ಗಾಯದ ಮೇಲೆ ಮತ್ತೊಂದು ಬರೆ, ಆಸೀಸ್‌ಗೆ ಡಬಲ್‌ ಶಾಕ್‌, ಮತ್ತೋರ್ವ ವೇಗಿ ಔಟ್..!

First Published Feb 5, 2023, 1:06 PM IST

ನಾಗ್ಪುರ: ಭಾರತ ವಿರುದ್ದ 4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನಾಡಲು ಆಸ್ಟ್ರೇಲಿಯಾ ತಂಡವು ಭಾರತಕ್ಕೆ ಬಂದಿಳಿದಿದೆ. ಬಹುತೇಕ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ಅರ್ಹತೆ ಗಿಟ್ಟಿಸಿಕೊಂಡಿರುವ ಆಸ್ಟ್ರೇಲಿಯಾಗೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದೆ. ಇದೀಗ ಆಸೀಸ್ ಮತ್ತೋರ್ವ ವೇಗಿ ಕೂಡಾ ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
 

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ 4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ಫೆಬ್ರವರಿ 09ರಿಂದ ಆರಂಭವಾಗಲಿದ್ದು, ಮೊದಲ ಟೆಸ್ಟ್ ಪಂದ್ಯಕ್ಕೆ ನಾಗ್ಪುರ ಆತಿಥ್ಯವನ್ನು ವಹಿಸಿದೆ.
 

ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ತಂಡದ ಪ್ರಮುಖ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್‌, ಕೈಬೆರಳಿನ ಗಾಯದಿಂದ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದರು.
 

ಈ ಆಘಾತದಿಂದ ಹೊರಬರುವ ಮುನ್ನವೇ ಇದೀಗ ಆಸ್ಟ್ರೇಲಿಯಾ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು, 32 ವರ್ಷದ ಅನುಭವಿ ವೇಗಿ ಜೋಶ್ ಹೇಜಲ್‌ವುಡ್‌ ಕೂಡಾ ಇದೀಗ ಗಾಯದ ಸಮಸ್ಯೆಯಿಂದ ಮೊದಲ ಟೆಸ್ಟ್‌ ಪಂದ್ಯದಿಂದ ಹೊರಬಿದ್ದಿದ್ದಾರೆ.
 

ಹೌದು, ಜೋಶ್ ಹೇಜಲ್‌ವುಡ್‌, ಸದ್ಯ ಹಿಮ್ಮಡಿ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದು, ಎರಡನೇ ಟೆಸ್ಟ್ ಪಂದ್ಯದಲ್ಲೂ ಹೇಜಲ್‌ವುಡ್‌ ಪಾಲ್ಗೊಳ್ಳುವುದು ಅನುಮಾನ ಎನಿಸಿದೆ.
 

ತಮ್ಮ ಎಡಗಾಲು ಹಿಮ್ಮಡಿ ನೋವಿನ ಕುರಿತಂತೆ ಪ್ರತಿಕ್ರಿಯಿಸಿರುವ ಜೋಶ್ ಹೇಜಲ್‌ವುಡ್, "ಮೊದಲ ಟೆಸ್ಟ್‌ನಲ್ಲಿ ಪಾಲ್ಗೊಳ್ಳುವುದರ ಬಗ್ಗೆ ಖಚಿತತೆಯಿಲ್ಲ. ಇನ್ನೂ ಸಾಕಷ್ಟು ಸಮಯಾವಕಾಶವಿದೆ ಎಂದು ಬಲಗೈ ವೇಗಿ ಹೇಳಿದ್ದಾರೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ವೇಳಾಪಟ್ಟಿ ಹೀಗಿದೆ: 

ಫೆಬ್ರವರಿ 9-12: ಮೊದಲ ಟೆಸ್ಟ್- ನಾಗ್ಪುರ
ಫೆಬ್ರವರಿ 17-21: ಎರಡನೇ ಟೆಸ್ಟ್- ಡೆಲ್ಲಿ
ಮಾರ್ಚ್‌ 01-05: ಮೂರನೇ ಟೆಸ್ಟ್ - ಧರ್ಮಶಾಲಾ
ಮಾರ್ಚ್‌ 09-13: ನಾಲ್ಕನೇ ಟೆಸ್ಟ್ - ಅಹಮದಾಬಾದ್
 

ಭಾರತ ಸರಣಿಗೆ ಆಸ್ಟ್ರೇಲಿಯಾ ತಂಡ ಹೀಗಿದೆ ನೋಡಿ:

ಪ್ಯಾಟ್ ಕಮಿನ್ಸ್‌(ನಾಯಕ), ಆಸ್ಟನ್ ಅಗರ್, ಸ್ಕಾಟ್ ಬೋಲೆಂಡ್, ಅಲೆಕ್ಸ್ ಕ್ಯಾರಿ, ಕ್ಯಾಮರೋನ್ ಗ್ರೀನ್, ಜೋಶ್ ಹೇಜಲ್‌ವುಡ್‌, ಪೀಟರ್‌ ಹ್ಯಾಂಡ್ಸ್‌ಕಂಬ್, ಟ್ರಾವಿಸ್ ಹೆಡ್‌, ಉಸ್ಮಾನ್ ಖವಾಜ, ಮಾರ್ನಸ್ ಲಬುಶೇನ್, ನೇಥನ್ ಲಯನ್, ಲಾನ್ಸ್ ಮೋರಿಸ್, ಟೋಡ್ ಮುರ್ಫೆ, ಮ್ಯಾಥ್ಯೂ ರೆನ್‌ಶೋ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್‌, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್
 

click me!