ಅಮೆರಿಕದಲ್ಲಿ ಶ್ರೀರಾಮನ ದರ್ಶನ ಪಡೆದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ..!

First Published | Jan 24, 2024, 2:38 PM IST

ಬೆಂಗಳೂರು: ಕೋಟ್ಯಾಂತರ ಭಾರತೀಯರ ಕನಸು ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯೊಂದಿಗೆ ನನಸಾಗಿದೆ. ಇದೀಗ ಪಾಕಿಸ್ತಾನದ ಮಾಜಿ ಕ್ರಿಕೆಟಿಗರೊಬ್ಬರು ಬಾಲರಾಮನ ದರ್ಶನ ಪಡೆದು ಧನ್ಯರಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
 

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮವು ರಾಮಭಕ್ತರಲ್ಲಿ ಅತೀವ ಖುಷಿ ಹಾಗೂ ಜೋಶ್ ಅನ್ನುಂಟು ಮಾಡಿದೆ. ಈ ಭವ್ಯ ಕಾರ್ಯಕ್ರಮದಲ್ಲಿ ಹಲವು ಕ್ರಿಕೆಟಿಗರು ಸಾಕ್ಷಿಯಾಗಿದ್ದರು.
 

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನೀಶ್ ಕನ್ಹೇರಿಯಾ, ಕೋಟ್ಯಾಂತರ ಹಿಂದುಗಳಂತೆ ಶ್ರೀ ರಾಮ ಮಂದಿರ ಉದ್ಘಾಟನೆಯನ್ನು ಕಣ್ತುಂಬಿಕೊಳ್ಳಲು ಉತ್ಸುಕರಾಗಿದ್ದರು. ಆ ಕನಸು ನನಸಾಗಿದೆ.

Latest Videos


ಹೌದು, ದಾನೇಶ್ ಕನ್ಹೇರಿಯಾ ಸದ್ಯ ಅಮೆರಿಕದಲ್ಲಿದ್ದಾರೆ. ಅಲ್ಲಿಯೇ ತಮ್ಮ ಪತ್ನಿ ಸಮೇತ ಹೂಸ್ಟನ್‌ನಲ್ಲಿರುವ ಶ್ರೀ ಸ್ವಾಮಿನಾರಾಯಣ ಮಂದಿರಕ್ಕೆ ಭೇಟಿ ನೀಡಿ ಶ್ರೀರಾಮನ ದರ್ಶನ ಪಡೆದಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ದಾನೇಶ್ ಕನ್ಹೇರಿಯಾ ಒಂದು ವಿಡಿಯೋ ಹಂಚಿಕೊಂಡಿದ್ದಾರೆ. ಇದರ ಜತೆ ರಾಮ ಮಂದಿರ ಪ್ರಾಣಪ್ರತಿಷ್ಠಾಪನೆ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ.

ಮಂದಿರ ನಿರ್ಮಾಣವಾಗಬೇಕೆನ್ನುವ ಕನಸು ನನಸಾಗಿದೆ. ಪ್ರತಿಜ್ಞೆ ಪೂರ್ಣವಾಗಿದೆ. ಪ್ರಾಣ ಪ್ರತಿಷ್ಠಾಪನೆ ಪೂರ್ಣವಾಗಿದೆ ಎನ್ನುವ ಮೂಲಕ ದಾನೇಶ್ ಕನ್ಹೇರಿಯಾ ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆಯ ಕುರಿತಂತೆ ಸಂತಸ ವ್ಯಕ್ತಪಡಿಸಿದ್ದಾರೆ.

ಲೆಗ್‌ಸ್ಪಿನ್ನರ್ ದಾನೇಶ್ ಕನ್ಹೇರಿಯಾ ಪಾಕಿಸ್ತಾನ ಪರ 61 ಟೆಸ್ಟ್ ಪಂದ್ಯಗಳನ್ನಾಡಿ 261 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಪಾಕಿಸ್ತಾನ ಪರ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿಹೆಚ್ಚು ವಿಕೆಟ್ ಕಬಳಿಸಿದ ಸ್ಪಿನ್ನರ್ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ.
 

click me!