ದಾಖಲೆಗಳು ಇರುವುದೇ ಬ್ರೇಕ್ ಮಾಡುವುದಕ್ಕೆ ಎನ್ನುವ ಮಾತಿದೆ. ಇದೀಗ ಕೆಲವು ವರ್ಷಗಳಿಂದ ಮಾಜಿ ನಾಯಕ ಧೋನಿ ಹೆಸರಿನಲ್ಲಿದ್ದ ದಾಖಲೆಯನ್ನು ಅಳಸಿಹಾಕುವಲ್ಲಿ ಇಂಗ್ಲೆಂಡ್ ಏಕದಿನ ತಂಡದ ನಾಯಕ ಇಯಾನ್ ಮಾರ್ಗನ್ ಯಶಸ್ವಿಯಾಗಿದ್ದಾರೆ.
ಹೌದು, ಐರ್ಲೆಂಡ್ ವಿರುದ್ಧದ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಮಾರ್ಗನ್ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ನಾಯಕ ಎನ್ನುವ ದಾಖಲೆ ಬರೆದರು. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಾಯಕನಾಗಿ ಧೋನಿ 211 ಸಿಕ್ಸರ್ ಬಾರಿಸಿದ್ದರು. ಇದೀಗ ಆ ದಾಖಲೆ ಮಾರ್ಗನ್ ಪಾಲಾಗಿದೆ. ಮೂರು ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿದ ಟಾಪ್ ಆಟಗಾರರ ಪಟ್ಟಿಯನ್ನು ಸುವರ್ಣ ನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ. ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 117 ಸಿಕ್ಸರ್‌ಗಳೊಂದಿಗೆ 11ನೇ ಸ್ಥಾನದಲ್ಲಿದ್ದು, ಮಾರ್ಗನ್ ಹಿಂದಿಕ್ಕುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.