T20 World Cup ಟೂರ್ನಿಯಿಂದ ಹೊರಬಿದ್ದ ಇಂಗ್ಲೆಂಡ್ ಸ್ಟಾರ್ ಕ್ರಿಕೆಟಿಗ..!

Suvarna News   | Asianet News
Published : Nov 04, 2021, 10:54 AM IST

ಶಾರ್ಜಾ: ಇಯಾನ್‌ ಮಾರ್ಗನ್‌ ನೇತೃತ್ವದ ಇಂಗ್ಲೆಂಡ್ ಕ್ರಿಕೆಟ್ ತಂಡವು (England Cricket Team) ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರುತ್ತಿದ್ದು, ಇನ್ನೊಂದು ಪಂದ್ಯ ಬಾಕಿ ಇರುವಾಗಲೇ ತನ್ನ ಸೆಮಿಫೈನಲ್‌ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಹೀಗಿರುವಾಗಲೇ ಇಂಗ್ಲೆಂಡ್ ಪಾಲಿಗೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದ್ದು, ತಂಡದ ಸ್ಟಾರ್ ವೇಗಿ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅಷ್ಟಕ್ಕೂ ಯಾರು ಆ ಬೌಲರ್ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ  

PREV
17
T20 World Cup ಟೂರ್ನಿಯಿಂದ ಹೊರಬಿದ್ದ ಇಂಗ್ಲೆಂಡ್ ಸ್ಟಾರ್ ಕ್ರಿಕೆಟಿಗ..!

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಯಾನ್ ಮಾರ್ಗನ್ ನೇತೃತ್ವದ ಇಂಗ್ಲೆಂಡ್ ತಂಡವು ಈಗಾಗಲೇ ಬಲಿಷ್ಠ ತಂಡಗಳನ್ನು ಬಗ್ಗುಬಡಿಯುವ ಮೂಲಕ ಸೂಪರ್ 12 ಹಂತದಿಂದ ಸೆಮೀಸ್‌ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

27
england win

ಇಯಾನ್‌ ಮಾರ್ಗನ್ ನೇತೃತ್ವದ ಇಂಗ್ಲೆಂಡ್ ತಂಡವು ಈಗಾಗಲೇ ತಾನು ಆಡಿರುವ ಮೊದಲ 4 ಪಂದ್ಯಗಳಲ್ಲೂ ಭರ್ಜರಿ ಗೆಲುವು ಸಾಧಿಸುವ ಮೂಲಕ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

37
Tymal Mills

ಇಂಗ್ಲೆಂಡ್ ತಂಡದ ಪ್ರಮುಖ ವೇಗಿ ಟೈಮಲ್ ಮಿಲ್ಸ್‌ ಗಾಯಗೊಂಡು ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಶ್ರೀಲಂಕಾ ವಿರುದ್ದದ ಪಂದ್ಯದಲ್ಲಿ ಟೈಮಲ್ ಮಿಲ್ಸ್ ತೊಡೆಯ ಭಾಗಕ್ಕೆ ಗಾಯವಾದ ಕಾರಣ ಮೈದಾನ ತೊರೆದಿದ್ದರು.

47

29 ವರ್ಷದ ಟೈಮಲ್ ಮಿಲ್ಸ್‌ ಇಂಗ್ಲೆಂಡ್ ಪರ ಮೊದಲ 4 ಪಂದ್ಯಗಳನ್ನಾಡಿ 7 ವಿಕೆಟ್ ಕಬಳಿಸಿದ್ದರು. ಇದೀಗ ಟೈಮಲ್ ಮಿಲ್ಸ್‌ ಅಲಭ್ಯತೆ ಡೆತ್ ಓವರ್‌ಗಳಲ್ಲಿ ಇಂಗ್ಲೆಂಡ್ ತಂಡವನ್ನು ಕಾಡುವ ಸಾಧ್ಯತೆಯಿದೆ.

57

ಇದೀಗ ಟೈಮಲ್ ಮಿಲ್ಸ್ ಬದಲಿಗೆ ಎಡಗೈ ವೇಗಿ ರೀಸ್ ಟಾಪ್ಲೆ ಅವರನ್ನು ಇಂಗ್ಲೆಂಡ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 

67

ಇಂಗ್ಲೆಂಡ್ ಗ್ರೂಪ್‌ 1ರಲ್ಲಿ ತನ್ನ ಕೊನೆಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡವನ್ನು ಎದುರಿಸಲಿದೆ. ಟೈಮಲ್ ಮಿಲ್ಸ್ ಅನುಪಸ್ಥಿತಿಯಲ್ಲಿ ಇಂಗ್ಲೆಂಡ್ ತಂಡವು ಯಾವ ರೀತಿಯ ಪ್ರದರ್ಶನ ನೀಡಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

77


ಸೂಪರ್ 12 ಹಂತದಲ್ಲಿನ ಪ್ರದರ್ಶನ ಗಮನಿಸಿದರೆ, ಇಂಗ್ಲೆಂಡ್ ತಂಡವು ಫೈನಲ್‌ಗೇರುವ ನೆಚ್ಚಿನ ತಂಡಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಇದರೊಂದಿಗೆ ಇಂಗ್ಲೆಂಡ್ ತಂಡವು ಎರಡನೇ ಟಿ20 ವಿಶ್ವಕಪ್‌ ಮೇಲೆ ಕಣ್ಣಿಟ್ಟಿದೆ.

Read more Photos on
click me!

Recommended Stories