ಬೆಂಗಳೂರು: 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಈಗಿನಿಂದಲೇ ಭರದ ಸಿದ್ದತೆಗಳು ಆರಂಭಿಸಿವೆ. ಹೀಗಿರುವಾಗಲೇ ಮುಂಬರುವ ಏಕದಿನ ವಿಶ್ವಕಪ್ ಟೂರ್ನಿ ಆಡಲು ಕನಸು ಕಾಣುತ್ತಿರುವ ಐವರು ಆಟಗಾರರಿಗೆ ಬಿಸಿಸಿಐ ಶಾಕ್ ನೀಡಲು ರೆಡಿಯಾಗಿದೆ. ಯಾರು ಆ ಆಟಗಾರರು ನೋಡೋಣ ಬನ್ನಿ.
2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಜೇಯವಾಗಿ ಫೈನಲ್ ಪ್ರವೇಶಿಸಿದ್ದ ಟೀಂ ಇಂಡಿಯಾ, ಪ್ರಶಸ್ತಿ ಸುತ್ತಿನಲ್ಲಿ ಆಸೀಸ್ ಎದುರು ಮುಗ್ಗರಿಸುವ ಮೂಲಕ ನಿರಾಸೆ ಅನುಭವಿಸಿತ್ತು. ಈ ಬಾರಿ ಶತಾಯಗತಾಯ ಮುಂಬರುವ ಏಕದಿನ ವಿಶ್ವಕಪ್ ಗೆಲ್ಲಲು ಟೀಂ ಇಂಡಿಯಾ ಪಣ ತೊಟ್ಟಿದೆ. ಆದರೆ ಮುಂಬರುವ ಏಕದಿನ ವಿಶ್ವಕಪ್ ಆಡಲು ಕನಸು ಕಾಣುತ್ತಿರುವ ಈ ಐದು ಆಟಗಾರರಿಗೆ ಬಿಸಿಸಿಐ ಆಯ್ಕೆ ಸಮಿತಿ ಶಾಕ್ ನೀಡಲು ರೆಡಿಯಾಗಿದೆ. ಈ ಲಿಸ್ಟ್‌ನಲ್ಲಿ ಇಬ್ಬರು ಮ್ಯಾಚ್ ವಿನ್ನರ್‌ಗಳ ಹೆಸರೂ ಇದೆ.
26
1. ರೋಹಿತ್ ಶರ್ಮಾ:
ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಆಡುವ ಕನಸು ಕಾಣುತ್ತಿದ್ದಾರೆ. ಆದರೆ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡಕ್ಕೆ ಆಯ್ಕೆ ಮಾಡದಿರಲು ಬಿಸಿಸಿಐ ಟೀಮ್ ಮ್ಯಾನೇಜ್‌ಮೆಂಟ್ ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ. ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಇಂಗ್ಲೆಂಡ್ ಎದುರಿನ ಮೂರನೇ ಏಕದಿನ ಪಂದ್ಯವೇ ರೋಹಿತ್ ಶರ್ಮಾ ಪಾಲಿಗೆ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗುವ ಸಾಧ್ಯತೆಯಿದೆ. ರೋಹಿತ್ ಶರ್ಮಾ ಬದಲಿಗೆ ಆರಂಭಿಕ ಸ್ಥಾನಕ್ಕೆ ಯಶಸ್ವಿ ಜೈಸ್ವಾಲ್‌ಗೆ ಮಣೆ ಹಾಕಲು ಬಿಸಿಸಿಐ ಚಿಂತನೆ ನಡೆಸುತ್ತಿದೆ.
36
2. ಮೊಹಮ್ಮದ್ ಶಮಿ:
ಅನುಭವಿ ವೇಗಿ ಮೊಹಮ್ಮದ್ ಶಮಿ ಅವರನ್ನು 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಬಳಿಕ ಪದೇ ಪದೇ ಕಡೆಗಣಿಸಲಾಗುತ್ತಿದೆ. ಐಸಿಸಿ ಟೂರ್ನಿಯಲ್ಲಿ ಭಾರತ ಪರ ಅತಿಹೆಚ್ಚು ವಿಕೆಟ್ ಕಬಳಿಸಿದ ಬೌಲರ್ ಆಗಿ ಶಮಿ ಹೊರಹೊಮ್ಮಿದ್ದಾರೆ. ಇದರ ಜತೆ ದೇಶಿ ಕ್ರಿಕೆಟ್‌ನಲ್ಲೂ ಶಮಿ ಅದ್ಭುತ ಲಯದಲ್ಲಿದ್ದಾರೆ. ಹೀಗಿದ್ದೂ ಫಿಟ್ನೆಸ್ ಸಮಸ್ಯೆಯನ್ನು ಆಗಾಗ ಎದುರಿಸುವ ಶಮಿಯನ್ನು ಕೈಬಿಟ್ಟು ಹರ್ಷಿತ್ ರಾಣಾಗೆ ಮಣೆ ಹಾಕಲು ಬಿಸಿಸಿಐ ಸೆಲೆಕ್ಷನ್ ಕಮಿಟಿ ಚಿಂತನೆಯಲ್ಲಿದೆ. ಶಮಿ ಎಷ್ಟು ದೊಡ್ಡ ಐಸಿಸಿ ಟೂರ್ನಿಯ ಮ್ಯಾಚ್ ವಿನ್ನರ್ ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ.
ಒಂದು ಕಾಲದಲ್ಲಿ ಟೀಂ ಇಂಡಿಯಾ ಏಕದಿನ ಮಾದರಿಯ ಅತ್ಯಂತ ನಂಬಿಗಸ್ಥ ವೇಗದ ಬೌಲರ್ ಆಗಿ ಗುರುತಿಸಿಕೊಂಡಿದ್ದ ಮೊಹಮ್ಮದ್ ಸಿರಾಜ್, ಇದೀಗ ಏಕದಿನ ತಂಡದಿಂದ ಹೊರಗುಳಿದಿದ್ದಾರೆ. ಆಯ್ಕೆ ಸಮಿತಿ ಇದೀಗ ಸಿರಾಜ್ ಅವರನ್ನು ಟೆಸ್ಟ್‌ಗೆ ಸೀಮಿತಗೊಳಿಸುವ ಚಿಂತನೆಯಲ್ಲಿದೆ. ಇನ್ನು ಸಿರಾಜ್ ಬದಲಿಗೆ ಆಯ್ಕೆ ಸಮಿತಿ ಕನ್ನಡಿಗ ವೇಗಿ ಪ್ರಸಿದ್ದ್ ಕೃಷ್ಣ ಮೇಲೆ ಹೆಚ್ಚು ನಂಬಿಕೆಯಿಟ್ಟಂತೆ ಕಂಡು ಬರುತ್ತಿದೆ.
56
4. ರವೀಂದ್ರ ಜಡೇಜಾ:
ಭಾರತದ ಸ್ಪಿನ್ ಆಲ್ರೌಂಡರ್ ರವೀಂದ್ರ ಜಡೇಜಾ ತಮ್ಮ ಅದ್ಭುತ ಆಲ್ರೌಂಡ್ ಪ್ರದರ್ಶನದ ಮೂಲಕವೇ ಹಲವಾರು ಬಾರಿ ಏಕಾಂಗಿಯಾಗಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ಆದರೆ ಟೀಮ್ ಮ್ಯಾನೇಜ್‌ಮೆಂಟ್ ರವೀಂದ್ರ ಜಡೇಜಾ ಅವರನ್ನು ಕೈಬಿಟ್ಟು ಅಕ್ಷರ್ ಪಟೇಲ್‌ಗೆ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ನೀಡಲು ಒಲವು ತೋರಿದೆ ಎಂದು ವರದಿಯಾಗಿದೆ. ಇದು ಖಂಡಿತ ಅಚ್ಚರಿ ತೀರ್ಮಾನ ಎನಿಸುವ ಸಾಧ್ಯತೆಯಿದೆ.
66
5. ಯುಜುವೇಂದ್ರ ಚಹಲ್:
ಭಾರತ ಏಕದಿನ ತಂಡದಲ್ಲಿ ತಜ್ಞ ಸ್ಪಿನ್ನರ್‌ಗಳ ಕೊರತೆ ಎದ್ದು ಕಾಣುತ್ತಿದೆ. ಹೀಗಿದ್ದೂ ಅನುಭವಿ ಸ್ಪಿನ್ನರ್ ಯುಜುವೇಂದ್ರ ಚಹಲ್‌ಗೆ ಭಾರತ ಏಕದಿನ ತಂಡದಲ್ಲಿ ಸ್ಥಾನ ಸಿಗುತ್ತಿಲ್ಲ. ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಚಹಲ್ ಬದಲಿಗೆ ಆಯ್ಕೆ ಸಮಿತಿ ಹರ್ಷ್ ದುಬೆಗೆ ಮಣೆ ಹಾಕುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.