ಲಖನೌ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಪಂದ್ಯ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಹೀಗಿರುವಾಗಲೇ ಟೀಂ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದ್ದು, ಉಪನಾಯಕ ಶುಭ್‌ಮನ್ ಗಿಲ್, ಈ ಪಂದ್ಯದಿಂದ ಹೊರಬಿದ್ದಿದ್ದಾರೆ. ಈ ಕುರಿತಾದ ಅಪ್‌ಡೇಟ್ಸ್ ಇಲ್ಲಿದೆ ನೋಡಿ.
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 5 ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಪಂದ್ಯಕ್ಕೆ ಇಲ್ಲಿನ ಏಕಾನ ಕ್ರಿಕೆಟ್ ಸ್ಟೇಡಿಯಂ ಆತಿಥ್ಯ ವಹಿಸಿದೆ.
29
ಟಾಸ್ ಕೊಂಚ ತಡ
ಇಂದು ಸಂಜೆ 6.30ಕ್ಕೆ ನಡೆಯಬೇಕಿದ್ದ ಟಾಸ್ ಕೊಂಚ ತಡವಾಗಿ ನಡೆಯಲಿದೆ. ಸ್ಟೇಡಿಯಂನಾದ್ಯಂತ ಕೊಂಚ ಇಬ್ಬನಿ ಹೆಚ್ಚಾಗಿ ಬೀಳುತ್ತಿರುವುದರಿಂದ ಟಾಸ್ ತಡವಾಗಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
39
ದಟ್ಟವಾದ ಮಂಜು ಪಂದ್ಯಕ್ಕೆ ಅಡ್ಡಿ
ಮಂಜು ಯಾವ ಮಟ್ಟಿಗೆ ಸ್ಟೇಡಿಯಂನಲ್ಲಿ ಆವರಿಸಿದೆ ಎಂದರೆ, ಒಂದು ಸ್ಟ್ಯಾಂಡ್‌ನಲ್ಲಿ ಕುಳಿತ ಫ್ಯಾನ್ಸ್ ಮತ್ತೊಂದು ಸ್ಟ್ಯಾಂಡ್ ಕಾಣಿಸದಷ್ಟು ದಟ್ಟವಾಗಿ ಇಬ್ಬನಿ ಬೀಳುತ್ತಿದೆ ಎಂದು ನೆಟ್ಟಿಗರು ಟ್ವೀಟ್ ಮಾಡುತ್ತಿದ್ದಾರೆ.
ಇನ್ನು ಇದೆಲ್ಲದರ ನಡುವೆ ಟೀಂ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದ್ದು ತಂಡದ ಉಪನಾಯಕ ಹಾಗೂ ಆರಂಭಿಕ ಬ್ಯಾಟರ್ ಶುಭ್‌ಮನ್ ಗಿಲ್ ಗಾಯದ ಸಮಸ್ಯೆಯಿಂದಾಗಿ ನಾಲ್ಕನೇ ಪಂದ್ಯದಿಂದ ಹೊರಬಿದ್ದಿದ್ದಾರೆ.
59
ಗಾಯದ ಸಮಸ್ಯೆಯಿಂದ ಗಿಲ್ ಔಟ್
ಶುಭ್‌ಮನ್ ಗಿಲ್ ಪಾದದ ಗಾಯಕ್ಕೆ ಒಳಗಾಗಿದ್ದು, ನಾಲ್ಕನೇ ಟಿ20 ಪಂದ್ಯಕ್ಕೆ ಅಲಭ್ಯರಾಗಿದ್ದಾರೆ ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇದು ಭಾರತಕ್ಕೆ ಕೊಂಚ ಹಿನ್ನಡೆಯಾಗಿ ಪರಿಣಮಿಸುವ ಸಾಧ್ಯತೆಯಿದೆ.
69
ನಿರಾಸೆ ಮೂಡಿಸಿದ್ದ ಗಿಲ್
ಶುಭ್‌ಮನ್ ಗಿಲ್ ಮೊದಲ ಮೂರು ಪಂದ್ಯಗಳಲ್ಲಿ ನಿರೀಕ್ಷಿತ ರನ್ ಗಳಿಸಲು ಸಾಧ್ಯವಾಗಿರಲಿಲ್ಲ. ಮೊದಲ ಪಂದ್ಯದಲ್ಲಿ 4 ರನ್ ಗಳಿಸಿದ್ದ ಗಿಲ್, ಎರಡನೇ ಪಂದ್ಯದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು.
79
ಮೂರನೇ ಪಂದ್ಯದಲ್ಲೂ ಗಿಲ್ ಫೇಲ್
ಇನ್ನು ಮೂರನೇ ಟಿ20 ಪಂದ್ಯದಲ್ಲಿ ಎಲ್ಲರ ಚಿತ್ತ ಗಿಲ್ ಮೇಲಿತ್ತು. ಆದರೆ ಗಿಲ್ 28 ಎಸೆತಗಳನ್ನು ಎದುರಿಸಿ 5 ಬೌಂಡರಿ ಸಹಿತ 28 ರನ್ ಗಳಿಸಿ ಮಾರ್ಕೊ ಯಾನ್ಸನ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದ್ದರು.
89
ಸಂಜು ಸ್ಯಾಮ್ಸನ್‌ಗೆ ಚಾನ್ಸ್?
ಇದೀಗ ಶುಭ್‌ಮನ್ ಗಿಲ್ ಅನುಪಸ್ಥಿತಿಯಲ್ಲಿ ಸಂಜು ಸ್ಯಾಮ್ಸನ್‌ಗೆ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಸಂಜು ಮೊದಲ ಮೂರು ಟಿ20 ಪಂದ್ಯಗಳಲ್ಲಿ ಬೆಂಚ್ ಕಾಯಿಸಿದ್ದರು.
99
ಸರಣಿ ಗೆಲುವಿನ ವಿಶ್ವಾಸದಲ್ಲಿ ಭಾರತ
ಮೊದಲ ಮೂರು ಪಂದ್ಯಗಳ ಮುಕ್ತಾಯದ ವೇಳೆಗೆ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ 2-1ರ ಮುನ್ನಡೆ ಸಾಧಿಸಿದೆ. ಈ ಪಂದ್ಯವನ್ನು ಭಾರತ ಜಯಿಸಿದರೆ, ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಳ್ಳಲಿದೆ.