Published : Apr 11, 2020, 03:14 PM ISTUpdated : Apr 11, 2020, 03:28 PM IST
ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 7,500ದ ಗಡಿ ದಾಟಿದೆ. ಇಂತಹ ಸಂದರ್ಭದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಕೊರೋನಾ ವಾರಿಯರ್ಸ್‌ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಅದರಲ್ಲೂ ದೇಶಾದ್ಯಂತ ಇರುವ ಪೊಲೀಸರು ಸೇವೆಯನ್ನು ಕೊಂಡಿದ್ದಾರೆ. ಇನ್ನು ವಿಶೇಷವಾಗಿ ಡೆಲ್ಲಿ ಪೊಲೀಸರನ್ನು ವಿರಾಟ್ ಕೊಹ್ಲಿ ಸ್ಮರಿಸಿಕೊಂಡಿದ್ದಾರೆ. ಪೊಲೀಸರು ತಮ್ಮ ಕರ್ತವ್ಯವನ್ನು ನಿಭಾಯಿಸುವುದರ ಜತೆಗೆ ಬಡವರಿಗೆ ಆಹಾರ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ಈ ವಿಡಿಯೋವನ್ನು ಡೆಲ್ಲಿ ಪೊಲೀಸ್ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.