ಹಲವು ಅವಿಸ್ಮರಣೀಯ ಕ್ರಿಕೆಟ್‌ ಕ್ಷಣಗಳಿಗೆ ಸಾಕ್ಷಿಯಾದ 2022..! ಮತ್ತೊಮ್ಮೆ ಮೆಲುಕು ಹಾಕೋಣ ಬನ್ನಿ..!

Published : Dec 28, 2022, 05:05 PM IST

ಬೆಂಗಳೂರು: 2022 ಹಲವು ಅವಿಸ್ಮರಣೀಯ ಕ್ರಿಕೆಟ್ ಕ್ಷಣಗಳಿಗೆ ಸಾಕ್ಷಿಯಾಗಿದೆ. ವಿರಾಟ್ ಕೊಹ್ಲಿ, ಇಶಾನ್ ಕಿಶನ್ ಸೇರಿದಂತೆ ಹಲವು ಕ್ರಿಕೆಟಿಗರು 2022ರ ವರ್ಷವನ್ನು ಸ್ಮರಣೀಯವಾಗಿಸಿಕೊಳ್ಳುವಲ್ಲಿ ಯಶಸ್ವಿಯಾದರು. ವಿರಾಟ್ ಕೊಹ್ಲಿ, ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕ್‌ ವಿರುದ್ದ ಅಬ್ಬರಿಸಿದ್ದ ರೀತಿಯನ್ನು ಯಾವ ಕ್ರಿಕೆಟ್ ಅಭಿಮಾನಿಯೂ ಮರೆಯಲು ಸಾಧ್ಯವಿಲ್ಲ. ಅಂತಹ ಕೆಲ ಕ್ಷಣಗಳನ್ನು ಈ ವರ್ಷ ಮುಗಿಯುವ ವೇಳೆಯಲ್ಲಿ ಮತ್ತೊಮ್ಮೆ ಮೆಲಕು ಹಾಕೋಣ ಬನ್ನಿ...  

PREV
17
ಹಲವು ಅವಿಸ್ಮರಣೀಯ ಕ್ರಿಕೆಟ್‌ ಕ್ಷಣಗಳಿಗೆ ಸಾಕ್ಷಿಯಾದ 2022..! ಮತ್ತೊಮ್ಮೆ ಮೆಲುಕು ಹಾಕೋಣ ಬನ್ನಿ..!
ಶತಕದ ಬರ ನೀಗಿಸಿಕೊಂಡ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ 2019ರಲ್ಲಿ ಕೊನೆಯ ಬಾರಿಗೆ ಶತಕ ಸಿಡಿಸಿದ್ದರು. ಇದಾದ ಬಳಿಕ ಕಳೆದ ಎರಡೂವರೆ ವರ್ಷಗಳಿಂದ ಶತಕ ಸಿಡಿಸಲು ಸಾಧ್ಯವಾಗಿರಲಿಲ್ಲ. ಆದರೆ ಯುಎಇ ನಲ್ಲಿ ನಡೆದ ಏಷ್ಯಾಕಪ್ ಟೂರ್ನಿಯಲ್ಲಿ ಆಫ್ಘಾನಿಸ್ತಾನ ಎದುರು ಆಕರ್ಷಕ ಶತಕ ಸಿಡಿಸುವ ಮೂಲಕ ಕಿಂಗ್ ಕೊಹ್ಲಿ ಶತಕದ ಬರ ನೀಗಿಸಿಕೊಂಡಿದ್ದರು. ಇದಷ್ಟೇ ಅಲ್ಲದೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿ ಅಬ್ಬರಿಸಿದ್ದರು.  

27
ಎರಡನೇ ಟಿ20 ವಿಶ್ವಕಪ್‌ ಟ್ರೋಫಿ ಜಯಿಸಿದ ಇಂಗ್ಲೆಂಡ್

ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಮಣಿಸಿದ ಇಂಗ್ಲೆಂಡ್ ತಂಡವು ಎರಡನೇ ಬಾರಿಗೆ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಮೊದಲು ಇಂಗ್ಲೆಂಡ್ ತಂಡವು 2010ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
 

