ಭಾರತ ಎದುರಿನ ಎರಡನೇ ಟೆಸ್ಟ್‌ಗೆ ಮಾರಕ ವೇಗಿ ಇಂಗ್ಲೆಂಡ್ ಸೇರ್ಪಡೆ, ಆದ್ರೆ ಆಡೋದೇ ಡೌಟ್!

Published : Jun 28, 2025, 02:03 PM IST

ಬರ್ಮಿಂಗ್‌ಹ್ಯಾಮ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟವಾಗಿದ್ದು, ಮಾರಕ ವೇಗಿ ಜೋಫ್ರಾ ಆರ್ಚರ್ ತಂಡ ಕೂಡಿಕೊಂಡಿದ್ದಾರೆ. ಆದರೆ ಆರ್ಚರ್ ಆಡುವ ಹನ್ನೊಂದರಲ್ಲಿ ಸ್ಥಾನ ಪಡೆಯುತ್ತಾರಾ ಎನ್ನುವುದಕ್ಕೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. 

PREV
17

ಭಾರತ ವಿರುದ್ಧ 2ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟಗೊಂಡಿದ್ದು, ವೇಗಿ ಜೋಫ್ರಾ ಆರ್ಚರ್ ತಂಡಕ್ಕೆ ಮರಳಿದ್ದಾರೆ.

27

ಮೊಣಕೈ ಗಾಯದಿಂದಾಗಿ ಕಳೆದ 4 ವರ್ಷಗಳಲ್ಲಿ ಹಲವು ಪಂದ್ಯಗಳನ್ನು ತಪ್ಪಿಸಿಕೊಂಡಿರುವ ಆರ್ಚರ್‌, ಕೊನೆ ಬಾರಿಗೆ ಟೆಸ್ಟ್‌ ಆಡಿದ್ದು 2021ರ ಫೆಬ್ರವರಿಯಲ್ಲಿ.

37

ಭಾರತ ವಿರುದ್ಧ ಅಹಮದಾಬಾದ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ ಅವರು ಕೊನೆಯ ಬಾರಿಗೆ ಇಂಗ್ಲೆಂಡ್ ಟೆಸ್ಟ್‌ ತಂಡದಲ್ಲಿ ಕಾಣಿಸಿಕೊಂಡಿದ್ದರು. ಇದೀಗ 4 ವರ್ಷ ಬಳಿಕ ಟೆಸ್ಟ್‌ ತಂಡಕ್ಕೆ ವಾಪಸಾಗಿದ್ದಾರೆ.

47

ಜೋಫ್ರಾ ಆರ್ಚರ್ ಇಂಗ್ಲೆಂಡ್ ಪರ 13 ಟೆಸ್ಟ್ ಪಂದ್ಯಗಳನ್ನಾಡಿ 31ರ ಸರಾಸರಿಯಲ್ಲಿ 42 ವಿಕೆಟ್ ಕಬಳಿಸಿದ್ದಾರೆ. ಆರ್ಚರ್ ಸೇರ್ಪಡೆ ಇಂಗ್ಲೆಂಡ್ ಪಾಳಯದಲ್ಲಿ ಹೊಸ ಹುರುಪು ತಂದುಕೊಟ್ಟಿದೆ.

57

ಇನ್ನು ಆರ್ಚರ್ ಬಗ್ಗೆ ಮಾತನಾಡಿರುವ ಇಂಗ್ಲೆಂಡ್ ಕ್ರಿಕೆಟ್ ಮ್ಯಾನೇಜಿಂಗ್ ಡೈರೆಕ್ಟರ್ ರಾಬ್ ಕೀ, ಅವರು ಎರಡನೇ ಟೆಸ್ಟ್‌ಗೂ ಮುನ್ನ ಸಂಪೂರ್ಣ ಫಿಟ್ ಅಗಿರಲಿದ್ದಾರೆ. ಆದರೆ ಎರಡೂ ಪಂದ್ಯಗಳನ್ನು ಆಡುತ್ತಾರೆಯೇ ಎನ್ನುವುದಕ್ಕೆ ಈಗಲೇ ಉತ್ತರವಿಲ್ಲ. ಒಂದು ಪಂದ್ಯವನ್ನಂತೂ ಖಂಡಿತ ಆಡುತ್ತಾರೆ ಎಂದು ಹೇಳಿದ್ದಾರೆ.

67

ಉಳಿದಂತೆ ಮೊದಲ ಟೆಸ್ಟ್‌ಗೆ ಆಯ್ಕೆಯಾಗಿದ್ದ ಆಟಗಾರರನ್ನು 2ನೇ ಟೆಸ್ಟ್‌ಗೂ ಮುಂದುವರಿಸಲು ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ ನಿರ್ಧರಿಸಿದೆ.

77

ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್ 1-0 ಮುನ್ನಡೆ ಸಾಧಿಸಿದೆ. ಇನ್ನು ಎರಡನೇ ಟೆಸ್ಟ್ ಪಂದ್ಯವು ಜುಲೈ 02ರಿಂದ ಏಜ್‌ಬಾಸ್ಟನ್‌ನಲ್ಲಿ ಆರಂಭವಾಗಲಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories