T20 World Cup ಟೂರ್ನಿಗೂ ಮುನ್ನ ಟೀಂ ಇಂಡಿಯಾಗೆ ಮತ್ತೊಂದು ಶಾಕ್..! ಮತ್ತೋರ್ವ ಸ್ಟಾರ್ ವೇಗಿನೂ ಡೌಟ್?

Published : Oct 08, 2022, 03:36 PM IST

ಬೆಂಗಳೂರು(ಅ.08): ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಚುಟುಕು ಕ್ರಿಕೆಟ್ ವಿಶ್ವಕಪ್ ಮೇಲೆ ಚಿತ್ತ ನೆಟ್ಟಿದೆ. ಹೀಗಿರುವಾಗಲೇ ಗಾಯದ ಸಮಸ್ಯೆ ಇನ್ನಿಲ್ಲದಂತೆ ಬಾಧಿಸುತ್ತಿದೆ. ಇದೀಗ ಟೀಂ ಇಂಡಿಯಾದ ಮತ್ತೋರ್ವ ವೇಗಿ ಕೂಡಾ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬೀಳುವ ಸಾಧ್ಯತೆ ದಟ್ಟವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.  

PREV
16
T20 World Cup ಟೂರ್ನಿಗೂ ಮುನ್ನ ಟೀಂ ಇಂಡಿಯಾಗೆ ಮತ್ತೊಂದು ಶಾಕ್..! ಮತ್ತೋರ್ವ ಸ್ಟಾರ್ ವೇಗಿನೂ ಡೌಟ್?

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಅಕ್ಟೋಬರ್ 16ರಿಂದ ಆರಂಭವಾಗಲಿದ್ದು, ಚುಟುಕು ಕ್ರಿಕೆಟ್ ಮಹಾಸಂಗ್ರಾಮಕ್ಕೆ ಆಸ್ಟ್ರೇಲಿಯಾ ಆತಿಥ್ಯವನ್ನು ವಹಿಸಿದೆ. ಈಗಾಗಲೇ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಮುಂಚಿತವಾಗಿಯೇ ಆಸ್ಟ್ರೇಲಿಯಾಗೆ ಬಂದಿಳಿದಿದೆ.
 

26

ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೆ ಕೆಲವು ದಿನಗಳು ಬಾಕಿ ಇರುವಾಗಲೇ ಭಾರತ ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ, ಬೆನ್ನು ನೋವಿನ ಕಾರಣದಿಂದಾಗಿ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇದು ಟೀಂ ಇಂಡಿಯಾಗೆ ದೊಡ್ಡ ಹಿನ್ನೆಡೆಯಾಗುವ ಸಾಧ್ಯತೆಯಿದೆ.
 

36

ಇನ್ನು ಟಿ20 ವಿಶ್ವಕಪ್ ಟೂರ್ನಿಗೆ ಮೀಸಲು ಆಟಗಾರನ ರೂಪದಲ್ಲಿ ಸ್ಥಾನ ಪಡೆದಿದ್ದ ಮತ್ತೋರ್ವ ವೇಗಿ ದೀಪಕ್ ಚಹರ್ ಕೂಡಾ ಗಾಯಕ್ಕೆ ತುತ್ತಾಗಿರುವುದು, ಭಾರತ ತಂಡದ ಪಾಳಯದಲ್ಲಿ ಆತಂಕ ಮನೆ ಮಾಡುವಂತೆ ಮಾಡಿದೆ.

46

ಟೀಂ ಇಂಡಿಯಾದ ಮಾರಕ ವೇಗಿ ದೀಪಕ್ ಚಹರ್‌ ಮೊಣಕಾಲು ಗಾಯಕ್ಕೆ ತುತ್ತಾಗಿದ್ದು, ದಕ್ಷಿಣ ಆಫ್ರಿಕಾ ವಿರುದ್ದದ ಕೊನೆಯ 2 ಏಕದಿನ ಪಂದ್ಯಗಳಿಂದ ಹೊರಬಿದ್ದಿದ್ದಾರೆ. ದಕ್ಷಿಣ ಆಫ್ರಿಕಾ ಎದುರಿನ ಮೊದಲ ಏಕದಿನ ಪಂದ್ಯದಲ್ಲೂ ದೀಪಕ್ ಚಹರ್ ಕಣಕ್ಕಿಳಿದಿರಲಿಲ್ಲ.
 

56

ಇದೀಗ ಟಿ20 ವಿಶ್ವಕಪ್ ಟೂರ್ನಿಗೆ ಮೀಸಲು ಆಟಗಾರನಾಗಿ ಆಯ್ಕೆಯಾಗಿರುವ ದೀಪಕ್ ಚಹರ್, ಆಸ್ಟ್ರೇಲಿಯಾಗೆ ತೆರಳುವುದು ಕೂಡಾ ಅನುಮಾನ ಎನಿಸಿದೆ. ದೀಪಕ್ ಚಹರ್ ಬಹುತೇಕ ಟಿ20 ವಿಶ್ವಕಪ್ ಟೂರ್ನಿಗೆ ಅಲಭ್ಯರಾಗಿರುವುದರಿಂದ ಮುಕೇಶ್ ಕುಮಾರ್ ಹಾಗೂ ಚೇತನ್ ಸಕಾರಿಯಾ ನೆಟ್‌ ಬೌಲರ್‌ಗಳಾಗಿ ತಂಡ ಕೂಡಿಕೊಳ್ಳಲಿದ್ದಾರೆ.
 

66

ಇನ್ನು ಟೀಂ ಇಂಡಿಯಾ ಜಸ್ಪ್ರೀತ್ ಬುಮ್ರಾ ಅವರ ಬದಲಿ ಆಟಗಾರನನ್ನು ಹೆಸರಿಸಿಲ್ಲ. ಇದೀಗ ದೀಪಕ್ ಚಹರ್ ಕೂಡಾ ಚುಟುಕು ಕ್ರಿಕೆಟ್‌ ವಿಶ್ವಕಪ್‌ಗೆ ಅನುಮಾನ ಎನಿಸಿರುವುದರಿಂದ, ಅನುಭವಿ ವೇಗಿ ಮೊಹಮ್ಮದ್ ಶಮಿ ಭಾರತ 15 ಆಟಗಾರರನ್ನೊಳಗೊಂಡ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ. 

Read more Photos on
click me!

Recommended Stories