ICC T20 World Cup ಟೂರ್ನಿಯಲ್ಲಿ ಗರಿಷ್ಠ ಸಿಕ್ಸರ್ ಬಾರಿಸಿದ ಟಾಪ್ 5 ಕ್ರಿಕೆಟಿಗರಿವರು..!

Published : Oct 09, 2022, 04:39 PM IST

ಬೆಂಗಳೂರು: ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಅಕ್ಟೋಬರ್ 16ರಿಂದ ಆರಂಭವಾಗಿ ನವೆಂಬರ್ 13ರವರೆಗೆ ನಡೆಯಲಿದೆ. ಹೊಡಿಬಡಿಯಾಟಕ್ಕೆ ಹೆಸರುವಾಸಿಯಾದ ಟಿ20 ವಿಶ್ವಕಪ್‌ನಲ್ಲಿ ಮತ್ತೊಮ್ಮೆ ರನ್‌ ಮಳೆ ಹರಿಯುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ಸಿಕ್ಸರ್ ಬಾರಿಸಿದ ಟಾಪ್ 5 ಬ್ಯಾಟರ್‌ಗಳ ಕಂಪ್ಲೀಟ್ ಡೀಟೈಲ್ಸ್‌ ಇಲ್ಲಿದೆ ನೋಡಿ.  

PREV
15
ICC T20 World Cup ಟೂರ್ನಿಯಲ್ಲಿ ಗರಿಷ್ಠ ಸಿಕ್ಸರ್ ಬಾರಿಸಿದ ಟಾಪ್ 5 ಕ್ರಿಕೆಟಿಗರಿವರು..!
1. ಕ್ರಿಸ್‌ ಗೇಲ್‌- 63 ಸಿಕ್ಸರ್

ಯೂನಿವರ್ಸಲ್ ಬಾಸ್‌ ಖ್ಯಾತಿಯ ಕ್ರಿಸ್‌ ಗೇಲ್‌, ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಒಟ್ಟು 33 ಪಂದ್ಯಗಳ 31 ಇನಿಂಗ್ಸ್‌ಗಳನ್ನಾಡಿ 63 ಸಿಕ್ಸರ್ ಬಾರಿಸುವ ಮೂಲಕ ಗರಿಷ್ಠ ಸಿಕ್ಸರ್ ಸಿಡಿಸಿದವರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
 

25
2. ಯುವರಾಜ್ ಸಿಂಗ್ - 33 ಸಿಕ್ಸರ್‌

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಸಿಕ್ಸರ್‌ ಕಿಂಗ್ ಖ್ಯಾತಿಯ ಯುವರಾಜ್ ಸಿಂಗ್, ಭಾರತ ಪರ 31 ಪಂದ್ಯಗಳ 28 ಇನಿಂಗ್ಸ್‌ಗಳನ್ನಾಡಿ 33 ಸಿಕ್ಸರ್ ಬಾರಿಸುವ ಮೂಲಕ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

35
3. ಶೇನ್ ವಾಟ್ಸನ್‌ - 31 ಸಿಕ್ಸರ್

ಆಸ್ಟ್ರೇಲಿಯಾದ ಮಾಜಿ ಆಲ್ರೌಂಡರ್ ಶೇನ್ ವಾಟ್ಸನ್‌, 24 ಪಂದ್ಯಗಳ 22 ಇನಿಂಗ್ಸ್‌ಗಳನ್ನಾಡಿ 31 ಸಿಕ್ಸರ್ ಸಿಡಿಸುವ ಮೂಲಕ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ

45
4. ಡೇವಿಡ್ ವಾರ್ನರ್ - 31 ಸಿಕ್ಸರ್

ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್, ಕಾಂಗರೂ ತಂಡದ ಪರ 30 ಪಂದ್ಯಗಳ 30 ಇನಿಂಗ್ಸ್‌ಗಳನ್ನಾಡಿ 31 ಸಿಕ್ಸರ್ ಸಿಡಿಸುವ ಮೂಲಕ ಗರಿಷ್ಠ ಸಿಕ್ಸರ್ ಸಿಡಿಸಿದವರ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.

55
5. ರೋಹಿತ್ ಶರ್ಮಾ - 31 ಸಿಕ್ಸರ್

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 33 ಪಂದ್ಯಗಳ 33 ಇನಿಂಗ್ಸ್‌ಗಳನ್ನಾಡಿ 31 ಸಿಕ್ಸರ್‌ ಸಿಡಿಸುವ ಮೂಲಕ ಗರಿಷ್ಠ ಸಿಕ್ಸರ್‌ ಸಿಡಿಸಿದವರ ಪಟ್ಟಿಯಲ್ಲಿ  ಐದನೇ ಸ್ಥಾನದಲ್ಲಿದ್ದು, ಯುವಿ ದಾಖಲೆ ಮುರಿಯುವ ನಿರೀಕ್ಷೆಯಲ್ಲಿದ್ದಾರೆ.

Read more Photos on
click me!

Recommended Stories