ಅಂಧ ಮಹಿಳೆಯರ ಟಿ20 ವಿಶ್ವಕಪ್ ಗೆದ್ದ ಭಾರತ; ರಾಜ್ಯದ ಮೂವರಿಗೆ ಬಂಪರ್ ಬಹುಮಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

Published : Nov 26, 2025, 07:12 AM IST

ಬೆಂಗಳೂರು: ಚೊಚ್ಚಲ ಆವೃತ್ತಿಯ ಅಂಧ ಮಹಿಳೆಯರ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದರ ಬೆನ್ನಲ್ಲೇ ಬೆಂಗಳೂರಿಗೆ ಬಂದಿಳಿದ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಶುಭಹಾರೈಸಿ, ರಾಜ್ಯದ 3 ಆಟಗಾರ್ತಿಯರಿಗೆ ಭರ್ಜರಿ ನಗದು ಬಹುಮಾನ ಹಾಗೂ ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ. 

PREV
16
ಚೊಚ್ಚಲ ಆವೃತ್ತಿ ಅಂಧ ಮಹಿಳೆಯರ ಟಿ20 ವಿಶ್ವಕಪ್ ಗೆದ್ದ ಭಾರತ

ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಚೊಚ್ಚಲ ಆವೃತ್ತಿಯ ಅಂಧ ಮಹಿಳೆಯರ ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ನೇಪಾಳ ಎದುರು ಏಳು ವಿಕೆಟ್‌ಗಳ ಐತಿಹಾಸಿಕ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

26
ಅಂಧ ಮಹಿಳಾ ಕ್ರಿಕೆಟ್ ತಂಡ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡದ ಸದಸ್ಯರಿಗೆ ಅಭಿನಂದಿಸಿ, ಮುಂದಿನ ಕ್ರೀಡಾ ಬದುಕು ಹೀಗೆಯೇ ಯಶಸ್ಸುಗಳಿಂದ ಕೂಡಿರಲಿ ಎಂದು ಶುಭ ಹಾರೈಸಿದರು.

36
ಭಾರತ ತಂಡದ ನಾಯಕಿ ತುಮಕೂರಿನ ಶಿರಾ ಮೂಲದ ದೀಪಿಕಾ ಶ್ಲಾಘಿಸಿದ ಸಿಎಂ

ಈ ವೇಳೆ ಭಾರತ ತಂಡದ ನಾಯಕಿ, ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಆಟದ ವೈಖರಿಯನ್ನು ಸಿಎಂ ಶ್ಲಾಘಿಸಿದರು.

46
ರಾಜ್ಯದ ಮೂರು ಆಟಗಾರ್ತಿಯರಿಗೆ 10 ಲಕ್ಷ ನಗದು, ಸರ್ಕಾರಿ ಉದ್ಯೋಗದ ಆಫರ್

ತಂಡದಲ್ಲಿದ್ದ ಕರ್ನಾಟಕದ ದೀಪಿಕಾ, ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆಯ ಕಾವ್ಯಾ.ವಿ ಹಾಗೂ ಕಾವ್ಯಾ ಎನ್‌.ಆರ್‌.ಗೆ ತಲಾ 10 ಲಕ್ಷ ರು., ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿದ್ದಾರೆ.

56
ಬೇರೆ ರಾಜ್ಯದ 13 ಆಟಗಾರ್ತಿಯರಿಗೆ ತಲಾ 2 ಲಕ್ಷ ರುಪಾಯಿ ನಗದು ಬಹುಮಾನ

ಇನ್ನು ಇದಷ್ಟೇ ಅಲ್ಲದೇ ಭಾರತ ತಂಡದಲ್ಲಿದ್ದ ಬೇರೆ ರಾಜ್ಯಗಳ ಒಟ್ಟು 13 ಆಟಗಾರ್ತಿಯರಿಗೆ ತಲಾ 2 ಲಕ್ಷ ರು. ಬಹುಮಾನವನ್ನು ಸಿಎಂ ಘೋಷಿಸಿದರು. ಇದರಿಂದ ತಂಡದಲ್ಲಿದ್ದ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೂ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಸಿಗಲಿದೆ.

66
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಎಂ ಸಿ ಸುಧಾಕರ್, ಎಚ್‌ ಸಿ ಮಹದೇವಪ್ಪ ಭಾಗಿ

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಉಪಸ್ಥಿತರಿದ್ದು, ಆಟಗಾರ್ತಿಯರಿಗೆ ಶುಭ ಹಾರೈಸಿದರು

Read more Photos on
click me!

Recommended Stories