ಸೋಲಿನ ಗಾಯದ ಮೇಲೆ ಹಾರ್ದಿಕ್ ಪಾಂಡ್ಯಗೆ ಮತ್ತೊಂದು ಬರೆ ಎಳೆದ ಬಿಸಿಸಿಐ..! ಮುಂಬೈ ಇಂಡಿಯನ್ಸ್ ನಾಯಕನಿಗೆ ಬಿಗ್ ಶಾಕ್

Published : May 21, 2026, 02:49 PM IST

ಕೋಲ್ಕತಾ: ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ಪಾಲಿಗೆ 19ನೇ ಸೀಸನ್ ಐಪಿಎಲ್ ದುಸ್ವಪ್ನದಂತೆ ಕಾಡುತ್ತಿದೆ. ಇದೀಗ ಕೆಕೆಆರ್ ಎದುರು ಸೋಲಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ ಬಿಸಿಸಿಐ ಬಿಸಿ ಮುಟ್ಟಿಸಿದೆ. ಈ ಕುರಿತಾದ ಡೀಟೈಲ್ಸ್ ಇಲ್ಲಿದೆ ನೋಡಿ.

PREV
16
ಕೆಕೆಆರ್ ಎದುರು ಮುಂಬೈಗೆ ಹೀನಾಯ ಸೋಲು

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಈಗಾಗಲೇ ಪ್ಲೇ ಆಫ್‌ ರೇಸ್‌ನಿಂದ ಹೊರಬಿದ್ದು ಮುಖಭಂಗ ಅನುಭವಿಸಿದೆ. ಇದೀಗ ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ನಡೆದ ಕೋಲ್ಕತಾ ನೈಟ್ ರೈಡರ್ಸ್ ಎದುರು ಹೀನಾಯ ಸೋಲು ಕಾಣುವ ಮೂಲಕ ಮತ್ತೊಮ್ಮೆ ಮುಖಭಂಗ ಅನುಭವಿಸಿದೆ.

26
ಹಾರ್ದಿಕ್ ಪಾಂಡ್ಯಗೆ ಬಿಗ್ ಶಾಕ್ ಕೊಟ್ಟ ಬಿಸಿಸಿಐ

ಇನ್ನು ಈ ಸೋಲಿನ ಶಾಕ್‌ನಿಂದ ಹೊರಬರುವ ಮುನ್ನವೇ ಮುಂಬೈ ಇಂಡಿಯನ್ಸ್ ಹಾರ್ದಿಕ್ ಪಾಂಡ್ಯಗೆ ಬಿಸಿಸಿಐ ಚಾಟಿ ಬೀಸಿದೆ. ಕೆಕೆಆರ್ ಎದುರು ಐಪಿಎಲ್‌ ನೀತಿ ಸಂಹಿತೆ ಉಲ್ಲಂಘಿಸಿದ ತಪ್ಪಿಗಾಗಿ ನಾಯಕ ಪಾಂಡ್ಯಗೆ ಬಿಸಿಸಿಐ ಬಿಗ್ ಶಾಕ್ ನೀಡಿದೆ.

36
ಮೈದಾನದಲ್ಲಿಯೇ ಅಸಮಾಧಾನ ಹೊರಹಾಕಿದ ಪಾಂಡ್ಯ

ಹೌದು, ಕೆಕೆಆರ್ ಎದುರಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 4 ವಿಕೆಟ್‌ಗಳ ಸೋಲು ಅನುಭವಿಸಿತ್ತು. ಪಂದ್ಯದ ವೇಳೆಯಲ್ಲೇ ನಾಯಕ ಹಾರ್ದಿಕ್ ಪಾಂಡ್ಯ ಮೈದಾನದಲ್ಲಿಯೇ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದರು. ಇದು ಐಪಿಎಲ್‌ ನೀತಿ ಸಂಹಿತೆಯ ಲೆವೆಲ್ ಒನ್ ಉಲ್ಲಂಘನೆಯಾಗಿದೆ. ಹೀಗಾಗಿ ಮ್ಯಾಚ್ ರೆಫ್ರಿಗೆ ಪಾಂಡ್ಯಗೆ ಪಂದ್ಯದ ಸಂಭಾವನೆಯ ದಂಡದ ಜತೆಗೆ ಒಂದು ಡಿಮೆರಿಟ್ ಅಂಕವನ್ನು ನೀಡಲಾಗಿದೆ.

46
ಬಿಸಿಸಿಐ ಶಿಸ್ತು ಕ್ರಮಕ್ಕೆ ಒಳಗಾದ ಹಾರ್ದಿಕ್ ಪಾಂಡ್ಯ

ಈ ಘಟನೆಯು ಕೆಕೆಆರ್ ರನ್ ಚೇಸ್ ಮಾಡುವ ಸಂದರ್ಭದಲ್ಲಿ ನಡೆಯಿತು. ಮುಂಬೈ ಇಂಡಿಯನ್ಸ್ 10ನೇ ಓವರ್‌ ಬೌಲಿಂಗ್ ಮಾಡುವ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ರನ್‌ ಮಾಡಿ, ಬಳಿಕ ಉದ್ದೇಶ ಪೂರ್ವಕವಾಗಿ ವಿಕೆಟ್ ಹಾಗೂ ಬೇಲ್ಸ್ ಬೀಳಿಸಿದ್ದರು. ಇದಕ್ಕೆ ಇದೀಗ ಪಾಂಡ್ಯ ಬಿಸಿಸಿಐನಿಂದ ಶಿಸ್ತು ಕ್ರಮಕ್ಕೆ ಒಳಗಾಗಿದ್ದಾರೆ.

56
ಕೆಕೆಆರ್ ಎದುರು ಸೋಲುಂಡ ಮುಂಬೈ ಇಂಡಿಯನ್ಸ್

ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಮೊದಲು ಬ್ಯಾಟ್ ಮಾಡಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 147 ರನ್ ಬಾರಿಸಿತ್ತು. ಈ ಸುಲಭ ಗುರಿ ಬೆನ್ನತ್ತಿದ ಕೆಕೆಆರ್ ತಂಡವು ಇನ್ನೂ ಏಳು ಎಸೆತ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು.

66
ಕೆಕೆಆರ್ ಪ್ಲೇ ಆಫ್ ಕನಸು ಜೀವಂತ

ಇನ್ನು ಈ ಗೆಲುವಿನೊಂದಿಗೆ ಅಜಿಂಕ್ಯ ರಹಾನೆ ನೇತೃತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡವು ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಸದ್ಯ ಕೆಕೆಆರ್ 13 ಪಂದ್ಯಗಳಿಂದ 13 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಆರನೇ ಸ್ಥಾನಕ್ಕೇರಿದೆ. ಇನ್ನೊಂದೆಡೆ ಮುಂಬೈ ಇಂಡಿಯನ್ಸ್ 13 ಪಂದ್ಯಗಳಿಂದ ಕೇವಲ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿಯೇ ಮುಂದುವರೆದಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories