ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಧರ್ಮಶಾಲಾದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಎದುರಿನ 5ನೇ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸುವ ಮೂಲಕ ಮಿಂಚಿದ್ದಾರೆ.
ಇದು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ನಲ್ಲಿ ಬಾರಿಸಿದ 12ನೇ ಶತಕ ಎನಿಸಿಕೊಂಡಿತು. 154 ಎಸೆತಗಳನ್ನು ಎದುರಿಸಿ 13 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಆಕರ್ಷಕ ಶತಕ ಸಿಡಿಸಿ ಸಂಭ್ರಮಿಸಿದರು.
ಧರ್ಮಶಾಲಾ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಆಕರ್ಷಕ ಶತಕ ಸಿಡಿಸುವ ಮೂಲಕ ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿದ್ದ ಅಪರೂಪದ ದಾಖಲೆ ಸರಿಗಟ್ಟುವಲ್ಲಿ ಯಶಸ್ವಿಯಾದರು.
ಇದೀಗ ರೋಹಿತ್ ಶರ್ಮಾ 30 ವರ್ಷ ವಯಸ್ಸಿನ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶತಕ ಬಾರಿಸಿದ ಸಚಿನ್ ತೆಂಡುಲ್ಕರ್ ದಾಖಲೆಯನ್ನು ಹಿಟ್‌ಮ್ಯಾನ್ ಸರಿಗಟ್ಟಿದ್ದಾರೆ.
ಹೌದು, ಸಚಿನ್ ತೆಂಡುಲ್ಕರ್ ಹಾಗೂ ರೋಹಿತ್ ಶರ್ಮಾ 30 ವರ್ಷ ವಯಸ್ಸಿನ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಲಾ 35 ಶತಕ ಸಿಡಿಸಿದ್ದಾರೆ. ರೋಹಿತ್ ಶರ್ಮಾ ಇನ್ನೊಂದು ಶತಕ ಸಿಡಿಸಿದರೂ ತೆಂಡುಲ್ಕರ್ ದಾಖಲೆ ನುಚ್ಚುನೂರಾಗಲಿದೆ
ಇನ್ನು 30 ವರ್ಷ ವಯಸ್ಸಿನ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶತಕ ಸಿಡಿಸಿದ ದಾಖಲೆ ಶ್ರೀಲಂಕಾದ ದಿಗ್ಗಜ ಕ್ರಿಕೆಟಿಗ ಕುಮಾರ ಸಂಗಕ್ಕರ ಹೆಸರಿನಲ್ಲಿದೆ. ಸಂಗಾ ಒಟ್ಟು 43 ಶತಕ ಸಿಡಿಸಿ ಮೊದಲ ಸ್ಥಾನದಲ್ಲಿದ್ದಾರೆ.