Published : Jul 02, 2025, 12:33 PM ISTUpdated : Jul 02, 2025, 02:45 PM IST
ಬೆಂಗಳೂರು: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಯಶಸ್ವಿಯಾಗಿ ಮುಕ್ತಾಯವಾಗಿ ಒಂದು ತಿಂಗಳು ಕಳೆದಿದೆ. ಹೀಗಿರುವಾಗಲೇ 2026ರ ಐಪಿಎಲ್ ಟೂರ್ನಿಗೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯಲ್ಲಿ ಮಹತ್ವದ ಬೆಳವಣಿಗೆ ನಡೆದಿರುವುದು ಸದ್ದು ಮಾಡುತ್ತಿದೆ.
5 ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್, 18ನೇ ಆವೃತ್ತಿಯ ಐಪಿಎಲ್‌ನಲ್ಲಿ ಮೊದಲ ತಂಡವಾಗಿ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದು ಮುಖಭಂಗ ಅನುಭವಿಸಿತ್ತು.
29
ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಮುಂಬರುವ ಐಪಿಎಲ್ ಮಿನಿ ಹರಾಜಿಗೂ ಮುನ್ನ ಟ್ರೇಡಿಂಗ್ ಮೂಲಕ ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಕರೆತರಲು ಮಾಸ್ಟರ್ ಪ್ಲಾನ್ ರೂಪಿಸಿದೆ ಎಂದು ವರದಿಯಾಗಿದೆ.
39
ಸಂಜು ಸ್ಯಾಮ್ಸನ್‌ಗಾಗಿ ತಮ್ಮ ತಂಡದಲ್ಲಿರುವ ಎರಡು ವಿಶ್ವಕಪ್ ಹೀರೋಗಳನ್ನು ರಾಜಸ್ಥಾನ ರಾಯಲ್ಸ್‌ಗೆ ಬಿಟ್ಟುಕೊಡಲು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಮುಂದಾಗಿದೆ ಎನ್ನಲಾಗುತ್ತಿದೆ.
ಖ್ಯಾತ ಕ್ರಿಕೆಟ್ ವಿಶ್ಲೇಷಕ ಪ್ರಸನ್ನ ಅಘೋರಾಮ್ ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದು, ಅನುಭವಿ ಬೌಲಿಂಗ್ ಆಲ್ರೌಂಡರ್ ರವಿಚಂದ್ರನ್ ಅಶ್ವಿನ್ ಹಾಗೂ ಶಿವಂ ದುಬೆ ಅವರನ್ನು ರಾಜಸ್ಥಾನ ರಾಯಲ್ಸ್‌ಗೆ ನೀಡಿ ಸಂಜು ಸ್ಯಾಮ್ಸನ್ ಕರೆತರಲು ಸಿಎಸ್‌ಕೆ ಫ್ರಾಂಚೈಸಿ ಒಲವು ತೋರಿದೆ ಎಂದು ಹೇಳಿದ್ದಾರೆ.
59
ರವಿಚಂದ್ರನ್ ಅಶ್ವಿನ್ ಭಾರತ ಪರ 2011ರ ಏಕದಿನ ವಿಶ್ವಕಪ್ ಹಾಗೂ 2013ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ವಿಜೇತ ತಂಡದ ಸದಸ್ಯರಾಗಿದ್ದರು.
69
ಇನ್ನೊಂದೆಡೆ ಶಿವಂ ದುಬೆ 2024ರ ಐಸಿಸಿ ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯರಾಗಿದ್ದಾರೆ. ಸಂಜು ಕೂಡಾ 2024ರ ವಿಜೇತ ತಂಡದ ಸದಸ್ಯರಾಗಿದ್ದಾರೆ.
79
ಪ್ರಸನ್ನ, ಅಶ್ವಿನ್ ಅವರ ಜತೆ ಆತ್ಮೀಯ ಒಡನಾಟ ಹೊಂದಿದ್ದಾರೆ. ಅಶ್ವಿನ್ 10 ವರ್ಷಗಳ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ಕೂಡಿಕೊಂಡಿದ್ದರು. ಆದರೆ 9 ಪಂದ್ಯಗಳನ್ನಾಡಿ ಕೇವಲ 7 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದರು.
89
ಇನ್ನು ಶಿವಂ ದುಬೆ ಬ್ಯಾಟಿಂಗ್ ಆಲ್ರೌಂಡರ್ ಆಗಿದ್ದು, ಯಾವುದೇ ತಂಡದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಧಾರವಾಗಬಲ್ಲ ಆಟಗಾರ ಎನಿಸಿಕೊಂಡಿದ್ದಾರೆ.
99
ಸಂಜು ಸ್ಯಾಮ್ಸನ್ ಕೆಲ ವರ್ಷಗಳಿಂದ ರಾಜಸ್ಥಾನ ರಾಯಲ್ಸ್ ತಂಡದ ನಾಯಕರಾಗಿದ್ದರೂ, ಕಪ್ ಗೆಲ್ಲಿಸಲು ಸಾಧ್ಯವಾಗಿಲ್ಲ. ಸಂಜು ಸಿಎಸ್‌ಕೆ ತಂಡ ಕೂಡಿಕೊಂಡರೆ ಆರಂಭಿಕ ಅಟಗಾರನ ಜತೆಗೆ ವಿಕೆಟ್ ಕೀಪರ್ ಆಗಿಯೂ ಮಿಂಚಬಲ್ಲರು.