ಬೆಂಗಳೂರು: 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಹೀಗಿದ್ದೂ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ಬಗ್ಗೆ ಭುವನೇಶ್ವರ್ ಕುಮಾರ್ ಮೌನ ಮುರಿದಿದ್ದಾರೆ.
ಆರ್‌ಸಿಬಿ ತಂಡವು ಸತತ ಎರಡು ಬಾರಿ ಚಾಂಪಿಯನ್ ಆಗುವಲ್ಲಿ ತಂಡದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಪ್ರಮುಖ ಪಾತ್ರ ವಹಿಸಿದ್ದರು. ಟೂರ್ನಿಯುದ್ದಕ್ಕೂ ಅದ್ಭುತ ಬೌಲಿಂಗ್ ಪ್ರದರ್ಶನ ತೋರಿದ ಭುವನೇಶ್ವರ್ ಕುಮಾರ್ 28 ವಿಕೆಟ್ ಕಬಳಿಸುವ ಮೂಲಕ ಕೇವಲ ಒಂದು ವಿಕೆಟ್ ಅಂತರದಲ್ಲಿ ಪರ್ಪಲ್ ಕ್ಯಾಪ್ ಮಿಸ್ ಮಾಡಿಕೊಂಡರು.
26
ಭುವನೇಶ್ವರ್ ಕುಮಾರ್‌ಗೆ ಮತ್ತೆ ನಿರಾಸೆ
ಭುವಿ ಪ್ರದರ್ಶನ ನೋಡಿದ ಕ್ರಿಕೆಟ್ ಫ್ಯಾನ್ಸ್ ಖಂಡಿತವಾಗಿಯೂ ಈ ಬಾರಿ ಟೀಂ ಇಂಡಿಯಾಗೆ ಭುವನೇಶ್ವರ್ ಕುಮಾರ್ ಕಮ್‌ಬ್ಯಾಕ್ ಮಾಡಲಿದ್ದಾರೆ ಎಂದು ಭಾವಿಸಿದ್ದರು. ಆದರೆ ಮುಂಬರುವ ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರಿನ ಟಿ20 ಸರಣಿಯಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.
36
ಭುವನೇಶ್ವರ್ ಕುಮಾರ್ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕು ಮುಗಿಯಿತಾ?
ಅದ್ಭುತ ಬೌಲಿಂಗ್ ಪ್ರದರ್ಶನದ ಹೊರತಾಗಿಯೂ 36 ವರ್ಷದ ಭುವನೇಶ್ವರ್ ಕುಮಾರ್ ಅವರನ್ನು ಬಿಸಿಸಿಐ ಆಯ್ಕೆ ಸಮಿತಿಯು ಕಡೆಗಣಿಸಿದ್ದನ್ನು ಕಂಡು, ಭುವಿ ಅಂತಾರಾಷ್ಟ್ರೀಯ ಕ್ರಿಕೆಟ್ ಭವಿಷ್ಯ ಮುಗಿಯಿತಾ ಎನ್ನುವ ಕುರಿತಂತೆ ಕ್ರಿಕೆಟ್ ವಿಶ್ಲೇಷಕರು ಚರ್ಚೆ ನಡೆಸುತ್ತಿದ್ದಾರೆ.
ಐರ್ಲೆಂಡ್, ಇಂಗ್ಲೆಂಡ್ ಎದುರಿನ ಟಿ20 ಸರಣಿಗೆ ಹರ್ಷಿತ್ ರಾಣಾ ಅವರಂತಹ ಆಟಗಾರರಿಗೆ ಅವಕಾಶ ಸಿಕ್ಕಿದೆ. ಆದರೆ ಭರ್ಜರಿ ಫಾರ್ಮ್‌ನಲ್ಲಿರುವ ಭುವಿಯನ್ನು ಆಯ್ಕೆ ಮಾಡದಿರುವ ಬಗ್ಗೆ ಆಯ್ಕೆ ಸಮಿತಿ ಮೇಲೆ ಕ್ರಿಕೆಟ್ ಅಭಿಮಾನಿಗಳಿ ಆಕ್ರೋಶ ಹೊರಹಾಕಿದ್ದಾರೆ. ಇದೆಲ್ಲದರ ನಡುವೆ ಈ ಕುರಿತಂತೆ ಭುವನೇಶ್ವರ್ ಕುಮಾರ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
56
ಭುವನೇಶ್ವರ್ ಕುಮಾರ್ ನೇರ ಮಾತು
ನಾನು ಮತ್ತೆ ಆಡುತ್ತೇನೆ ಎಂದು ಯಾರಿಗೂ ಹೇಳಲು ಹೋಗುವುದಿಲ್ಲ. ಯಾಕೆಂದರೆ ನನ್ನ ಸ್ವಭಾವವೇ ಹಾಗಿದೆ. ಎಲ್ಲರೂ ಅವರವರ ಕೆಲಸವನ್ನು ಮಾಡುತ್ತಿದ್ದಾರೆ. ನಾನು ನನ್ನ ಕೆಲಸವನ್ನು ಮಾಡುತ್ತಿದ್ದೇನೆ. ಆಯ್ಕೆಗಾರರು ಅವರ ಕೆಲಸವನ್ನು ಮಾಡುತ್ತಿದ್ದಾರೆ. ಸೆಲೆಕ್ಟ್ ಮಾಡುವುದು ಅವರ ಜವಾಬ್ದಾರಿ. ನಾನು ಭಾರತ ತಂಡದಲ್ಲಿ ಆಡಲು ಯೋಗ್ಯ ಎಂದೆನಿಸಿದರೆ ಅವರು ಅವರ ಕೆಲಸ ಮಾಡುತ್ತಾರೆ ಎಂದು ಭುವಿ ಹೇಳಿದ್ದಾರೆ.
66
ಭುವನೇಶ್ವರ್ ಕುಮಾರ್ ಟೀಂ ಇಂಡಿಯಾ ಟ್ರ್ಯಾಕ್ ರೆಕಾರ್ಡ್
ಭಾರತ ಪರ 21 ಟೆಸ್ಟ್, 121 ಏಕದಿನ ಹಾಗೂ 87 ಟಿ20 ಪಂದ್ಯಗಳನ್ನಾಡಿರುವ ಭುವನೇಶ್ವರ್ ಕುಮಾರ್ ಕ್ರಮವಾಗಿ 63, 141 ಹಾಗೂ 90 ವಿಕೆಟ್ ಕಬಳಿಸಿದ್ದಾರೆ. ಭುವನೇಶ್ವರ್ ಕುಮಾರ್ 2022ರ ನವೆಂಬರ್ 22ರಂದು ಭಾರತ ಪರ ಕೊನೆಯ ಟಿ20 ಪಂದ್ಯಗಳನ್ನಾಡಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.