ಡೆಲ್ಲಿ ಕ್ಯಾಪಿಟಲ್ಸ್‌ಗೆ ದೊಡ್ಡ ಹೊಡೆತ; ಟೂರ್ನಿಯಿಂದ ಕೊನೆಯ ಕ್ಷಣದಲ್ಲಿ ಹಿಂದೆ ಸರಿದ ಸ್ಪೋಟಕ ಬ್ಯಾಟರ್..!

First Published | Mar 14, 2024, 1:52 PM IST

ಬೆಂಗಳೂರು: 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಹೀಗಿರುವಾಗಲೇ ದಿಢೀರ್ ಎನ್ನುವಂತೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪೋಟಕ ಬ್ಯಾಟರ್ ಐಪಿಎಲ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಇದು ಡೆಲ್ಲಿ ಕ್ಯಾಪಿಟಲ್ಸ್ ಪಾಲಿಗೆ ದೊಡ್ಡ ಹಿನ್ನೆಡೆಯಾಗುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಮಾರ್ಚ್ 22ರಂದು ಆರಂಭವಾಗಲಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ.
 

ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮಾರ್ಚ್ 23ರಂದು ಚಂಢೀಘಡದ ಮಹರಾಜ ಯದುವೀರ್ ಸಿಂಗ್ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ಎದುರು ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.
 

Latest Videos


ಇನ್ನು ಚೊಚ್ಚಲ ಐಪಿಎಲ್ ಟ್ರೋಫಿ ಗೆಲ್ಲುವ ಕನವರಿಯಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ನಾಯಕ ರಿಷಭ್ ಪಂತ್ ಸೇರ್ಪಡೆ ಆನೆ ಬಲ ಬರುವಂತೆ ಮಾಡಿದೆ. ಹೀಗಿದ್ದೂ ಡೆಲ್ಲಿ ಕ್ಯಾಪಿಟಲ್ಸ್‌ಗೆ ಇದೀಗ ಬಿಗ್ ಶಾಕ್ ಎದುರಾಗಿದೆ.
 

ಐಪಿಎಲ್ ಟೂರ್ನಿ ಆರಂಭಕ್ಕೆ ಇನ್ನು ಕೇವಲ ಕೆಲವೇ ದಿನಗಳು ಬಾಕಿ ಇರುವಾಗಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪೋಟಕ ಬ್ಯಾಟರ್ ಹ್ಯಾರಿ ಬ್ರೂಕ್, ಕೊನೆಯ ಕ್ಷಣದಲ್ಲಿ ಮಿಲಿಯನ್ ಡಾಲರ್ ಕ್ರಿಕೆಟ್ ಟೂರ್ನಿಯಿಂದ ಹಿಂದೆ ಸರಿದಿರುವುದಾಗಿ ತಿಳಿಸಿದ್ದಾರೆ.

ಇಂಗ್ಲೆಂಡ್ ಮೂಲದ ಸ್ಪೋಟಕ ಬ್ಯಾಟರ್ ಹ್ಯಾರಿ ಬ್ರೂಕ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಆಟಗಾರರ ಹರಾಜಿನಲ್ಲಿ ಬರೋಬ್ಬರಿ 4 ಕೋಟಿ ರುಪಾಯಿ ನೀಡಿ ಖರೀದಿಸುವಲ್ಲಿ ಯಶಸ್ವಿಯಾಗಿತ್ತು.

ಇದೀಗ ಹ್ಯಾರಿ ಬ್ರೂಕ್ ವೈಯುಕ್ತಿಕ ಕಾರಣ ನೀಡಿ 2024ರ ಐಪಿಎಲ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಈ ಮೊದಲು ಹ್ಯಾರಿ ಬ್ರೂಕ್ ಭಾರತ ಎದುರಿನ 5 ಪಂದ್ಯಗಳ ಟೆಸ್ಟ್ ಸರಣಿಯಿಂದಲೂ ಹಿಂದೆ ಸರಿದಿದ್ದರು.

ಕಳೆದ ತಿಂಗಳಷ್ಟೇ ನಾನು ನನ್ನ ಅಜ್ಜಿಯನ್ನು ಕಳೆದುಕೊಂಡೆ, ಆಕೆ ನನ್ನ ಕ್ರಿಕೆಟ್ ಜೀವನ ರೂಪುಗೊಳ್ಳುವಲ್ಲಿ ಮಹತ್ತರ ಪಾತ್ರವಹಿಸಿದ್ದರು. ನಮ್ಮ ಅಜ್ಜಿಗೆ ಅನಾರೋಗ್ಯದ ಸಮಸ್ಯ ತೀವ್ರವಾಗಿದ್ದರಿಂದಲೇ ನಾನು ಭಾರತ ಎದುರಿನ ಟೆಸ್ಟ್ ಸರಣಿಯಿಂದಲೂ ಹೊರಗುಳಿಯಲು ತೀರ್ಮಾನಿಸಿದೆ ಎಂದು ಹ್ಯಾರಿ ಬ್ರೂಕ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಹ್ಯಾರಿ ಬ್ರೂಕ್ 2023ರಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ್ದರು. ಕಳೆದ ವರ್ಷ ಹ್ಯಾರಿ ಬ್ರೂಕ್ ಅವರನ್ನು ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು 13.25 ಕೋಟಿ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಂಡಿತ್ತು.
 

click me!