Published : Mar 19, 2021, 12:11 PM ISTUpdated : Mar 19, 2021, 12:22 PM IST
ಮುಂಬೈ: ಭಾರತ ಹಾಗೂ ಇಂಗ್ಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿಗೆ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಕನ್ನಡಿಗ ಪ್ರಸಿದ್ಧ್ ಕೃಷ್ಣ, ಸೂರ್ಯಕುಮಾರ್ ಯಾದವ್ ಹಾಗೂ ಕೃನಾಲ್ ಪಾಂಡ್ಯ ಇದೇ ಮೊದಲ ಬಾರಿಗೆ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಮಾರ್ಚ್ 23ರಿಂದ ಏಕದಿನ ಸರಣಿ ಆರಂಭವಾಗಲಿದ್ದು, ವಿಜಯ್ ಹಜಾರೆ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರಿದ್ದ ವೇಗಿ ಪ್ರಸಿದ್ಧ್ ಕೃಷ್ಣ ಹಾಗೂ ಆಲ್ರೌಂಡರ್ ಕೃನಾಲ್ ಪಾಂಡ್ಯ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನುಳಿದಂತೆ ಧವನ್, ಶಾರ್ದೂಲ್ ಠಾಕೂರ್ ಹಾಗೂ ಮೊಹಮ್ಮದ್ ಸಿರಾಜ್ ಕೂಡಾ ಟೀಂ ಇಂಡಿಯಾದಲ್ಲಿ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಇಂಗ್ಲೆಂಡ್ ವಿರುದ್ದದ ಏಕದಿನ ಸರಣಿಗೆ ಬಲಿಷ್ಠ ಭಾರತ ತಂಡ ಹೀಗಿದೆ ನೋಡಿ.