ಬೆಂಗಳೂರು: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹಾಗೂ ಆರ್‌ಸಿಬಿ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಸಾರ್ವಕಾಲಿಕ ಶ್ರೇಷ್ಠ ಟಾಪ್ 5 ಟಿ20 ಆಟಗಾರರನ್ನು ಆಯ್ಕೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎನ್ನುವುದನ್ನು ನೋಡೋಣ ಬನ್ನಿ.
ಕ್ರಿಕೆಟ್ ಜಗತ್ತಿನಲ್ಲಿ ಡಿಕೆ ಎಂದೇ ಗುರುತಿಸಿಕೊಂಡಿರುವ ದಿನೇಶ್ ಕಾರ್ತಿಕ್, ಇದೀಗ ಸಾರ್ವಕಾಲಿಕ ಶ್ರೇಷ್ಠ ಐದು ಟಿ20 ಸ್ಪೆಷಲಿಸ್ಟ್ ಆಟಗಾರರನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ಇಬ್ಬರು ಭಾರತೀಯರಿಗೆ ಸ್ಥಾನ ನೀಡಿದ್ದಾರೆ. ಆದರೆ ಕ್ಯಾಪ್ಟನ್ ಕೂಲ್ ಧೋನಿಗೆ ಅವಕಾಶ ನೀಡದೇ ಇರುವುದು ಅಚ್ಚರಿಗೆ ಕಾರಣವಾಗಿದೆ.
26
1. ರೋಹಿತ್ ಶರ್ಮಾ:
ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅವರನ್ನು ಡಿಕೆ ಆಯ್ಕೆ ಮಾಡಿಕೊಂಡಿದ್ದಾರೆ. 2024ರಲ್ಲಿ ಭಾರತಕ್ಕೆ ಟಿ20 ವಿಶ್ವಕಪ್ ಗೆದ್ದುಕೊಟ್ಟ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಟಿ20 ವಿಶ್ವಕಪ್‌ನಲ್ಲಿ 1220 ಹಾಗೂ ಒಟ್ಟಾರೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 4231 ರನ್ ಬಾರಿಸಿದ್ದಾರೆ.
36
2. ಡೇವಿಡ್ ವಾರ್ನರ್:
ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್‌ಗೆ ಶ್ರೇಷ್ಠ ಟಿ20 ಆಟಗಾರರ ಪೈಕಿ ಡಿಕೆ ಮಣೆ ಹಾಕಿದ್ದಾರೆ. ವಾರ್ನರ್ 2021ರ ಟಿ20 ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದರು. ವಾರ್ನರ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 3277 ರನ್ ಬಾರಿಸಿದ್ದು, 2021ರ ಟಿ20 ವಿಶ್ವಕಪ್‌ನಲ್ಲಿ ಸರಣಿಶ್ರೇಷ್ಠ ಪ್ರಶಸ್ತಿ ಜಯಿಸಿದ್ದರು.
ಮಿಸ್ಟರ್ 360 ಖ್ಯಾತಿಯ ಎಬಿ ಡಿವಿಲಿಯರ್ಸ್ ಅವರನ್ನು ದಿನೇಶ್ ಕಾರ್ತಿಕ್ ಆಯ್ಕೆ ಮಾಡಿಕೊಂಡಿದ್ದಾರೆ. ಯಾವುದೇ ಮೈದಾನದಲ್ಲಿ ಮೈಚಳಿ ಬಿಟ್ಟು ಬ್ಯಾಟ್ ಬೀಸುವ ಎಬಿಡಿ, ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ 150ಕ್ಕೂ ಹೆಚ್ಚಿನ ಸ್ಟ್ರೈಕ್‌ರೇಟ್‌ನಲ್ಲಿ 9,424 ರನ್ ಸಿಡಿಸಿದ್ದಾರೆ.
56
4. ಕ್ರಿಸ್ ಗೇಲ್:
ಯೂನಿವರ್ಸಲ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಟಿ20 ಕ್ರಿಕೆಟ್‌ನಲ್ಲಿ ಎಷ್ಟು ಅಪಾಯಕಾರಿ ಬ್ಯಾಟರ್ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಗೇಲ್ 2012 ಹಾಗೂ 2016ರ ಟಿ20 ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದರು. ಟಿ20 ಕ್ರಿಕೆಟ್‌ನಲ್ಲಿ ಗೇಲ್ 22 ಶತಕ ಸಹಿತ 14,562 ರನ್ ಸಿಡಿಸಿದ್ದಾರೆ.
66
5. ವಿರಾಟ್ ಕೊಹ್ಲಿ
ಭಾರತ ತಂಡದ ಮಾಜಿ ನಾಯಕ ಹಾಗೂ 2024ರ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ವಿರಾಟ್ ಕೊಹ್ಲಿಯನ್ನು ಡಿಕೆ ಆಯ್ಕೆ ಮಾಡಿಕೊಂಡಿದ್ದಾರೆ. ಕೊಜ್ಲಿ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿಹೆಚ್ಚು ರನ್(1292) ಬಾರಿಸಿದ ಬ್ಯಾಟರ್ ಎನಿಸಿದ್ದು, ಒಟ್ಟಾರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4,188 ರನ್ ಸಿಡಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.