ಮ್ಯಾಂಚೆಸ್ಟರ್: ಭಾರತದ ಮಹಿಳಾ ಕ್ರಿಕೆಟರ್ ದೀಪ್ತಿ ಶರ್ಮಾ, ಇದೀಗ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿಂದು ಬಾಂಗ್ಲಾದೇಶ ಎದುರಿನ ಮಹತ್ವದ ಪಂದ್ಯದಲ್ಲಿ ಕಣಕ್ಕಿಳಿಯಲು ರೆಡಿಯಾಗಿದ್ದಾರೆ. ಇದರ ಬೆನ್ನಲ್ಲೇ ವಿಶ್ವದಾಖಲೆ ಬರೆಯಲು ದೀಪ್ತಿ ಶರ್ಮಾ ಸಜ್ಜಾಗಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ.
ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಗುರುವಾರ ಭಾರತಕ್ಕೆ ಬಾಂಗ್ಲಾದೇಶ ಸವಾಲು ಎದುರಾಗಲಿದೆ. ಮೊದಲೆರಡು ಪಂದ್ಯಗಳಲ್ಲಿ ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿದ್ದ ತಂಡಕ್ಕೆ ಕಳೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಎದುರಾದ ಸೋಲು ಆಘಾತ ನೀಡಿದೆ. ಸೆಮಿಫೈನಲ್ ರೇಸ್‌ನಲ್ಲಿ ಉಳಿಯಬೇಕಿದ್ದರೆ, ಹರ್ಮನ್‌ಪ್ರೀತ್ ಕೌರ್ ಪಡೆ ಈ ಪಂದ್ಯದಲ್ಲೇ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
26
ಎಲ್ಲರ ಕಣ್ಣು ದೀಪ್ತಿ ಶರ್ಮಾ ಮೇಲೆ
ಇನ್ನು ಈ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಬೇಕಿದ್ದರೇ, 28 ವರ್ಷದ ಅನುಭವಿ ಆಫ್‌ಸ್ಪಿನ್ನರ್ ದೀಪ್ತಿ ಶರ್ಮಾ ಅವರ ಪ್ರದರ್ಶನ ತುಂಬಾನೆ ಮಹತ್ವದ್ದಾಗಿದೆ. ಇನ್ನು ಈ ಪಂದ್ಯದಲ್ಲಿ ದೀಪ್ತಿ ಶರ್ಮಾ ಇನ್ನೊಂದು ವಿಕೆಟ್ ಕಬಳಿಸಿದರೆ, ಅಪರೂಪದ ವಿಶ್ವದಾಖಲೆ ಅವರ ಪಾಲಾಗಲಿದೆ.
36
ಸದ್ಯ ಜೂಲನ್ ಗೋಸ್ವಾಮಿ ಜತೆ ಜಂಟಿ ಅಗ್ರಸ್ಥಾನ ಹಂಚಿಕೊಂಡಿರುವ ದೀಪ್ತಿ ಶರ್ಮಾ
ಹೌದು, ಸದ್ಯ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ಅತಿಹೆಚ್ಚು ವಿಕೆಟ್ ಕಬಳಿಸಿದ ಜಂಟಿ ದಾಖಲೆ ಭಾರತದ ಮಾಜಿ ವೇಗಿ ಜೂಲನ್ ಗೋಸ್ವಾಮಿ ಹಾಗೂ ದೀಪ್ತಿ ಶರ್ಮಾ ಹೆಸರಿನಲ್ಲಿದೆ. ಈ ಇಬ್ಬರು ಆಟಗಾರ್ತಿಯರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಲಾ 355 ವಿಕೆಟ್ ಕಬಳಿಸಿದ್ದಾರೆ.
ಇದೀಗ ಬಾಂಗ್ಲಾದೇಶ ಎದುರಿನ ಪಂದ್ಯದಲ್ಲಿ ದೀಪ್ತಿ ಶರ್ಮಾ ಇನ್ನೊಂದು ವಿಕೆಟ್ ಕಬಳಿಸಿದರೆ, ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಅತಿಹೆಚ್ಚು ವಿಕೆಟ್ ಕಬಳಿಸಿದ ಬೌಲರ್ ಎನ್ನುವ ವಿಶ್ವದಾಖಲೆ ದೀಪ್ತಿ ಶರ್ಮಾ ಪಾಲಾಗಲಿದೆ. ಸಾರ್ವಕಾಲಿಕ ಶ್ರೇಷ್ಠ ದಾಖಲೆ ನಿರ್ಮಿಸಲು ದೀಪ್ತಿ ಶರ್ಮಾಗೆ ಕೇವಲ ಒಂದು ವಿಕೆಟ್ ಅವಶ್ಯಕತೆಯಿದೆ.
56
ದೀಪ್ತಿ ಶರ್ಮಾ ವಿಕೆಟ್ ಟ್ರ್ಯಾಕ್ ರೆಕಾರ್ಡ್
ದೀಪ್ತಿ ಶರ್ಮಾ 124 ಏಕದಿನ ಪಂದ್ಯಗಳನ್ನಾಡಿ 166 ವಿಕೆಟ್ ಕಬಳಿಸಿದ್ದಾರೆ. ಇನ್ನು ಅಂತಾರಾಷ್ಟ್ರೀಯ ಮಹಿಳಾ ಟಿ20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ವಿಕೆಟ್ ಕಬಳಿಸಿದ ವಿಶ್ವದಾಖಲೆಯೂ ದೀಪ್ತಿ ಶರ್ಮಾ ಹೆಸರಿನಲ್ಲಿದೆ. ಟಿ20ಯಲ್ಲಿ ಭಾರತ ಪರ ದೀಪ್ತಿ ಶರ್ಮಾ 147 ಪಂದ್ಯಗಳನ್ನಾಡಿ 167 ವಿಕೆಟ್ ಕಬಳಿಸಿದ್ದಾರೆ. ಇನ್ನು ಆರು ಟೆಸ್ಟ್ ಪಂದ್ಯಗಳಿಂದ 22 ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡಿದ್ದಾರೆ.
66
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಮಹಿಳಾ ಬೌಲರ್‌ಗಳ ಪಟ್ಟಿ
ಇನ್ನುಳಿದಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿಹೆಚ್ಚು ವಿಕೆಟ್ ಕಬಳಿಸಿದ ಮಹಿಳಾ ಬೌಲರ್‌ಗಳ ಪಟ್ಟಿಯಲ್ಲಿ ಇಂಗ್ಲೆಂಡ್ ನ್ಯಾಟ್ ಸೀವರ್ ಬ್ರಂಟ್(335), ಆಸ್ಟ್ರೇಲಿಯಾದ ಎಲೀಸಾ ಪೆರ್ರಿ(332), ಇಂಗ್ಲೆಂಡ್ ಸ್ಪಿನ್ನರ್ ಸೋಫಿ ಎಕ್ಲೆಸ್ಟೋನ್(327) ಕ್ರಮವಾಗಿ ಆ ನಂತರದ ಸ್ಥಾನದಲ್ಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.