37
ಯಾರೂ ಮರೆಯಲು ಸಾಧ್ಯವಿಲ್ಲದ ಪಾಕ್ ಎದುರಿನ ಕೊಹ್ಲಿ 'ವಿರಾಟ' ರೂಪ

2022ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಎದುರು ವಿರಾಟ್ ಕೊಹ್ಲಿ ಅಬ್ಬರದ 82 ರನ್ ಸಿಡಿಸುವ ಮೂಲಕ ಟೀಂ ಇಂಡಿಯಾಗೆ ರೋಚಕ ಗೆಲುವು ತಂದುಕೊಟ್ಟಿದ್ದರು. ವಿರಾಟ್ ಕೊಹ್ಲಿ ಆಡಿದ ಆ ಇನಿಂಗ್ಸ್‌, ಇನ್ನೂ ಕೆಲ ವರ್ಷಗಳ ಕಾಲ ಕ್ರಿಕೆಟ್ ಅಭಿಮಾನಿಗಳ ಮನದಲ್ಲಿ ಅಚ್ಚಳಿಯದೇ ಉಳಿಯಲಿದೆ.

47
'ಟಿ20 ಬೆಸ್ಟ್ ಇನಿಂಗ್ಸ್‌ ಆಡಿದ ವಿರಾಟ್ ಕೊಹ್ಲಿ'

ವಿರಾಟ್ ಕೊಹ್ಲಿ, ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ದ 53 ಎಸೆತಗಳಲ್ಲಿ ಅಜೇಯ 82 ರನ್ ಬಾರಿಸುವ ಮೂಲಕ ತಂಡವನ್ನು ಏಕಾಂಗಿಯಾಗಿ ಗೆಲುವಿನ ದಡ ಸೇರಿಕೊಂಡಿದ್ದರು. ಇದು ವಿರಾಟ್ ಕೊಹ್ಲಿ, ಟಿ20 ಕ್ರಿಕೆಟ್‌ನಲ್ಲಿ ಆಡಿದ ಬೆಸ್ಟ್ ಇನಿಂಗ್ಸ್‌ ಎನಿಸಿಕೊಂಡಿತು.

57
ತಮ್ಮ ವೃತ್ತಿಜೀವನದ ಅತಿವೇಗದ ಶತಕ ಸಿಡಿಸಿದ ಚೇತೇಶ್ವರ್ ಪೂಜಾರ:

ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ, 2019ರ ಬಳಿಕ ಶತಕ ಸಿಡಿಸಲು ವಿಫಲವಾಗುತ್ತಾ ಬಂದಿದ್ದರು. ಆದರೆ ಇದೀಗ ಬಾಂಗ್ಲಾದೇಶ ಎದುರಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಕೇವಲ 130 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ತಮ್ಮ ಟೆಸ್ಟ್ ವೃತ್ತಿಜೀವನದ ಅತಿವೇಗದ ಶತಕ ಬಾರಿಸಿದ್ದರು.
 

67
ಅತಿವೇಗದ ದ್ವಿಶತಕ ಚಚ್ಚಿದ ಇಶಾನ್‌ ಕಿಶನ್‌:

ಬಾಂಗ್ಲಾದೇಶ ಎದುರಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್, ಸಿಡಿಲಬ್ಬರದ ದ್ವಿಶತಕ ಸಿಡಿಸುವ ಮೂಲಕ ಹೊಸ ದಾಖಲೆ ಬರೆದಿದ್ದರು. ಕೇವಲ 126 ಎಸೆತಗಳಲ್ಲಿ ದ್ವಿಶತಕ ಬಾರಿಸುವ ಮೂಲಕ ಇಶಾನ್ ಕಿಶನ್, ಅತಿವೇಗದ ದ್ವಿಶತಕ ಬಾರಿಸಿದ ದಾಖಲೆ ಬರೆದರು. ಈ ಮೂಲಕ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ಅತಿವೇಗದ(138) ದ್ವಿಶತಕ ದಾಖಲೆಯನ್ನು ಅಳಿಸಿ ಹಾಕಿದರು.

77
ಚೊಚ್ಚಲ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸಿದ ಇಶಾನ್ ಕಿಶನ್‌:

ಎಡಗೈ ಸ್ಪೋಟಕ ಬ್ಯಾಟರ್ ಇಶಾನ್ ಕಿಶನ್‌, ತಮ್ಮ ಚೊಚ್ಚಲ ಏಕದಿನ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸಿದ ಮೊದಲ ಹಾಗೂ ಏಕೈಕ ಬ್ಯಾಟರ್ ಎನ್ನುವ ವಿಶ್ವದಾಖಲೆಯನ್ನು ಇಶಾನ್ ಕಿಶನ್‌ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

Read more Photos on
click me!

Recommended Stories