ಮೆಲ್ಬರ್ನ್: ಭಾರತ-ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ತಂಡದಲ್ಲಿ ಪ್ರಮುಖ 4 ಬದಲಾವಣೆಗಳನ್ನು ಮಾಡಲಾಗಿದೆ.
ಹೌದು, ಡಿಸೆಂಬರ್ 26ರಂದು ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸಲಿದ್ದಾರೆ. ಇಬ್ಬರು ಆಟಗಾರರು ಎರಡನೇ ಟೆಸ್ಟ್ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲಿದ್ದಾರೆ. ಎರಡನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಹೀಗಿದೆ ನೋಡಿ.