ಕಾಶ್ಮೀರಿ ಯುವತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸರ್ಫರಾಜ್ ಖಾನ್..! ಇಲ್ಲಿವೆ ನೋಡಿ ಮದುವೆ ಫೋಟೋಗಳು

First Published | Aug 8, 2023, 1:50 PM IST

ಮುಂಬೈ: ಭಾರತದ ಪ್ರತಿಭಾನ್ವಿತ ಕ್ರಿಕೆಟಿಗ, ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಾ ಬಂದಿರುವ ಸ್ಪೋಟಕ ಬ್ಯಾಟರ್ ಸರ್ಫರಾಜ್ ಖಾನ್ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಈ ಕುರಿತಾದ ಮದುವೆಯ ಫೋಟೋಗಳು ಇಲ್ಲಿವೆ ನೋಡಿ.
 

ದೇಶಿ ಕ್ರಿಕೆಟ್‌ನಲ್ಲಿ ಮುಂಬೈ ಪರ ಕಳೆದ ಮೂರು ವರ್ಷಗಳಿಂದ ರನ್ ರಾಶಿಯನ್ನೇ ಗುಡ್ಡೆ ಹಾಕಿ ಟೀಂ ಇಂಡಿಯಾ ಬಾಗಿಲು ಬಡಿಯುತ್ತಿರುವ ಸರ್ಫರಾಜ್ ಖಾನ್, ಇದೀಗ ಹೊಸ ಇನಿಂಗ್ಸ್‌ ಆರಂಭಿಸಿದ್ದು, ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
 

ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಸರ್ಫರಾಜ್ ಖಾನ್ ಅವರ ಮದುವೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದ್ದು, ಕಪ್ಪು ಶೆರ್ವಾನಿಯಲ್ಲಿ ಮಿಂಚಿದ್ದಾರೆ.

Tap to resize

ಈ ಮೊದಲು ಸ್ಥಳೀಯ ವೆಬ್‌ಪೋರ್ಟಲ್‌ವೊಂದರಲ್ಲಿ ಭಾಗವಹಿಸಿದ್ದ ಸರ್ಫರಾಜ್ ಖಾನ್‌, ಟಿಕ್‌ ಟಾಕ್‌ ಮಾಡುವ ವೇಳೆ ತಾವು ಕಾಶ್ಮೀರದ ಹುಡುಗಿಯನ್ನು ಮದುವೆಯಾಗುವುದು ವಿಧಿಬರಹವಾಗಿದೆ ಎನ್ನುವ ಮೂಲಕ ಸುಳಿವು ಬಿಟ್ಟುಕೊಟ್ಟಿದ್ದರು.
 

ಸರ್ಫರಾಜ್ ಖಾನ್ 2022-23ರ ರಣಜಿ ಟ್ರೋಫಿ ಟೂರ್ನಿಯಲ್ಲಿ 6 ಪಂದ್ಯಗಳನ್ನಾಡಿ 92.66ರ ಸರಾಸರಿಯಲ್ಲಿ 556 ರನ್ ಬಾರಿಸಿದ್ದರು. ಇನ್ನು ಇಲ್ಲಿಯವರೆಗೆ 37 ಪ್ರಥಮದರ್ಜೆ ಪಂದ್ಯಗಳನ್ನಾಡಿ 3505 ರನ್ ಬಾರಿಸಿದ್ದಾರೆ.

ಇನ್ನು 2021-22ರ ರಣಜಿ ಟ್ರೋಫಿ ಟೂರ್ನಿಯಲ್ಲಿ 6 ಪಂದ್ಯಗಳನ್ನಾಡಿ 122-75ರ ಸರಾಸರಿಯಲ್ಲಿ 982 ರನ್ ಸಿಡಿಸಿದ್ದರು. ಇನ್ನು ಇದಕ್ಕೂ ಮುನ್ನ 2019-20ರ ರಣಜಿ ಟ್ರೋಫಿ ಟೂರ್ನಿಯಲ್ಲಿ ಸರ್ಫರಾಜ್ ಖಾನ್ 154.67ರ ಸರಾಸರಿಯಲ್ಲಿ 928 ರನ್ ಬಾರಿಸಿದ್ದರು.

ರಣಜಿ ಟ್ರೋಫಿ ಟೂರ್ನಿಯಲ್ಲಿ ಕಳೆದ ಮೂರು ಆವೃತ್ತಿಯಲ್ಲಿ ಅತ್ಯಂತ ಸ್ಥಿರ ಪ್ರದರ್ಶನ ತೋರುತ್ತಿರುವುದರ ಹೊರತಾಗಿಯೂ ಸರ್ಫರಾಜ್ ಖಾನ್ ಅವರೀಗ ಮತ್ತೊಮ್ಮೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. ಸರ್ಫರಾಜ್ ಖಾನ್ ವಿಂಡೀಸ್ ಪ್ರವಾಸಕ್ಕೆ ಭಾರತ ತಂಡದಲ್ಲಿ ಸ್ಥಾನ ಪಡೆಯಬಹುದು ಎನ್ನುವ ನಿರೀಕ್ಷೆ ಹುಸಿಯಾಗಿತ್ತು.
 

ಇದೀಗ ಸರ್ಫರಾಜ್ ಖಾನ್ ವಿವಾಹದ ಬಳಿಕವಾದರೂ ಅವರ ಅದೃಷ್ಟ ಬದಲಾಗುತ್ತಾ? ಭರ್ಜರಿ ಬ್ಯಾಟಿಂಗ್ ಲಯದಲ್ಲಿರುವ ಸರ್ಫರಾಜ್ ಖಾನ್ ಮುಂಬರುವ ದಿನಗಳಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ. 

Latest Videos

click me!