ಬಾರ್ಡರ್-ಗವಾಸ್ಕರ್ ಟ್ರೋಫಿ: ಇಂಡೋ-ಆಸೀಸ್ ಟೆಸ್ಟ್‌ ಸರಣಿಗೆ ಯಾಕಿಷ್ಟು ಮಹತ್ವ ಗೊತ್ತಾ..? ಇಲ್ಲಿವೆ 6 ಕಾರಣ

First Published | Feb 9, 2023, 1:18 PM IST

ನಾಗ್ಪುರ(ಫೆ.09): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ 4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಇಂದಿನಿಂದ ಆರಂಭವಾಗಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಭಾರತದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಯಾಕಿಷ್ಟು ಮಹತ್ವ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿವೆ ನೋಡಿ ಉತ್ತರ.
 

1. ಹನ್ನೊಂದು ತಿಂಗಳುಗಳ ಬಳಿಕೆ ಭಾರತದಲ್ಲಿ ಟೆಸ್ಟ್ ಕ್ರಿಕೆಟ್‌ ಆಗಮನ:

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಮೂಲಕ ಭಾರತಕ್ಕೆ ಟೆಸ್ಟ್ ಕ್ರಿಕೆಟ್ ಎಂಟ್ರಿ ಕೊಟ್ಟಿದೆ. ಭಾರತ ತಂಡವು 2022ರ ಮಾರ್ಚ್‌ನಲ್ಲಿ ಕೊನೆಯ ಬಾರಿಗೆ ತವರಿನಲ್ಲಿ ಶ್ರೀಲಂಕಾ ಎದುರು ಟೆಸ್ಟ್ ಸರಣಿಯನ್ನಾಡಿತ್ತು. ಈ ಸರಣಿಯನ್ನು ಟೀಂ ಇಂಡಿಯಾ 2-0 ಅಂತರದಲ್ಲಿ ಕ್ಲೀನ್‌ಸ್ವೀಪ್ ಮಾಡಿತ್ತು. ಇದಾದ ಬಳಿಕ ತವರಿನಾಚೆ ಬಾಂಗ್ಲಾದೇಶ ಹಾಗೂ ಇಂಗ್ಲೆಂಡ್ ಎದುರು ಟೆಸ್ಟ್ ಸರಣಿಯನ್ನಾಡಿತ್ತು.
 

2. 2017ರ ಬಳಿಕ ಟೆಸ್ಟ್‌ ಆಡಲು ಭಾರತಕ್ಕೆ ಬಂದಿದೆ ಆಸ್ಟ್ರೇಲಿಯಾ:

ಟೆಸ್ಟ್‌ ನಂ.1 ತಂಡವಾಗಿರುವ ಆಸ್ಟ್ರೇಲಿಯಾ ಕ್ರಿಕೆಟ್‌ ತಂಡವು ಬರೋಬ್ಬರಿ 2017ರ ಬಳಿಕ ಮೊದಲ ಬಾರಿಗೆ ಟೆಸ್ಟ್ ಸರಣಿಯನ್ನಾಡಲು ಭಾರತಕ್ಕೆ ಬಂದಿಳಿದೆ. 4 ಪಂದ್ಯಗಳ ಟೆಸ್ಟ್ ಸರಣಿಯ ವೇಳಾಪಟ್ಟಿ ಹೀಗಿದೆ.

