಂದು ಈ ಕುರಿತು ಆದೇಶ ಹೊರಡಿಸಲಾಗಿದೆ. ಸಾರ್ವಜನಿಕರ ಭಾವನೆಗಳನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories