ಡಕೌಟ್​ ಆದ್ಮೇಲೆ ಸೆಂಚುರಿ; ಅಪರೂಪದ ದಾಖಲೆ ಬರೆದ ಸರ್ಫರಾಜ್ ಖಾನ್!

Published : Oct 19, 2024, 05:33 PM IST

ಒಂದೇ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಡಕೌಟ್ ಆದ ನಂತರ ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸಿದವರ ಪಟ್ಟಿಯಲ್ಲಿ 10ನೇ ಆಟಗಾರನಾಗಿ ಸರ್ಫರಾಜ್ ಖಾನ್ ಸ್ಥಾನ ಪಡೆದಿದ್ದಾರೆ. ಈ ಕುರಿತಾದ ಇಂಟ್ರೆಸ್ಟಿಂಗ್ ಡೀಟೈಲ್ಸ್ ಇಲ್ಲಿದೆ ನೋಡಿ

PREV
110
ಡಕೌಟ್​ ಆದ್ಮೇಲೆ ಸೆಂಚುರಿ; ಅಪರೂಪದ ದಾಖಲೆ ಬರೆದ ಸರ್ಫರಾಜ್ ಖಾನ್!

ನ್ಯೂಜಿಲೆಂಡ್ ಎದುರು ಮೊದಲ ಇನ್ನಿಂಗ್ಸ್‌ನಲ್ಲಿ 46 ರನ್ ಗಳಿಸಿದ ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಬುತ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದೆ. 3 ವರ್ಷಗಳ ನಂತರ ಭಾರತಕ್ಕೆ ಬಂದಿರುವ ನ್ಯೂಜಿಲೆಂಡ್ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ಟೆಸ್ಟ್ ನಡೀತಿದೆ.

210

ಟಾಸ್ ಗೆದ್ದು ಬ್ಯಾಟಿಂಗ್ ತೆಗೆದುಕೊಂಡ ರೋಹಿತ್ ಶರ್ಮಾ ತಪ್ಪು ಮಾಡಿದರು ಎನ್ನುವಂತಹ ಟೀಕೆಗಳು ಕೇಳಿ ಬರುತ್ತಿವೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ಕೇವಲ 46 ರನ್‌ಗಳಿಗೆ ಸರ್ವಪತನ ಕಂಡಿತು. ಇದರಲ್ಲಿ ರಿಷಭ್ ಪಂತ್ ಗಳಿಸಿದ 20 ರನ್ ವೈಯುಕ್ತಿಕ ಗರಿಷ್ಠ ಸ್ಕೋರ್ ಎನಿಸಿಕೊಂಡಿತು.

310

ಇನ್ನು ಇದಾದ ಬಳಿಕ ಮೊದಲ ಇನ್ನಿಂಗ್ ಆರಂಭಿಸಿದ ಕಿವೀಸ್‌, ಡೆವೊನ್ ಕಾನ್ವೆ 91, ರಚಿನ್ ರವೀಂದ್ರ 134 ರನ್ ಮತ್ತು ಬೌಲರ್ ಟಿಮ್ ಸೌಥಿ 65 ರನ್ ಸೇರಿ ಒಟ್ಟು 402 ರನ್ ಗಳಿಸಿ 356 ರನ್ ಮುನ್ನಡೆ ಸಾಧಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಕಳಪೆ ಸಾಧನೆ ಮಾಡಿದ ಭಾರತ ಈಗ ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತ ಕಮ್‌ಬ್ಯಾಕ್. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸಿ ವಿಕೆಟ್ ಒಪ್ಪಿಸಿದರು.

410

ಯಶಸ್ವಿ ಜೈಸ್ವಾಲ್ 35 ರನ್, ವಿರಾಟ್ ಕೊಹ್ಲಿ 70 ರನ್, ರೋಹಿತ್ ಶರ್ಮಾ 52 ರನ್ ಗಳಿಸಿ ಔಟಾದರು. 70* ರನ್‌ಗಳೊಂದಿಗೆ ಸರ್ಫರಾಜ್ ಖಾನ್ ಕಣದಲ್ಲಿದ್ದರು. 3ನೇ ದಿನದ ಅಂತ್ಯಕ್ಕೆ ಭಾರತ 3 ವಿಕೆಟ್‌ಗಳಿಗೆ 231 ರನ್ ಗಳಿಸಿತ್ತು. ಇನ್ನೂ 125 ರನ್ ಹಿನ್ನಡೆಯಲ್ಲಿತ್ತು.

