ರೋಹಿತ್ ಶರ್ಮಾ ನಿವೃತ್ತಿ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟ BCCI!

Published : Jul 18, 2026, 10:20 AM IST

ನವದೆಹಲಿ: ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯವು ರೋಹಿತ್ ಶರ್ಮಾ ಪಾಲಿಗೆ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಲಿದೆ ಎನ್ನುವ ಕುರಿತಂತೆ ಕೊನೆಗೂ ಬಿಸಿಸಿಐ ತುಟಿಬಿಚ್ಚಿದ್ದು, ಅಭಿಮಾನಿಗಳಿಗೆ ಗುಡ್‌ ನ್ಯೂಸ್ ಕೊಟ್ಟಿದೆ. ಅಷ್ಟಕ್ಕೂ ಬಿಸಿಸಿಐ ಹೇಳಿದ್ದೇನು?

PREV
16
ರೋಹಿತ್ ಶರ್ಮಾ ನಿವೃತ್ತಿ ವದಂತಿ

ವಯಸ್ಸು ಹಾಗೂ ಕಳಪೆ ಫಾರ್ಮ್‌ನಿಂದಾಗಿ ರೋಹಿತ್ ಶರ್ಮಾಗೆ ಗೇಟ್‌ಪಾಸ್ ನೀಡಲು ಬಿಸಿಸಿಐ ಮುಂದಾಗಿದೆ ಎನ್ನುವ ಚರ್ಚೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜುಲೈ 19ರಂದು ಐತಿಹಾಸಿಕ ಲಾರ್ಡ್ಸ್‌ ಮೈದಾನದಲ್ಲಿ ನಡೆಯಲಿರುವ ಪಂದ್ಯ ಹಿಟ್‌ಮ್ಯಾನ್ ಪಾಲಿಗೆ ಕೊನೆಯ ಪಂದ್ಯವಾಗಲಿದೆ ಎನ್ನುವ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

26
ಗಾಳಿ ಸುದ್ದಿಗೆ ತೆರೆ ಎಳೆದ ಬಿಸಿಸಿಐ ಕಾರ್ಯದರ್ಶಿ

ಇಂಗ್ಲೆಂಡ್‌ ವಿರುದ್ಧ ಲಾರ್ಡ್ಸ್‌ನಲ್ಲಿ ನಡೆಯಲಿರುವ 3ನೇ ಏಕದಿನ ಪಂದ್ಯವು ರೋಹಿತ್‌ ಶರ್ಮಾ ಅವರ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಿರಲಿದೆ ಎಂದು ವರದಿಗಳನ್ನು ಬಿಸಿಸಿಐ ಕಾರ್ಯದರ್ಶಿ ದೇವಜಿತ್‌ ಸೈಕಿಯಾ ಅಲ್ಲಗಳೆದಿದ್ದಾರೆ. ಲಾರ್ಡ್ಸ್‌ ಏಕದಿನ ರೋಹಿತ್‌ರ ಕೊನೆ ಪಂದ್ಯವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

36
ರೋಹಿತ್ ಭವಿಷ್ಯದ ಬಗ್ಗೆ ತುಟಿ ಬಿಚ್ಚಿದ ಬಿಸಿಸಿಐ

ಪಿಟಿಐ ಸಂದರ್ಶನದಲ್ಲಿ ಮಾತನಾಡಿರುವ ಸೈಕಿಯಾ, ‘ರೋಹಿತ್ ಶರ್ಮಾ ಭವಿಷ್ಯದ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಆದರೆ ಲಾರ್ಡ್ಸ್‌ನಲ್ಲಿ ರೋಹಿತ್‌ ಕೊನೆ ಪಂದ್ಯವಾಡಲಿದ್ದಾರೆ ಎಂಬುದರ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ರೋಹಿತ್ ಶರ್ಮಾ ಅವರು ಈಗ ಭಾರತ ತಂಡದ ಸದಸ್ಯ. ತಂಡದ ಯೋಜನೆಗಳಲ್ಲಿ ಇರುವವರೆಗೂ ಅವರು ದೇಶವನ್ನು ಪ್ರತಿನಿಧಿಸುವುದನ್ನು ಮುಂದುವರಿಸಲಿದ್ದಾರೆ. ಲಾರ್ಡ್ಸ್ ಏಕದಿನ ಪಂದ್ಯವು ಅವರ ಕೊನೆಯ ಪಂದ್ಯವಾಗುವುದಿಲ್ಲ’ ಎಂದಿದ್ದಾರೆ.

46
2027ರ ಏಕದಿನ ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ಹಿಟ್‌ಮ್ಯಾನ್

2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಮೇಲೆ ಕಣ್ಣಿಟ್ಟಿರುವ ರೋಹಿತ್ ಶರ್ಮಾ ಈಗಾಗಲೇ ಟೆಸ್ಟ್ ಹಾಗೂ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಭಾರತ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿರುವ ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡಿರುವ ರೋಹಿತ್ ಶರ್ಮಾ, ಆಫ್ಘಾನಿಸ್ತಾನ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಕ್ರಮವಾಗಿ 16,48 ಹಾಗೂ 79 ರನ್ ಬಾರಿಸಿದ್ದರು.

56
ಇಂಗ್ಲೆಂಡ್ ಎದುರು ರೋಹಿತ್ ಶರ್ಮಾ ಮೊದಲೆರಡು ಪಂದ್ಯಗಳಲ್ಲಿ ಫೇಲ್

ಇಂಗ್ಲೆಂಡ್ ಎದುರಿನ ಮೊದಲೆರಡು ಏಕದಿನ ಪಂದ್ಯಗಳಲ್ಲಿ ರೋಹಿತ್ ಶರ್ಮಾ ಕ್ರಮವಾಗಿ 11 ಹಾಗೂ 26 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು. ಇದರ ಬೆನ್ನಲ್ಲೇ ಲಾರ್ಡ್ಸ್‌ ಏಕದಿನ ಪಂದ್ಯವು ರೋಹಿತ್ ಪಾಲಿಗೆ ಕೊನೆಯ ಏಕದಿನ ಪಂದ್ಯವಾಗುವ ಸಾಧ್ಯತೆಯಿದೆ ಎನ್ನುವ ಚರ್ಚೆಗೆ ಸದ್ಯಕ್ಕೆ ತೆರೆ ಬಿದ್ದಿದೆ.

66
2019ರ ಏಕದಿನ ವಿಶ್ವಕಪ್‌ನಲ್ಲಿ 5 ಶತಕ ಚಚ್ಚಿದ್ದ ರೋಹಿತ್ ಶರ್ಮಾ

ಅಂದಹಾಗೆ ರೋಹಿತ್ ಶರ್ಮಾ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ಇದಷ್ಟೇ ಅಲ್ಲದೇ ಏಕದಿನ ಮಾದರಿಯಲ್ಲಿ ಮೂರು ದ್ವಿಶತಕ ಸಿಡಿಸಿದ ಏಕೈಕ ಬ್ಯಾಟರ್ ಎನ್ನುವ ಹೆಗ್ಗಳಿಕೆ ರೋಹಿತ್ ಅವರದ್ದು. 2019ರ ಏಕದಿನ ವಿಶ್ವಕಪ್ ಟೂರ್ನಿಯೊಂದರಲ್ಲೇ ರೋಹಿತ್ ಶರ್ಮಾ 5 ಶತಕ ಸಿಡಿಸಿ ಅಬ್ಬರಿಸಿದ್ದರು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories