ನವದೆಹಲಿ: ಭಾರತ ತಂಡದ ಹೆಡ್ ಕೋಚ್ ಗೌತಮ್ ಗಂಭೀರ್ ಹಾಗೂ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ನಡುವೆ ಬಿರುಕು ಬಿಟ್ಟಿದ್ದು, ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂದು ಮಾಜಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಅಭಿಪ್ರಾಯಪಟ್ಟಿದ್ದಾರೆ.
ಕೊಹ್ಲಿ-ಗಂಬೀರ್ ಮನಸ್ತಾಪ ಬೆನ್ನಲ್ಲೇ ಹೊಸತೊಂದು ವಿವಾದ ಬೆಳಕಿಗೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಆರಂಭಕ್ಕೂ ಮೊದಲು ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವೆ ಮನಸ್ತಾಪ ಉಂಟಾಗಿದೆ ಎನ್ನುವ ಚರ್ಚೆ ಜೋರಾಗಿತ್ತು. ಅಭ್ಯಾಸದ ವೇಳೆ ಕೊಹ್ಲಿ ಜತೆ ಗಂಭೀರ್ ಮಾತಾಡಿರಲಿಲ್ಲ. ಇದೆಲ್ಲದರ ನಡುವೆ ಹೊಸತೊಂದು ವಿವಾದ ಬೆಳಕಿಗೆ ಬಂದಿದೆ.
26
ಅಗರ್ಕರ್ ಜೊತೆ ಗಂಭೀರ್‌ಗೆ ಭಿನ್ನಾಭಿಪ್ರಾಯ?
ಭಾರತ ಕ್ರಿಕೆಟ್ ತಂಡದ ಆಟಗಾರರ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಕೂಡಾ ಮಾತನಾಡಿದ್ದು, ಇಬ್ಬರ ನಡುವಿನ ತಿಕ್ಕಾಟ ತಂಡಕ್ಕೆ ಒಳ್ಳೆಯದಲ್ಲ ಎಂದಿದ್ದಾರೆ.
36
ಹೊಸ ಬಾಂಬ್ ಸಿಡಿಸಿದ ದಿನೇಶ್ ಕಾರ್ತಿಕ್
ಸಂದರ್ಶನದಲ್ಲಿ ಮಾತನಾಡಿದ ಕಾರ್ತಿಕ್, ‘ಭಾರತ ತಂಡದ ಆಡಳಿತ ಮಂಡಳಿ ಈ ಸಮಸ್ಯೆಯನ್ನು ಶೀಘ್ರವೇ ಸರಿಪಡಿಸಿಕೊಳ್ಳಬೇಕು. ದೀರ್ಘಕಾಲೀನ ಯೋಜನೆ ಹೊಂದಿರುವ ಆಯ್ಕೆಗಾರ ಹಾಗೂ ಆಡುವ ಪ್ರತಿಯೊಂದು ಪಂದ್ಯವನ್ನೂ ಗೆಲ್ಲಲೇಬೇಕು ಎಂದು ಬಯಸುವ ಕೋಚ್ ನಡುವೆ ತಿಕ್ಕಾಟ ನಡೆಯುತ್ತಿರುವುದನ್ನು ನಾನು ಕಾಣುತ್ತಿದ್ದೇನೆ. ಇದೇ ಕಾರಣಕ್ಕೆ ನಮ್ಮ ಕಣ್ಣ ಮುಂದೆಯೇ ಒಂದು ರೀತಿಯ ಗೊಂದಲ ಸೃಷ್ಟಿಯಾಗಿದೆ. ಇದು ಆಟಗಾರರಿಗೆ ಖಂಡಿತವಾಗಿಯೂ ಸೂಕ್ತವಲ್ಲ. ಭಾರತವು ಈ ಪರಿಸ್ಥಿತಿಯ ಬಗ್ಗೆ ಅರಿವು ಮೂಡಿಸಿ ಆದಷ್ಟು ಬೇಗ ಅದನ್ನು ಸರಿಪಡಿಸಿಕೊಳ್ಳಬೇಕಾದ ಅಗತ್ಯವಿದೆ’ ಎಂದು ಹೇಳಿದ್ದಾರೆ.
ಭಾರತ ತಂಡವು ಇತ್ತೀಚೆಗಷ್ಟೇ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಐರ್ಲೆಂಡ್ ಎದುರು 2-0 ಹಾಗೂ ಇಂಗ್ಲೆಂಡ್ ಎದುರು 4-0 ಅಂತರದಲ್ಲಿ ಟಿ20 ಸರಣಿ ವೈಟ್ ವಾಷ್ ಅನುಭವಿಸಿತ್ತು. ಇದರ ಬೆನ್ನಲ್ಲೇ ಗೌತಮ್ ಗಂಭೀರ್ ಅವರ ಕೋಚಿಂಗ್ ಪ್ರದರ್ಶನದ ಬಗ್ಗೆ ತೀವ್ರ ಪ್ರಶ್ನೆಗಳು ಎದ್ದಿವೆ. ಅದರಲ್ಲೂ ಮ್ಯಾಚ್ ವಿನ್ನರ್ ಸಂಜು ಸ್ಯಾಮ್ಸನ್ ಅವರನ್ನು ಕಡೆಗಣಿಸಿ ವೈಭವ್ ಸೂರ್ಯವಂಶಿಗೆ ಇಂಗ್ಲೆಂಡ್ ಎದುರಿನ ಸರಣಿಯಲ್ಲಿ ಮಣೆ ಹಾಕಿದ್ದರ ಬಗ್ಗೆಯೂ ಸಾಕಷ್ಟು ಚರ್ಚೆ ಹಾಗೂ ಟೀಕೆಗಳು ವ್ಯಕ್ತವಾಗಿವೆ.
56
ಟೀಮ್ ಪ್ಲೇಯಿಂಗ್ ಇಲೆವನ್ ಸೆಲೆಕ್ಷನ್ ವಿಚಾರದಲ್ಲಿ ಗೊಂದಲ
2026ರ ಐಪಿಎಲ್ ಟೂರ್ನಿಯಲ್ಲಿ ವೈಭವ್ ಸೂರ್ಯವಂಶಿ, ತಮ್ಮ ಅದ್ಭುತ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದರು. ಹೀಗಾಗಿ ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರಿನ ಟಿ20 ಸರಣಿಗೆ ವೈಭವ್ ಅವರನ್ನು ಆಯ್ಕೆ ಮಾಡಲಾಗಿತ್ತು. ಇನ್ನು ಸಂಜು ಸ್ಯಾಮ್ಸನ್ ಐರ್ಲೆಂಡ್ ಎದುರಿನ ಎರಡು ಹಾಗೂ ಇಂಗ್ಲೆಂಡ್ ಎದುರಿನ ಒಂದು ವೈಫಲ್ಯಕ್ಕಾಗಿ ಅವರನ್ನು ಕೈಬಿಟ್ಟು ವೈಭವ್ ಸೂರ್ಯವಂಶಿಗೆ ಅವಕಾಶ ನೀಡಲಾಗಿತ್ತು. ಇನ್ನು ಮೂರು ಪಂದ್ಯಗಳ ಬಳಿಕ ವೈಭವ್ ಸೂರ್ಯವಂಶಿಯನ್ನು ಕೈಬಿಟ್ಟು ಐದನೇ ಟಿ20 ಪಂದ್ಯಕ್ಕೆ ಮತ್ತೆ ಸಂಜು ಸ್ಯಾಮ್ಸನ್‌ಗೆ ಮಣೆಹಾಕಲಾಗಿತ್ತು.
66
ಕಿವಿಮಾತು ಹೇಳಿದ ಡಿಕೆ
ಒಂದು ಕಡೆ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ದೀರ್ಘಕಾಲದ ಯೋಜನೆ ಹೊಂದಿದ್ದಾರೆ. ಆದರೆ ಕೋಚ್ ಗಂಭೀರ್ ಪ್ರತಿ ಮ್ಯಾಚ್ ಗೆಲ್ಲಬೇಕು ಎಂದು ತಂಡದಲ್ಲಿ ಬದಲಾವಣೆ ಮಾಡುತ್ತಾ ಸಾಗುತ್ತಿದ್ದಾರೆ. ಈ ಬಗ್ಗೆ ಆಯ್ಕೆ ಸಮಿತಿ ಹಾಗೂ ಕೋಚ್ ನಡುವೆ ಸಮನ್ವಯದ ಕೊರತೆ ಕಾಣುತ್ತಿದೆ. ಆದಷ್ಟು ಬೇಗ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು ಎಂದು ಡಿಕೆ ಸಲಹೆ ನೀಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.