ಆಫ್ಘಾನಿಸ್ತಾನ ವಿರುದ್ಧದ 2ನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಇದೆ. ಮೊದಲ ಪಂದ್ಯ ಗೆದ್ದರೂ ಕೆಲ ಅನಿವಾರ್ಯ ಬದಲಾವಣೆ ಮಾಡಲೇಬೇಕಾಗಿದೆ. ಈ ಪೈಕಿ ವರುಣ್ ಚಕ್ರವರ್ತಿ ಹೊರಬಿದ್ದಿದ್ದಾರೆ. ಹಾಗಾದರೆ ಸ್ಥಾನ ಪಡೆಯುವವರು ಯಾರು?
ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ 2ನೇ ಟಿ20 ಪಂದ್ಯಕ್ಕೆ ಭಾರಿ ತಯಾರಿ ನಡೆದಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ಪಂದ್ಯ ಆರಂಭಗೊಳ್ಳಲಿದೆ. ಮೊದಲ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಕಂಡಿದೆ. ಆದರೆ ವಿನ್ನಿಂಗ್ ಕಾಂಬಿನೇಷನ್‌ನಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಪ್ರಮುಖ ಬದಲಾವಣೆಯೊಂದಿಗೆ ಭಾರತ 2ನೇ ಪಂದ್ಯ ಆಡುತ್ತಿದೆ.
25
ವರುಣ್ ಚಕ್ರವರ್ತಿ ಔಟ್
ಇಂದು ಸಂಜೆ ನಡೆಯಲಿರುವ 2ನೇ ಟಿ20 ಪಂದ್ಯಕ್ಕೆ ಮಹತ್ವದ ಬದಲಾವಣೆ ಇದೆ. ಟೀಂ ಇಂಡಿಯಾದ ಪ್ರಮುಖ ಸ್ಪಿನ್ನರ್ ವರುಣ್ ಚಕ್ರವರ್ತಿ ಆಫ್ಘಾನಿಸ್ತಾನ ವಿರುದ್ಧದ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಗಾಯಗೊಂಡಿರುವ ಚಕ್ರವರ್ತಿಗೆ ಹೆಚ್ಚಿನ ವಿಶ್ರಾಂತಿ ಅಗತ್ಯವಿದೆ. ಹೀಗಾಗಿ ವರುಣ್ ಬದಲು ರವಿ ಬಿಶ್ನೋಯ್ ಕಣಕ್ಕಿಳಿಯುವುದು ಬಹುತೇಕ ಪಕ್ಕಾ ಆಗಿದೆ.
ಮೊದಲ ಪಂದ್ಯದಲ್ಲಿ ವೈಭವ್ ಸೂರ್ಯವಂಶಿಗೆ ಅವಕಾಶ ಸಿಕ್ಕಿಲ್ಲ, ಸಂಜು ಸ್ಯಾಮ್ಸನ್ ಆರಂಭಿಕನಾಗಿ ಕಣಕ್ಕಿಳಿದಿದ್ದರು. ಆದರೆ ಸಂಜು ಕೇವಲ 10 ರನ್ ಸಿಡಿಸಿ ನಿರಾಸೆ ಮೂಡಿಸಿದರು. ಇದೀಗ ಎರಡನೇ ಪಂದ್ಯಕ್ಕ ಎಲ್ಲರ ಚಿತ್ತ ವೈಭವ್ ಮೇಲಿದೆ. ಸಂಜು ಬದಲು ವೈಭವ್ ಸೂರ್ಯವಂಶಿಗೆ ಅವಕಾಶ ಸಿಗುತ್ತಾ ಅನ್ನೋ ಲೆಕ್ಕಾಚಾರಗಳು ನಡೆಯುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.