ಈ 5 ಸ್ಟಾರ್ ಆಟಗಾರರನ್ನು ಕೈಬಿಟ್ಟು ಮಹಾ ಯಡವಟ್ಟು ಮಾಡಿಕೊಂಡ ಐಪಿಎಲ್ ಫ್ರಾಂಚೈಸಿ!

First Published | Nov 19, 2024, 3:50 PM IST

ಬೆಂಗಳೂರು: 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಆಟಗಾರರ ಹರಾಜಿಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಹೀಗಿರುವಾಗಲೇ ಕೆಲವು ಫ್ರಾಂಚೈಸಿಗಳಿಗೆ ತಮ್ಮ ತಂಡದಲ್ಲಿದ್ದ ಸ್ಟಾರ್ ಆಟಗಾರರನ್ನು ಕೈಬಿಟ್ಟು ತಪ್ಪು ಮಾಡಿದ ಆತಂಕ ಎದುರಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

2025ರ ಐಪಿಎಲ್ ಆಟಗಾರರ ಮೆಗಾ ಹರಾಜು ಇದೇ ನವೆಂಬರ್ 24 ಹಾಗೂ 25ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯಲಿದೆ. ಒಟ್ಟು 1574 ಆಟಗಾರರು ಹರಾಜಿಗೆ ಹೆಸರು ನೋಂದಾಯಿಸಿದ್ದರು. ಈ ಪೈಕಿ ಬಿಸಿಸಿಐ 574 ಆಟಗಾರರ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡಿದೆ.

ಐಪಿಎಲ್ ಮೆಗಾ ಹರಾಜಿಗೂ ಮುನ್ನ ಆರ್‌ಸಿಬಿ ಸೇರಿದಂತೆ ಎಲ್ಲಾ 10 ತಂಡಗಳು ತಮಗೆ ಬೇಕಾದ ಆಟಗಾರರನ್ನು ರೀಟೈನ್ ಮಾಡಿಕೊಂಡು, ಇನ್ನು ಕೆಲವು ಆಟಗಾರರನ್ನು ರಿಲೀಸ್ ಮಾಡಿದೆ. ಆದರೆ ಈ 6 ಆಟಗಾರರನ್ನು ಕೈಬಿಟ್ಟು ಫ್ರಾಂಚೈಸಿಗಳಯ ತಪ್ಪು ಮಾಡಿದವ ಎನ್ನುವ ಪ್ರಶ್ನೆ ಕಾಡಲಾರಂಭಿಸಿದೆ.

Tap to resize

1. ಜೋಸ್ ಬಟ್ಲರ್:

ರಾಜಸ್ಥಾನ ರಾಯಲ್ಸ್‌ ತಂಡದ ಬ್ಯಾಟಿಂಗ್ ಬೆನ್ನೆಲುಬು ಎನಿಸಿಕೊಂಡಿದ್ದ ಜೋಸ್ ಬಟ್ಲರ್ ಅವರನ್ನು ಅಚ್ಚರಿಯ ರೀತಿಯಲ್ಲಿ ರಿಲೀಸ್ ಮಾಡಿದೆ. ಬಟ್ಲರ್ ಮತ್ತೆ ರಾಜಸ್ಥಾನ ಸೇರುವುದು ಅನುಮಾನ ಎನಿಸಿದೆ.

2. ಯುಜುವೇಂದ್ರ ಚಹಲ್:

ಐಪಿಎಲ್‌ನ ಯಶಸ್ವಿ ಲೆಗ್‌ ಸ್ಪಿನ್ನರ್ ಎನಿಸಿಕೊಂಡಿರುವ ಯುಜುವೇಂದ್ರ ಚಹಲ್ ಅವರನ್ನು ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು ರಿಲೀಸ್ ಮಾಡಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಕಳೆದ 6 ಐಪಿಎಲ್ ಆವೃತ್ತಿಯಲ್ಲೂ ಚಹಲ್ 18ಕ್ಕಿಂತ ಹೆಚ್ಚು ವಿಕೆಟ್ ಕಬಳಿಸಿದ್ದಾರೆ.

3. ರಿಷಭ್ ಪಂತ್:

ರಿಷಭ್ ಪಂತ್ ಅವರನ್ನು ಡೆಲ್ಲಿ ಫ್ರಾಂಚೈಸಿ ಉಳಿಸಿಕೊಳ್ಳಲು ಉಳಿಯಲಿಲ್ಲ ಎಂದು ವರದಿಯಾಗಿದೆ. ಆದರೆ ಡೆಲ್ಲಿ ಫ್ರಾಂಚೈಸಿ ಕೊಂಚ ಹೆಚ್ಚು ಪ್ರಯತ್ನ ಪಟ್ಟಿದ್ದರೇ, ಪಂತ್ ಡೆಲ್ಲಿ ತಂಡದಲ್ಲೇ ಉಳಿಯುವ ಸಾಧ್ಯತೆಯಿತ್ತು.

4. ಆರ್ಶದೀಪ್ ಸಿಂಗ್:

ಎಡಗೈ ವೇಗದ ಬೌಲರ್ ಆರ್ಶದೀಪ್ ಸಿಂಗ್ ಅವರನ್ನು ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಆರ್‌ಟಿಎಂ ಕಾರ್ಡ್ ಬಳಸಿ ತನ್ನಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ. ಆದರೂ ಆರ್ಶದೀಪ್ ಸಿಂಗ್ ಹರಾಜಿಗೆ ಬಿಟ್ಟಿರುವುದು ಅಪಾಯ ಮೈಮೇಲೆ ಎಳೆದುಕೊಂಡಂತೆ.

5. ಮೊಹಮ್ಮದ್ ಶಮಿ:

2023ರ ಐಪಿಎಲ್ ಟೂರ್ನಿಯ ಪರ್ಪಲ್ ಕ್ಯಾಪ್ ವಿಜೇತ ವೇಗಿ ಮೊಹಮ್ಮದ್ ಶಮಿ ಅವರನ್ನು ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಅಚ್ಚರಿಯ ರೀತಿಯಲ್ಲಿ ಕೈಬಿಟ್ಟಿದೆ. ಇದು ಗುಜರಾತ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸುವ ಸಾಧ್ಯತೆಯಿದೆ.
 

Latest Videos

click me!