ಭಾರತ ಎದುರಿನ ಏಕದಿನ ಸರಣಿಗೂ ಮುನ್ನ ಆಸ್ಟ್ರೇಲಿಯಾಗೆ ಬಿಗ್ ಶಾಕ್! ಸ್ಟಾರ್ ಆಲ್ರೌಂಡರ್ ಔಟ್

Published : Oct 18, 2025, 01:43 PM IST

ಪರ್ತ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಗೂ ಮುನ್ನ ಆತಿಥೇಯ ಆಸ್ಟ್ರೇಲಿಯಾ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಪ್ರಮುಖ ಆಲ್ರೌಂಡರ್ ಭಾರತ ಎದುರಿನ ಸರಣಿಯಿಂದಲೇ ಹೊರಬಿದ್ದಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

PREV
17
ಹೈವೋಲ್ಟೇಜ್ ಸರಣಿಗೆ ಕ್ಷಣಗಣನೆ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಹೈವೋಲ್ಟೇಜ್ ಏಕದಿನ ಸರಣಿಯು ಅಕ್ಟೋಬರ್ 19ರಿಂದ ಆರಂಭವಾಗಲಿದ್ದು, ಈ ಪಂದ್ಯಗಳನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

27
ಕೊಹ್ಲಿ - ರೋಹಿತ್ ಮೇಲೆ ಹೆಚ್ಚಿದ ನಿರೀಕ್ಷೆ

ಏಳು ತಿಂಗಳ ಬಳಿಕ ಭಾರತದ ಕ್ರಿಕೆಟ್ ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟೀಂ ಇಂಡಿಯಾ ಪರ ಕಣಕ್ಕಿಳಿಯುತ್ತಿರುವುದರಿಂದ ಸಹಜವಾಗಿಯೇ ನಿರೀಕ್ಷೆಗಳು ಜೋರಾಗಿವೆ. ಹೀಗಿರುವಾಗಲೇ ಆತಿಥೇಯ ಆಸ್ಟ್ರೇಲಿಯಾಗೆ ಬಿಗ್ ಶಾಕ್ ಎದುರಾಗಿದೆ.

37
ಗ್ರೀನ್ ಬದಲಿಗೆ ಲಬುಶೇನ್ ಸೇರ್ಪಡೆ

ಭಾರತ ಎದುರಿನ ಸೀಮಿತ ಓವರ್‌ಗಳ ಸರಣಿಯಿಂದ ಆಸ್ಟ್ರೇಲಿಯಾದ ಸ್ಟಾರ್ ಆಲ್ರೌಂಡರ್ ಕ್ಯಾಮರೋನ್ ಗ್ರೀನ್ ಹೊರಬಿದ್ದಿದ್ದಾರೆ. ಹೀಗಾಗಿ ಗ್ರೀನ್ ಬದಲಿಗೆ ಮಾರ್ನಸ್ ಲಬುಶೇನ್ ಕಾಂಗರೂ ಪಡೆ ಕೂಡಿಕೊಂಡಿದ್ದಾರೆ.

47
ಆಸ್ಟ್ರೇಲಿಯಾಗೆ ದೊಡ್ಡ ಹಿನ್ನಡೆ

26 ವರ್ಷದ ಪ್ರತಿಭಾನ್ವಿತ ಆಲ್ರೌಂಡರ್ ಕ್ಯಾಮರೋನ್ ಗ್ರೀನ್, ಭಾರತ ಎದುರಿನ ಸರಣಿಯಿಂದ ಹೊರಬಿದ್ದಿರುವುದು ಕಾಂಗರೂ ಪಡೆಗೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸುವ ಸಾಧ್ಯತೆಯಿದೆ.

57
ಆಷಸ್ ಸರಣಿಗೆ ಗ್ರೀನ್ ಕಮ್‌ಬ್ಯಾಕ್

ಸಣ್ಣ ಪ್ರಮಾಣದ ಗಾಯದಿಂದ ಬಳಲುತ್ತಿರುವ ಕ್ಯಾಮರೋನ್ ಗ್ರೀನ್‌ಗೆ ಕ್ರಿಕೆಟ್ ಆಸ್ಟ್ರೇಲಿಯಾ ವಿಶ್ರಾಂತಿ ನೀಡಲಾಗಿದ್ದು, ಮುಂಬರುವ ಪ್ರತಿಷ್ಠಿತ ಇಂಗ್ಲೆಂಡ್ ಎದುರಿನ ಆಷಸ್ ಟೆಸ್ಟ್ ಸರಣಿಗೆ ಕಾಂಗರೂ ಪಡೆ ಕೂಡಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

67
ಸ್ಟಾರ್ಕ್ ಮೇಲೆ ಹೆಚ್ಚಿದ ಜವಾಬ್ದಾರಿ!

ಭಾರತ ಎದುರಿನ ಏಕದಿನ ಸರಣಿಗೆ ಈಗಾಗಲೇ ಪ್ಯಾಟ್ ಕಮಿನ್ಸ್ ಅಲಭ್ಯರಾಗಿದ್ದಾರೆ. ಇದೀಗ ಕ್ಯಾಮರೋನ್ ಗ್ರೀನ್ ಕೂಡಾ ತಂಡದಿಂದ ಹೊರಬಿದ್ದಿರುವುದರಿಂದ ವೇಗದ ಬೌಲಿಂಗ್ ಜವಾಬ್ದಾರಿಯನ್ನು ಮಿಚೆಲ್ ಸ್ಟಾರ್ಕ್ ಹಾಗೂ ಜೋಶ್ ಹೇಜಲ್‌ವುಡ್ ಮುನ್ನಡೆಸಬೇಕಿದೆ.

77
ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ

ಆಸ್ಟ್ರೇಲಿಯಾ ಎದುರು ಟೀಂ ಇಂಡಿಯಾ ಅಕ್ಟೋಬರ್ 19, 23 ಹಾಗೂ 25ರಂದು ಕ್ರಮವಾಗಿ ಪರ್ತ್, ಅಡಿಲೇಡ್ ಹಾಗೂ ಸಿಡ್ನಿಯಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ.

Read more Photos on
click me!

Recommended Stories