ಬೆಂಗಳೂರು: ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಆರಂಭಕ್ಕೆ ಇನ್ನೊಂದೇ ದಿನ ಬಾಕಿ ಇದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ವಿಶ್ವಕಪ್ ಜ್ವರ ಜೋರಾಗಿದೆ. ಇದೇ ಮೊದಲ ಬಾರಿಗೆ ಸಂಪೂರ್ಣ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸಿದ್ದು, ಅಕ್ಟೋಬರ್ 05ರಂದು ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುವ ಮೂಲಕ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ. ಇದೀಗ ವಿಶ್ವಕಪ್ ಗೆಲ್ಲುವ ತಂಡದ ಬಗ್ಗೆ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಡಂ ಗಿಲ್‌ಕ್ರಿಸ್ಟ್ ಭವಿಷ್ಯ ನುಡಿದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ
27
ಇನ್ನು ವಿಶ್ವಕಪ್ ಟೂರ್ನಿಗೆ ಆತಿಥ್ಯ ವಹಿಸಿರುವ ಭಾರತ ಅಕ್ಟೋಬರ್ 08ರಂದು ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.
37
ಇನ್ನು ಫೈನಲ್ ಪಂದ್ಯವು ನವೆಂಬರ್ 19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಈ ಬಾರಿ ವಿಶ್ವಕಪ್‌ಗೆ ಮುತ್ತಿಕ್ಕುವ ತಂಡ ಯಾವುದು ಎನ್ನುವ ಕುತೂಹಲ ಜೋರಾಗಿದೆ. ಹೀಗಿರುವಾಗಲೇ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಆಡಂ ಗಿಲ್‌ಕ್ರಿಸ್ಟ್ ಭವಿಷ್ಯ ನುಡಿದಿದ್ದಾರೆ.
47
ವಿಶ್ವಕಪ್ ಫೈನಲ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದ್ದು, ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಭಾರತವನ್ನು ಫೈನಲ್‌ನಲ್ಲಿ ಮಣಿಸಿ ವಿಶ್ವಕಪ್ ಎತ್ತಿಹಿಡಿಯಲಿದೆ ಎಂದು ಗಿಲ್ಲಿ ಭವಿಷ್ಯ ನುಡಿದಿದ್ದಾರೆ.
57
ಆಸ್ಟ್ರೇಲಿಯಾದ ಮಾಜಿ ವಿಕೆಟ್ ಕೀಪರ್ ಬ್ಯಾಟರ್ ಗಿಲ್‌ಕ್ರಿಸ್ಟ್ ಪ್ರಕಾರ, ನವೆಂಬರ್ 19ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ನೇತೃತ್ವದ ಕಾಂಗರೂ ಪಡೆ ಆರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
67
"ಏಕದಿನ ವಿಶ್ವಕಪ್ ಟೂರ್ನಿಯ ಈ ಸಂದರ್ಭದಲ್ಲಿ ಎಲ್ಲಾ ತಂಡಗಳಿಗೂ ಆಲ್ ದಿ ಬೆಸ್ಟ್ ಹೇಳುತ್ತಿದ್ದೇನೆ. ವಿಶ್ವಕಪ್ ಕುರಿತಾಗಿ ಸಾಕಷ್ಟು ಒಳ್ಳೆಯ ನೆನಪುಗಳಿವೆ. ನನ್ನ ಪ್ರಕಾರ ಆಸ್ಟ್ರೇಲಿಯಾ ತಂಡವು ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡವನ್ನು ಮಣಿಸಲಿದೆ. ನಿಮ್ಮ ಕಾಮೆಂಟ್‌ಗಳಿಗೆ ಸ್ವಾಗತ" ಎಂದು ಗಿಲ್ಲಿ ಹೇಳಿದ್ದಾರೆ.
77
ಭಾರತ ತಂಡವು 2011ರ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು, ಇನ್ನು 2015ರಲ್ಲಿ ಆಸ್ಟ್ರೇಲಿಯಾ ಹಾಗೂ 2019ರಲ್ಲಿ ಇಂಗ್ಲೆಂಡ್ ವಿಶ್ವಕಪ್ ಟ್ರೋಫಿ ಜಯಿಸಿತ್ತು. ಈ ಬಾರಿ ಯಾವ ತಂಡ ಚಾಂಪಿಯನ್ ಆಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