ಫೆಬ್ರವರಿ 9-12: ಮೊದಲ ಟೆಸ್ಟ್- ನಾಗ್ಪುರ
ಫೆಬ್ರವರಿ 17-21: ಎರಡನೇ ಟೆಸ್ಟ್- ಡೆಲ್ಲಿ
ಮಾರ್ಚ್‌ 01-05: ಮೂರನೇ ಟೆಸ್ಟ್ - ಧರ್ಮಶಾಲಾ
ಮಾರ್ಚ್‌ 09-13: ನಾಲ್ಕನೇ ಟೆಸ್ಟ್ - ಅಹಮದಾಬಾದ್
 

Tap to resize

3. ಉಭಯ ತಂಡಗಳಿಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌ಗೇರಲು ಮಹತ್ವದ ಸರಣಿ

ಸದ್ಯ ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ರೇಸ್‌ನ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನದಲ್ಲಿದ್ದು, ಈ ಸರಣಿ ಉಭಯ ತಂಡಗಳ ಫೈನಲ್ ರೇಸ್ ನಿರ್ಧರಿಸಲಿದೆ.
 

4. ಟೆಸ್ಟ್‌ಗೆ ಕಮ್‌ಬ್ಯಾಕ್ ಮಾಡಿರುವ ರವೀಂದ್ರ ಜಡೇಜಾ:

ಟೀಂ ಇಂಡಿಯಾ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ, ಟೀಂ ಇಂಡಿಯಾ ಕೂಡಿಕೊಂಡಿರುವುದು ತಂಡದ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ. ಗಾಯದ ಸಮಸ್ಯೆಯಿಂದ 5 ತಿಂಗಳುಗಳಿಂದ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದ ಜಡ್ಡು, ತಂಡದ ಬ್ಯಾಟಿಂಗ್ ಹಾಗೂ ಬೌಲಿಂಗ್‌ ಬಲ ಹೆಚ್ಚಿಸಿದ್ದಾರೆ.
 

5. ನೇಥನ್ ಲಯನ್‌ ಭೀತಿಯಲ್ಲಿ ಟೀಂ ಇಂಡಿಯಾ:

ಭಾರತದಂತೆ ಆಸ್ಟ್ರೇಲಿಯಾ ಕೂಡಾ ಅನುಭವಿ ಆಫ್‌ಸ್ಪಿನ್ನರ್ ನೇಥನ್ ಲಯನ್ ಅವರನ್ನು ಹೊಂದಿದೆ. ನೇಥನ್ ಲಯನ್‌, ಕಳೆದ ಬಾರಿ ಭಾರತದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 19  ವಿಕೆಟ್ ಗಳಿಸುವ ಮೂಲಕ, ಟೆಸ್ಟ್ ಸರಣಿಯಲ್ಲಿ ಜಂಟಿ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಆಗಿ ಹೊರಹೊಮ್ಮಿದ್ದರು. ಭಾರತದಲ್ಲಿ 7 ಪಂದ್ಯಗಳನ್ನಾಡಿ ಲಯನ್ 34 ವಿಕೆಟ್ ಕಬಳಿಸಿದ್ದರು.

6. ತವರಿನಲ್ಲಿ ಮತ್ತೊಮ್ಮೆ ಅಬ್ಬರಿಸುವ ನಿರೀಕ್ಷೆಯಲ್ಲಿ ರೋಹಿತ್ ಶರ್ಮಾ:

ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ, ಟೆಸ್ಟ್‌ ಕ್ರಿಕೆಟ್‌ನಲ್ಲಿ ತವರಿನಲ್ಲಿ ಅತ್ಯದ್ಭುತ ಲಯವನ್ನು ಹೊಂದಿದ್ದಾರೆ. ರೋಹಿತ್ ಶರ್ಮಾ, ತವರಿನಲ್ಲಿ 20 ಟೆಸ್ಟ್‌ ಪಂದ್ಯಗಳನ್ನಾಡಿ 73.33ರ ಬ್ಯಾಟಿಂಗ್ ಸರಾಸರಿಯಲ್ಲಿ 1,760 ರನ್ ಬಾರಿಸಿದ್ದು, ಮತ್ತೆ ಹಿಟ್‌ಮ್ಯಾನ್ ತವರಿನಲ್ಲಿ ಮಿಂಚುವ ವಿಶ್ವಾಸದಲ್ಲಿದ್ದಾರೆ. 

Latest Videos

click me!