510

ನಾಲ್ಕನೇ ದಿನದಾಟದಲ್ಲಿ ಸರ್ಫರಾಜ್ ಖಾನ್ ಜೊತೆ ರಿಷಭ್ ಪಂತ್ 4ನೇ ವಿಕೆಟ್‌ಗೆ ಜೊತೆಯಾದರು. ಆರಂಭದಿಂದಲೂ ಆಕ್ರಮಣಕಾರಿ ಆಟ ಪ್ರದರ್ಶಿಸಿದರು. ಸರ್ಫರಾಜ್ ಖಾನ್ 110 ಎಸೆತಗಳಲ್ಲಿ ಟೆಸ್ಟ್‌ ವೃತ್ತಿಜೀವನದ ತಮ್ಮ ಮೊದಲ ಶತಕ ಬಾರಿಸಿ ಸಾಧನೆ ಮಾಡಿದರು. 96 ರನ್‌ಗಳಿದ್ದಾಗ ಬೌಂಡರಿ ಬಾರಿಸಿ ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಶತಕ ಪೂರೈಸಿದರು.

610

ಮೊದಲ ಇನ್ನಿಂಗ್ಸ್‌ನಲ್ಲಿ ಡಕೌಟ್ ಆದ ಸರ್ಫರಾಜ್ ಖಾನ್ ಎರಡನೇ ಇನ್ನಿಂಗ್ಸ್‌ನಲ್ಲಿ 100 ರನ್ ಗಳಿಸುವ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ. ಒಂದೇ ಪಂದ್ಯದಲ್ಲಿ ಡಕೌಟ್ ಮತ್ತು ಶತಕ ಬಾರಿಸಿದ ಭಾರತೀಯರ ಪಟ್ಟಿಯಲ್ಲಿ ಸರ್ಫರಾಜ್ ಖಾನ್ 10ನೇ ಸ್ಥಾನ ಪಡೆದಿದ್ದಾರೆ.

710

ಕಳೆದ ತಿಂಗಳು ಚೆನ್ನೈನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶುಭಮನ್ ಗಿಲ್ ಮೊದಲ ಇನ್ನಿಂಗ್ಸ್‌ನಲ್ಲಿ ಡಕೌಟ್ ಆದ ನಂತರ ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸಿದ್ದರು.

810

ಅದರಲ್ಲಿ ಅವರು 119 ರನ್ ಗಳಿಸಿ ಅಜೇಯರಾಗಿದ್ದರು. ಇದೇ ರೀತಿ 2014ರಲ್ಲಿ ಆಕ್ಲೆಂಡ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಭಾರತದ ಶಿಖರ್ ಧವನ್ ಮೊದಲ ಇನ್ನಿಂಗ್ಸ್‌ನಲ್ಲಿ ಡಕೌಟ್ ಆದ ನಂತರ ಎರಡನೇ ಇನ್ನಿಂಗ್ಸ್‌ನಲ್ಲಿ 115 ರನ್ ಗಳಿಸಿದ್ದರು.

910

ಇನ್ನುಳಿದಂತೆ ಮಾಧವ್ ಆಪ್ಟೆ, ಗುಂಡಪ್ಪ ವಿಶ್ವನಾಥ್, ಸುನಿಲ್ ಗವಾಸ್ಕರ್, ದಿಲೀಪ್ ವೆಂಗ್ಸರ್ಕರ್, ಮೊಹಮ್ಮದ್ ಅಜರುದ್ದೀನ್, ಸಚಿನ್ ತೆಂಡೂಲ್ಕರ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಶುಭಮನ್ ಗಿಲ್ ಅವರ ಸರದಿಯಲ್ಲಿ ಸರ್ಫರಾಜ್ ಖಾನ್ ಸ್ಥಾನ ಪಡೆದಿದ್ದಾರೆ.

1010

ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ 462 ರನ್‌ ಗಳಿಸಿ ಸರ್ವಪತನ ಕಂಡಿದೆ. ಈ ಮೂಲಕ ಕಿವೀಸ್‌ಗೆ ಬೆಂಗಳೂರು ಟೆಸ್ಟ್ ಪಂದ್ಯ ಗೆಲ್ಲಲು 107 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿದೆ. 

Read more Photos on
click me!

Recommended Stories