Ind vs NZ Test Series: ಭಾರತ ಎದುರಿನ ಟೆಸ್ಟ್ ಸರಣಿಗೆ ನ್ಯೂಜಿಲೆಂಡ್ ತಂಡದಲ್ಲಿ ಒಂದು ಮಹತ್ವದ ಬದಲಾವಣೆ..!

Suvarna News   | Asianet News
Published : Nov 14, 2021, 06:36 PM ISTUpdated : Nov 14, 2021, 08:32 PM IST

ಬೆಂಗಳೂರು: ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿ ಮುಕ್ತಾಯವಾಗುತ್ತಿದ್ದಂತೆಯೇ ನ್ಯೂಜಿಲೆಂಡ್ ತಂಡವು ಭಾರತ ಪ್ರವಾಸ ಕೈಗೊಳ್ಳಲಿದೆ. ಈ ವೇಳೆ ಮೊದಲಿಗೆ ಮೂರು ಪಂದ್ಯಗಳ ಟಿ20 ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ. ಈಗಾಗಲೇ ಟಿ20 ಹಾಗೂ ಟೆಸ್ಟ್‌ ಸರಣಿಗೆ ನ್ಯೂಜಿಲೆಂಡ್ ತಂಡವನ್ನು (New Zealand Cricket Team) ಪ್ರಕಟಿಸಲಾಗಿದೆ. ಆದರೆ ಇದೀಗ ನ್ಯೂಜಿಲೆಂಡ್ ತಂಡದಿಂದ ಓರ್ವ ಸ್ಟಾರ್ ಆಟಗಾರ ಹೊರಬಿದ್ದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

PREV
17
Ind vs NZ Test Series: ಭಾರತ ಎದುರಿನ ಟೆಸ್ಟ್ ಸರಣಿಗೆ ನ್ಯೂಜಿಲೆಂಡ್ ತಂಡದಲ್ಲಿ ಒಂದು ಮಹತ್ವದ ಬದಲಾವಣೆ..!

ಭಾರತ ವಿರುದ್ದದ ಟಿ20 ಸರಣಿಯು ನವೆಂಬರ್ 17ರಿಂದ ಆರಂಭವಾಗಲಿದೆ. ಇದಾದ ಬಳಿಕ ನ್ಯೂಜಿಲೆಂಡ್ ತಂಡವು ನವೆಂಬರ್ 25ರಿಂದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ.

27
Devon Conway

ಇಂಗ್ಲೆಂಡ್ ವಿರುದ್ದದ ಸೆಮಿಫೈನಲ್ ಪಂದ್ಯದ ವೇಳೆ ಕೈಗೆ ಸ್ವತಃ ಗಾಯ ಮಾಡಿಕೊಂಡಿರುವ ನ್ಯೂಜಿಲೆಂಡ್ ವಿಕೆಟ್ ಕೀಪರ್‌ ಬ್ಯಾಟರ್‌ ಡೆವೊನ್‌ ಕಾನ್‌ವೇ ಟಿ20 ವಿಶ್ವಕಪ್ ಫೈನಲ್ ಹಾಗೂ ಭಾರತ ಸರಣಿಯಿಂದ ಹೊರಬಿದ್ದಿದ್ದಾರೆ.

37
Daryl Mitchell

ಇದೀಗ ಭಾರತ ವಿರುದ್ದದ ಟೆಸ್ಟ್‌ ಸರಣಿಗೆ ಕಿವೀಸ್ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು, ಡೆವೊನ್‌ ಕಾನ್‌ವೇ ಬದಲಿಗೆ ಆಲ್ರೌಂಡರ್ ಡೇರೆಲ್ ಮಿಚೆಲ್‌ ನ್ಯೂಜಿಲೆಂಡ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

47

ಡೆವೊನ್ ಕಾನ್‌ವೇ ಅನುಪಸ್ಥಿತಿಯಲ್ಲಿ ಡೇರೆಲ್‌ ಮಿಚೆಲ್‌ಗೆ ತಮ್ಮ ಪ್ರತಿಭೆ ಅನಾವರಣ ಮಾಡಲು ಉತ್ತಮ ಅವಕಾಶ ಬಂದೊದಗಿದೆ ಎಂದು ಇಂಗ್ಲೆಂಡ್ ಕ್ರಿಕೆಟ್ ತಂಡದ ಕೋಚ್ ಗ್ಯಾರಿ ಸ್ಟೆಡ್ ಅಭಿಪ್ರಾಯಪಟ್ಟಿದ್ದಾರೆ.

57

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಡೆವೊನ್ ಕಾನ್‌ವೇ ಕಿವೀಸ್‌ ಪರ ಅಮೋಘ ಪ್ರದರ್ಶನ ತೋರುವ ಮೂಲಕ ತಂಡ ಫೈನಲ್‌ಗೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. 

67
Devon Conway

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಿವೀಸ್‌ ಪರ 39.40 ಬ್ಯಾಟಿಂಗ್‌ ಸರಾಸರಿಯಲ್ಲಿ 197 ರನ್‌ ಬಾರಿಸುವ ಮೂಲಕ ನ್ಯೂಜಿಲೆಂಡ್ ಪರ ಗರಿಷ್ಠ ರನ್ ಬಾರಿಸಿದ ಬ್ಯಾಟರ್ ಆಗಿ ಡೆವೊನ್‌ ಕಾನ್‌ವೇ ಹೊರಹೊಮ್ಮಿದ್ದರು. 

77

ಇದೀಗ ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ದ ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ಕಾನ್‌ವೇ ಅನುಪಸ್ಥಿತಿಯಲ್ಲಿ ನ್ಯೂಜಿಲೆಂಡ್ ತಂಡವು ಯಾವ ರೀತಿ ಪ್ರದರ್ಶನ ತೋರಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

Read more Photos on
click me!

Recommended Stories