ಇಡೀ ಕ್ರಿಕೆಟ್ ಜಗತ್ತೇ ಭಾರತ ತಂಡ 2011ರಲ್ಲಿ ಐಸಿಸಿ ಏಕದಿನ ವಿಶ್ವಕಪ್ ಜಯಿಸಿದ ಸುಂದರ ಕ್ಷಣಗಳನ್ನು ಮೆಲುಕು ಹಾಕುತ್ತಿದೆ.
ಹೀಗಾಗಿರುವಾಗಲೇ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಆತಂಕಕಾರಿ ಸುದ್ದಿಯೊಂದು ಬರಸಿಡಿಲಿನಂತೆ ಬಂದೆರಗಿದೆ.
ಮಾರ್ಚ್ 27ರಂದು ಲಿಟ್ಲ್ ಮಾಸ್ಟರ್ ಸಚಿನ್ ತೆಂಡುಲ್ಕರ್‌ಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿತ್ತು. ಹೀಗಾಗಿ ಸಚಿನ್ ಮನೆಯಲ್ಲಿಯೇ ಐಸೋಲೇಷನ್‌ಗೆ ಒಳಗಾಗಿದ್ದರು.
ಇದೀಗ ಸೋಂಕು ತಗುಲಿ ಒಂದು ವಾರ ಕಳೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕ್ರಿಕೆಟ್ ದಿಗ್ಗಜ ತೆಂಡುಲ್ಕರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಸಚಿನ್ ತೆಂಡುಲ್ಕರ್, ನಿಮ್ಮ ಪ್ರಾರ್ಥನೆ ಹಾಗೂ ಹಾರೈಕೆಗಳಿಗೆ ಧನ್ಯವಾದಗಳು. ವೈದ್ಯಕೀಯ ಸಿಬ್ಬಂದಿಗಳ ಸಲಹೆಯ ಮೇರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಇನ್ನು ಕೆಲವೇ ದಿನಗಳಲ್ಲಿ ನಾನು ಮನೆಗೆ ವಾಪಾಸಾಗುವ ವಿಶ್ವಾಸವಿದೆ. ಎಲ್ಲರೂ ತಮ್ಮ ಆರೋಗ್ಯ ಕಾಳಜಿ ವಹಿಸುವ ಮೂಲಕ ಸುರಕ್ಷಿತವಾಗಿರಿ ಎಂದು ಟ್ವೀಟ್ ಮಾಡಿದ್ದಾರೆ.
ಸಚಿನ್ ತೆಂಡುಲ್ಕರ್ ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ವಾಸವಾಗಿದ್ದು, ಎರಡನೇ ಹಂತದಲ್ಲಿ ಅತಿವೇಗವಾಗಿ ಕೋವಿಡ್ ಸ್ಪೋಟಗೊಳ್ಳುತ್ತಿರುವ ರಾಜ್ಯಗಳಲ್ಲಿ ಮೊದಲ ಸ್ಥಾನ ಪಡೆದಿದೆ.
ಸಚಿನ್ ತೆಂಡುಲ್ಕರ್ ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ವಾಸವಾಗಿದ್ದು, ಎರಡನೇ ಹಂತದಲ್ಲಿ ಅತಿವೇಗವಾಗಿ ಕೋವಿಡ್ ಸ್ಪೋಟಗೊಳ್ಳುತ್ತಿರುವ ರಾಜ್ಯಗಳಲ್ಲಿ ಮೊದಲ ಸ್ಥಾನ ಪಡೆದಿದೆ.