ICC T20 World Cup ಟೂರ್ನಿಗೂ ಮುನ್ನ ಇಂಗ್ಲೆಂಡ್‌ಗೆ ಶಾಕ್‌; ಸ್ಟಾರ್ ಆಲ್ರೌಂಡರ್ ಔಟ್..!

Suvarna News   | Asianet News
Published : Oct 06, 2021, 02:25 PM ISTUpdated : Oct 06, 2021, 02:36 PM IST

ದುಬೈ: ಬಹುನಿರೀಕ್ಷಿತ ಟಿ20 ವಿಶ್ವಕಪ್ (ICC T20 World Cup) ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಎಲ್ಲಾ ತಂಡಗಳು ತಮ್ಮ ಅಂತಿಮ 15 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಲಾಗಿದೆ. ಹೀಗಿರುವಾಗಲೇ ಇಂಗ್ಲೆಂಡ್ ಕ್ರಿಕೆಟ್ (England Cricket Team) ತಂಡಕ್ಕೆ ಶಾಕ್ ಎದುರಾಗಿದ್ದು, ತಂಡದ ಪ್ರಮುಖ ಆಲ್ರೌಂಡರ್ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಯಾರು ಆ ಆಲ್ರೌಂಡರ್ ಹಾಗೂ ಏನಾಯ್ತು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.  

PREV
18
ICC T20 World Cup ಟೂರ್ನಿಗೂ ಮುನ್ನ ಇಂಗ್ಲೆಂಡ್‌ಗೆ ಶಾಕ್‌; ಸ್ಟಾರ್ ಆಲ್ರೌಂಡರ್ ಔಟ್..!

ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯು ಅಕ್ಟೋಬರ್ 17ರಿಂದ ಆರಂಭವಾಗಲಿದೆ. ಮೊದಲಿಗೆ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿದ್ದು, ಅಕ್ಟೋಬರ್ 23ರಿಂದ ಸೂಪರ್ 12 ಹಂತದ ಪಂದ್ಯಗಳು ಆರಂಭವಾಗಲಿವೆ.
 

28

2010ರ ಐಸಿಸಿ ಟಿ20 ವಿಶ್ವಕಪ್ ಟ್ರೋಫಿ ಜಯಿಸಿದ್ದ ಇಂಗ್ಲೆಂಡ್ ತಂಡವು ಇದೀಗ ಮತ್ತೊಮ್ಮೆ ಟ್ರೋಫಿಗೆ ಮುತ್ತಿಕ್ಕುವ ಕನವರಿಕೆಯಲ್ಲಿದೆ. 2019ರ ಏಕದಿನ ವಿಶ್ವಕಪ್ ಗೆದ್ದು ಬೀಗಿದ್ದ ಇಯಾನ್ ಮಾರ್ಗನ್ ಪಡೆ, ಇದೀಗ ಟಿ20 ವಿಶ್ವಕಪ್ ಗೆಲ್ಲುವ ಕನಸು ಕಾಣುತ್ತಿದೆ.

38

ಹೀಗಿರುವಾಗಲೇ ತಂಡದ ವೇಗದ ಅಸ್ತ್ರ ಜೋಫ್ರಾ ಆರ್ಚರ್‌ ಹಾಗೂ ಸ್ಟಾರ್ ಆಲ್ರೌಂಡರ್ ಬೆನ್‌ ಸ್ಟೋಕ್ಸ್‌ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದಾರೆ. ಇದೆಲ್ಲದರ ನಡುವೆ ತಂಡದ ಮತ್ತೋರ್ವ ಆಲ್ರೌಂಡರ್ ಕೂಡಾ ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಬಿದ್ದಿದ್ದಾರೆ

48

ಹೌದು, ಬೆನ್ನು ನೋವಿನಿಂದ ಬಳಲುತ್ತಿರುವ ಇಂಗ್ಲೆಂಡ್‌ ಆಲ್‌ರೌಂಡರ್‌ ಸ್ಯಾಮ್‌ ಕರ್ರನ್‌ 14ನೇ ಆವೃತ್ತಿಯ ಐಪಿಎಲ್‌ ಹಾಗೂ ಮುಂಬರುವ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದ್ದಾರೆ. 

58

ಸ್ಯಾಮ್‌ ಕರ್ರನ್‌ ಈಗಾಗಲೇ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡುತ್ತಿದ್ದರು. ಇದೀಗ ಸ್ಯಾಮ್ ಕರ್ರನ್ ಅಲಭ್ಯತೆ ತಂಡದ ತಲೆನೋವು ಹೆಚ್ಚುವಂತೆ ಮಾಡಿದೆ

68

ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಆಡುತ್ತಿದ್ದ ಕರ್ರನ್‌ ರಾಜಸ್ಥಾನ ರಾಯಲ್ಸ್‌ ವಿರುದ್ಧದ ಪಂದ್ಯದ ವೇಳೆ ಬೆನ್ನು ನೋವಿಗೆ ತುತ್ತಾಗಿದ್ದಾರೆ. ಹೀಗಾಗಿ ಐಪಿಎಲ್‌ ತೊರೆದು ಶೀಘ್ರದಲ್ಲೇ ಅವರು ಇಂಗ್ಲೆಂಡ್‌ಗೆ ಮರಳಲಿದ್ದಾರೆ.

78

ಇದೀಗ ಸ್ಯಾಮ್ ಕರ್ರನ್ ಬದಲಿಗೆ ಅವರ ಸಹೋದರ ಟಾಮ್ ಕರ್ರನ್‌ ಇಂಗ್ಲೆಂಡ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಮತ್ತೋರ್ವ ಎಡಗೈ ವೇಗಿ ರೀಸೀ ಟೋಪ್ಲೇ ಮೀಸಲು ಆಟಗಾರನಾಗಿ ಇಂಗ್ಲೆಂಡ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
 

88

ಇಂಗ್ಲೆಂಡ್ ಕ್ರಿಕೆಟ್ ತಂಡವು ಅಕ್ಟೋಬರ್ 23ರಂದು ನಡೆಯಲಿರುವ ಸೂಪರ್ 12 ಹಂತದ ಮೊದಲ ಪಂದ್ಯದಲ್ಲಿ ಟಿ20 ವಿಶ್ವಕಪ್‌ ಹಾಲಿ ಚಾಂಪಿಯನ್‌ ವೆಸ್ಟ್ ಇಂಡೀಸ್ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.

click me!

Recommended Stories