ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿ ಸಾಗುತ್ತಿದೆ. ಈ ಟೆಸ್ಟ್ ಸರಣಿ ಮುಕ್ತಾಯವಾಗುತ್ತಿದ್ದಂತೆಯೇ ಉಭಯ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಲಿವೆ.
28
ದಕ್ಷಿಣ ಆಫ್ರಿಕಾ ಎದುರಿನ ಸರಣಿ ನವೆಂಬರ್ 20ರಿಂದ ಆರಂಭ
ನ.30ರಿಂದ ಆರಂಭಗೊಳ್ಳಲಿರುವ ದಕ್ಷಿಣ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯಿಂದ ಭಾರತದ ತಾರಾ ಕ್ರಿಕೆಟಿಗರಾದ ಜಸ್‌ಪ್ರೀತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
38
ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ
ಬೂಮ್ರಾ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದು, ಅವರ ಕಾರ್ಯದೊತ್ತಡ ತಗ್ಗಿಸಲು ವಿಶ್ರಾಂತಿ ನೀಡಲಾಗುತ್ತದೆ ಎಂದು ವರದಿಯಾಗಿದೆ. ಮುಂಬರುವ 2026ರ ಥಸುಸು ಟಿ20 ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಬುಮ್ರಾಗೆ ರೆಸ್ಟ್ ನೀಡಲು ಮುಂದಾಗಿದೆ ಎಂದು ವರದಿಯಾಗಿದೆ.
ಮತ್ತೊಂದೆಡೆ ಹಾರ್ದಿಕ್ ತೊಡೆಯ ಗಾಯಕ್ಕೆ ತುತ್ತಾಗಿ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ನೇರವಾಗಿ ಏಕದಿನ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡುವುದು ಸೂಕ್ತವಲ್ಲ ಎಂದು ಬಿಸಿಸಿಐ ವೈದ್ಯಕೀಯ ತಂಡ ಹೇಳಿದೆ.
58
ಪಾಂಡ್ಯ ಬದಲು ರೆಡ್ಡಿಗೆ ಅವಕಾಶ
ಹೀಗಾಗಿ ದ.ಆಫ್ರಿಕಾ ಸರಣಿಯಿಂದ ಹಾರ್ದಿಕ್ ಪಾಂಡ್ಯ ಅವರನ್ನು ದೂರವಿಡುವ ಸಾಧ್ಯತೆಯಿದ್ದು, ನಿತೀಶ್ ಕುಮಾರ್ ರೆಡ್ಡಿಗೆ ಮತ್ತೊಂದು ಅವಕಾಶ ನೀಡುವ ಸಾಧ್ಯತೆಯಿದೆ.
68
ಕೊಹ್ಲಿ-ರೋಹಿತ್ ಮತ್ತೆ ಮೈದಾನಕ್ಕೆ
ಇನ್ನು ಟೀಂ ಇಂಡಿಯಾದ ಇಬ್ಬರು ದಿಗ್ಗಜ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಮತ್ತೊಮ್ಮೆ ಭಾರತದ ಜೆರ್ಸಿಯಲ್ಲಿ ಮೈದಾನಕ್ಕಿಳಿಯಲು ರೆಡಿಯಾಗಿದ್ದಾರೆ. ಆಸ್ಟ್ರೇಲಿಯಾ ಎದುರಿನ ಸಿಡ್ನಿ ಏಕದಿನ ಪಂದ್ಯದಲ್ಲಿ ರೋಹಿತ್-ಕೊಹ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿತ್ತು.
78
ಶ್ರೇಯಸ್ ಅಯ್ಯರ್ ಕೂಡಾ ಡೌಟ್
ಇನ್ನು ಮುಂಬೈ ಮೂಲದ ಸ್ಟಾರ್ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಕೂಡಾ ಸಂಪೂರ್ಣ ಫಿಟ್ ಆಗಿರದ ಹಿನ್ನೆಲೆಯಲ್ಲಿ ಹರಿಣಗಳ ಎದುರಿನ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವುದು ಅನುಮಾನ ಎನಿಸಿದೆ. ಶ್ರೇಯಸ್ ಅಯ್ಯರ್, ಸಿಡ್ನಿ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ಯತ್ನದಲ್ಲಿ ಗಾಯಗೊಂಡಿದ್ದರು.
88
ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿಗೆ ಭಾರತ ಸಂಭಾವ್ಯ ತಂಡ
ಶುಭ್‌ಮನ್ ಗಿಲ್(ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ವರುಣ್ ಚಕ್ರವರ್ತಿ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ರಿಷಭ್ ಪಂತ್(ವಿಕೆಟ್ ಕೀಪರ್), ಅರ್ಶದೀಪ್ ಸಿಂಗ್, ವಾಷಿಂಗ್ಟನ್ ಸುಂದರ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ.