ಲಾರ್ಡ್ಸ್: 2026ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಎದುರಿನ ಪಂದ್ಯದಲ್ಲಿ ಭಾರತದ ಅನುಭವಿ ಬೌಲಿಂಗ್ ಆಲ್ರೌಂಡರ್ ದೀಪ್ತಿ ಶರ್ಮಾ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ದೀಪ್ತಿ ಶರ್ಮಾ ಹೊಸ ಮೈಲಿಗಲ್ಲು ನೆಟ್ಟಿದ್ದಾರೆ.
ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಎದುರು ಗ್ರೂಪ್ ಹಂತದ ಕೊನೆಯ ಪಂದ್ಯದಲ್ಲಿ ಸೋಲುವುದರೊಂದಿಗೆ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತದ ಅಭಿಯಾನ ಅಂತ್ಯವಾಗಿದೆ. ಇನ್ನು ಇದೇ ಪಂದ್ಯದಲ್ಲಿ ಭಾರತದ ಅನುಭವಿ ಆಲ್ರೌಂಡರ್ ದೀಪ್ತಿ ಶರ್ಮಾ ಅಪರೂಪದಲ್ಲೇ ಅಪರೂಪದ ದಾಖಲೆ ನಿರ್ಮಿಸಿದ್ದಾರೆ.
26
ಜೂಲನ್ ಗೋಸ್ವಾಮಿ ಹಿಂದಿಕ್ಕಿದ ದೀಪ್ತಿ ಶರ್ಮಾ
ಐತಿಹಾಸಿಕ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ದ ನಡೆದ ಪಂದ್ಯದಲ್ಲಿ ದೀಪ್ತಿ ಶರ್ಮಾ, ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ಅತಿಹೆಚ್ಚು ವಿಕೆಟ್ ಕಬಳಿಸಿದ ವಿಶ್ವದಾಖಲೆಯನ್ನು ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಭಾರತದವರೇ ಆದ ಮಾಜಿ ವೇಗಿ ಜೂಲನ್ ಗೋಸ್ವಾಮಿ ಅವರ ದಾಖಲೆಯನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ.
36
ಜೂಲನ್ ಗೋಸ್ವಾಮಿ ಟ್ರ್ಯಾಕ್ ರೆಕಾರ್ಡ್
ಭಾರತದ ಮಾಜಿ ವೇಗಿ ಜೂಲನ್ ಗೋಸ್ವಾಮಿ ಭಾರತ ಪರ 284 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿ 355 ವಿಕೆಟ್ ಕಬಳಿಸುವ ಮೂಲಕ ಅಗ್ರಸ್ಥಾನದಲ್ಲಿದ್ದರು. ಜೂಲನ್ ಗೋಸ್ವಾಮಿ ಟೆಸ್ಟ್‌ನಲ್ಲಿ 44, ಏಕದಿನ ಕ್ರಿಕೆಟ್‌ನಲ್ಲಿ 255 ಹಾಗೂ ಟಿ20 ಕ್ರಿಕೆಟ್‌ನಲ್ಲಿ 56 ವಿಕೆಟ್ ಕಬಳಿಸಿದ್ದದರು. ಜೂಲನ್ 2022ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವಾಗ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಆಗಿ ಹೊರಹೊಮ್ಮಿದ್ದರು.
ಇದೀಗ 28 ವರ್ಷದ ದೀಪ್ತಿ ಶರ್ಮಾ ತಮ್ಮ 278ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ 356 ವಿಕೆಟ್ ಕಬಳಿಸುವ ಮೂಲಕ ಅತಿಹೆಚ್ಚು ವಿಕೆಟ್ ಕಬಳಿಸಿದ ಮಹಿಳಾ ಕ್ರಿಕೆಟರ್ ಎನ್ನುವ ವಿಶ್ವದಾಖಲೆ ತಮ್ಮದಾಗಿಸಿಕೊಂಡಿದ್ದಾರೆ. ದೀಪ್ತಿ ಟಿ20 ಕ್ರಿಕೆಟ್‌ನಲ್ಲಿ 168, ಏಕದಿನ ಕ್ರಿಕೆಟ್‌ನಲ್ಲಿ 166 ವಿಕೆಟ್ ಹಾಗೂ ಟೆಸ್ಟ್‌ನಲ್ಲಿ 22 ವಿಕೆಟ್ ಕಬಳಿಸಿದ್ದಾರೆ.
56
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿಹೆಚ್ಚು ವಿಕೆಟ್ ಕಬಳಿಸಿದ ಟಾಪ್-5 ಬೌಲರ್‌ಗಳಿವರು
1. ದೀಪ್ತಿ ಶರ್ಮಾ: 356 ವಿಕೆಟ್(ಭಾರತ)
2. ಜೂಲನ್ ಗೋಸ್ವಾಮಿ: 355 ವಿಕೆಟ್(ಭಾರತ)
3. ಎಲೀಸ್ ಪೆರ್ರಿ: 336 ವಿಕೆಟ್(ಆಸ್ಟ್ರೇಲಿಯಾ)
4. ಕ್ಯಾಥರೀನ್ ಸೀವರ್ ಬ್ರಂಟ್: 335(ಇಂಗ್ಲೆಂಡ್)
5. ಸೋಫಿ ಎಕ್ಲೆಸ್ಟೋನ್: 333(ಇಂಗ್ಲೆಂಡ್)
66
ಕಳೆದ ವಿಶ್ವಕಪ್‌ನಲ್ಲೂ ಅಪರೂಪದ ದಾಖಲೆ ಬರೆದ ದೀಪ್ತಿ ಶರ್ಮಾ
ದೀಪ್ತಿ ಶರ್ಮಾ 2025ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 215 ರನ್ ಹಾಗೂ 22 ವಿಕೆಟ್ ಕಬಳಿಸುವ ಮೂಲಕ ಸರಣಿಶ್ರೇಷ್ಠ ಪ್ರಶಸ್ತಿ ಜಯಿಸುವಲ್ಲಿ ಯಶಸ್ವಿಯಾಗಿದ್ದರು. ಈ ಮೂಲಕ ಐಸಿಸಿ ವಿಶ್ವಕಪ್ ಆವೃತ್ತಿಯೊಂದರಲ್ಲಿ 20+ ವಿಕೆಟ್ ಹಾಗೂ 200+ ರನ್ ಬಾರಿಸಿದ ಏಕೈಕ ಕ್ರಿಕೆಟರ್ ಎನ್ನುವ ಅಪರೂಪದ ದಾಖಲೆಯನ್ನೂ ಬರೆದಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.