Kohli-Rohit ಅಬ್ಬರಿಸುತ್ತಿದ್ದಂತೆಯೇ ಗಂಭೀರ್-ಅಗರ್ಕರ್‌ಗೆ ದಿಢೀರ್ ಮೀಟಿಂಗ್ ಕರೆದ BCCI!

Published : Dec 01, 2025, 01:50 PM IST

ಬೆಂಗಳೂರು: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಆಕರ್ಷಕ ಬ್ಯಾಟಿಂಗ್ ನಡೆಸಿ ಮಿಂಚಿದ್ದಾರೆ. ಇದರ ಬೆನ್ನಲ್ಲೇ ಗಂಭೀರ್-ಅಗರ್ಕರ್‌ಗೆ ಬುಲಾವ್ ನೀಡಿದೆ ಬಿಸಿಸಿಐ. 

PREV
17
ಭಾರತ ತಂಡದಲ್ಲಿ ಎಲ್ಲವೂ ಸರಿಯಿಲ್ವಾ?

ಭಾರತ ಕ್ರಿಕೆಟ್ ತಂಡದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಮತ್ತೆ ಮತ್ತೆ ಜಗಜ್ಜಾಹೀರಾಗುತ್ತಿದೆ. ತವರಿನಲ್ಲಿ ದಕ್ಷಿಣ ಆಫ್ರಿಕಾ ಎದುರು ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ವೈಟ್‌ವಾಷ್ ಅನುಭವಿಸಿತು. ಆದರೆ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ರೋಚಕ ಜಯ ಸಾಧಿಸಿದೆ.

27
ದಕ್ಷಿಣ ಆಫ್ರಿಕಾ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ-ರೋಹಿತ್ ಮಿಂಚಿಂಗ್

ಟೆಸ್ಟ್ ಸರಭಣಿಯಲ್ಲಿ ಅನನುಭವಿ ಆಟಗಾರರನ್ನೊಳಗೊಂಡ ತಂಡ ಟೆಸ್ಟ್ ಸರಣಿ ಕೈಚೆಲ್ಲಿತ್ತು. ಆದರೆ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಅರ್ಧಶತಕ ಹಾಗೂ ವಿರಾಟ್ ಕೊಹ್ಲಿ ದಿಟ್ಟ ಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

37
ಗಂಭೀರ್-ಅಗರ್ಕರ್ ಜತೆ ಬಿಸಿಸಿಐ ಮೀಟಿಂಗ್

ಇದೆಲ್ಲದರ ನಡುವೆ ಟೀಂ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರನ್ನು ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಕೆಲವು ವಿಚಾರಗಳನ್ನು ಚರ್ಚಿಸಲು ಬಿಸಿಸಿಐ ಮೀಟಿಂಗ್ ಕರೆದಿದೆ ಎಂದು ವರದಿಯಾಗಿದೆ.

47
ರೋಹಿತ್ ಭವಿಷ್ಯದ ಬಗ್ಗೆ ಚರ್ಚೆ ಬೆನ್ನಲ್ಲೇ ಮಹತ್ವದ ಸಭೆ

ಕಳೆದ ಕೆಲವು ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಮತ್ತೆ ಫಾರ್ಮ್‌ಗೆ ಮರಳಿರುವ ಟೀಂ ಇಂಡಿಯಾದ ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಭವಿಷ್ಯದ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

57
ಬಿಸಿಸಿಐ ಮಹತ್ವದ ಸಭೆಯಲ್ಲಿ ಯಾರೆಲ್ಲಾ ಭಾಗಿ?ರೋಹಿ

ಸ್ಪೋರ್ಟ್‌ಸ್ಟಾರ್‌ ವರದಿಯ ಪ್ರಕಾರ, ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ಜಂಟಿ ಕಾರ್ಯದರ್ಶಿ ಪ್ರಭ್ತೇಜ್ ಸಿಂಗ್ ಭಾಟಿಯಾ, ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ರಾಷ್ಟ್ರೀಯ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಚರ್ಚೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ.

67
ಗಂಭೀರ್ ಕಡೆಗಣಿಸಿದ್ರಾ ಕೊಹ್ಲಿ?

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯದ ವೇಳೆಯಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಹೆಡ್ ಕೋಚ್ ಗೌತಮ್ ಗಂಭೀರ್ ಜತೆ ಆತ್ಮೀಯತೆಯಿಂದ ನಡೆದುಕೊಂಡಿರಲಿಲ್ಲ. ಒಂದು ಹಂತದಲ್ಲಿ ಕೊಹ್ಲಿ, ಗಂಭೀರ್ ಅವರನ್ನು ಕಡೆಗಣಿಸಿದಂತೆ ಓಡಾಡಿದ ವಿಡಿಯೋ ಕೂಡಾ ವೈರಲ್ ಅಗಿದೆ.

77
ಗೊಂದಲಕ್ಕೆ ತೆರೆ ಎಳೆಯುತ್ತಾ ಬಿಸಿಸಿಐ

ಗೌತಮ್ ಗಂಭೀರ್ ಟೀಂ ಇಂಡಿಯಾ ಹೆಡ್‌ಕೋಚ್ ಆದ ಬಳಿಕ ಹಿರಿಯ ಆಟಗಾರರನ್ನು ಕಡೆಗಣಿಸಲಾಗುತ್ತಿದೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಇದೆಲ್ಲದಕ್ಕೆ ಬಿಸಿಸಿಐ ಆಯೋಜಿಸಿರುವ ಮೀಟಿಂಗ್‌ನಲ್ಲಿ ಪರಿಹಾರ ಸಿಗುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

Read more Photos on
click me!

Recommended Stories