ಕೊರೋನಾ ಸಂಕಷ್ಟ: PM CARES Fund ಗೆ 50 ಲಕ್ಷ ರುಪಾಯಿ ದೇಣಿಗೆ ನೀಡಿದ ಯುವರಾಜ್ ಸಿಂಗ್..!
First Published | Apr 6, 2020, 10:28 AM ISTನವದೆಹಲಿ: ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಭಾರತದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ 50 ಲಕ್ಷ ರುಪಾಯಿ ದೇಣಿಗೆ ನೀಡಿದ್ದಾರೆ. ಈ ವಿಷಯವನ್ನು ಯುವಿ ತಮ್ಮ ಟ್ವೀಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 05ರ ರಾತ್ರಿ 9 ಗಂಟೆಗೆ ಲೈಟ್ ಆಫ್ ಮಾಡಿ 9 ನಿಮಿಷಗಳ ಕಾಲ ಮನೆಯ ಬಾಗಿಲು/ ಬಾಲ್ಕನಿಯಲ್ಲಿ ನಿಂತು ದೀಪ, ಮೊಂಬತ್ತಿ ಬೆಳಗಲು ದೇಶದ ಜನರನ್ನು ಕೇಳಿಕೊಂಡಿದ್ದರು. ಮೋದಿ ಮಾತಿಗೆ ಇಡೀ ದೇಶವೇ ಬೆಂಬಲ ಸೂಚಿಸಿದೆ. ಇಂತಹ ಸಂದರ್ಭದಲ್ಲೇ ಯುವಿ ಪಿಎಂ ಕೇರ್ಸ್‌ಗೆ 50 ಲಕ್ಷ ರುಪಾಯಿ ದೇಣಿಗೆ ನೀಡುವ ಮೂಲಕ ಕೊರೋನಾ ಸಂಕಷ್ಟಕ್ಕೆ ನೆರವಾಗಿದ್ದಾರೆ